HOME » NEWS » State » MNREGA WORK HELPS TO PEOPLE AMID CORONA LOCK DOWN TIME ANLM LG

ಕೋವಿಡ್ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಆಸರೆಯಾದ ಉದ್ಯೋಗ ಖಾತ್ರಿ ಯೋಜನೆ

ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ಮುಂಜಾಗ್ರತೆ ಕ್ರಮ ಅನುಸರಿಸುವ ಮೂಲಕ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗೋಕಟ್ಟೆ ನಿರ್ಮಾಣ, ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ, ಕಲ್ಯಾಣಿ ಸ್ವಚ್ಛತಾ ಕೆಲಸಗಳು ನಡೆಯುತ್ತಿದ್ದು ಸಾವಿರಾರು ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಜನರಿಗೆ ಕೂಲಿ ಸಿಗುವಂತಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.

news18-kannada
Updated:May 18, 2021, 11:10 AM IST
ಕೋವಿಡ್ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಆಸರೆಯಾದ ಉದ್ಯೋಗ ಖಾತ್ರಿ ಯೋಜನೆ
ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ಮುಂಜಾಗ್ರತೆ ಕ್ರಮ ಅನುಸರಿಸುವ ಮೂಲಕ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗೋಕಟ್ಟೆ ನಿರ್ಮಾಣ, ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ, ಕಲ್ಯಾಣಿ ಸ್ವಚ್ಛತಾ ಕೆಲಸಗಳು ನಡೆಯುತ್ತಿದ್ದು ಸಾವಿರಾರು ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಜನರಿಗೆ ಕೂಲಿ ಸಿಗುವಂತಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.
  • Share this:
ಬೆಂಗಳೂರು ಗ್ರಾಮಾಂತರ (ಮೇ 18): ಜಗತ್ತಿನಾದ್ಯಾಂತ ಜನರ ನೆಮ್ಮದಿಯ ನಿದ್ದೆಗೆಡಿಸಿದ ಕೊರೋನಾ ಮಹಾಮಾರಿಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಘೋಷಿಸಿದ ಲಾಕ್‌ಡೌನ್‌ನಿಂದ ಒಪ್ಪತ್ತಿನ ಊಟ ಸಿಗದೆ ತತ್ತರಿಸಿರುವ ಬಡ ಕಾರ್ಮಿಕರ ಬದುಕಿಗೆ ಉದ್ಯೋಗ ಖಾತ್ರಿ ಆಸರೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ  ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಲಿ ಕಾರ್ಮಿಕರೆಲ್ಲರೂ ಉದ್ಯೋಗ ಖಾತ್ರಿ ಕೆಲಸದಲ್ಲಿ ನಿರತರಾಗಿದ್ದು ಸಂತಸದಿಂದ ಕೂಲಿ ಕೆಲಸ ಮಾಡುತ್ತಿದ್ದಾರೆ.

ಕೊರೋನಾ ಮಹಾಮಾರಿಯ ಎರಡನೇ ಅಲೆ ಎಲ್ಲೆಡೆ ಕರಾಳ ಹಸ್ತ ಚಾಚಿದ್ದು, ಸಾವಿರಾರು ಜನರು ಬಲಿಯಾಗಿದ್ದಾರೆ. ಬಡ ಕೂಲಿ ಕಾರ್ಮಿಕ ಕುಟುಂಬಗಳ ದೈನಂದಿನ ಜೀವನಕ್ಕೆ ಕೊಳ್ಳಿ ಇಡುವ ಮೂಲಕ ಸುಮಾರು ಒಂದು ತಿಂಗಳಿನಿಂದ ಕಾರ್ಮಿಕರು ಕೆಲಸವಿಲ್ಲದೇ ಕೂರುವಂತಾಗಿತ್ತು.

ಕಾರ್ಮಿಕರಿಗೆ ಉದ್ಯೋಗ:

ಒಂದು ಕಡೆ ಕೊರೋನಾ ಆತಂಕದಿಂದ ಮನೆಯಿಂದ ಹೊರಬರುವಂತಿಲ್ಲ. ಇನ್ನೊಂದೆಡೆ ಎಲ್ಲೂ ಕೆಲಸ ಸಿಗದಿರುವುದರಿಂದ ಗ್ರಾಮೀಣ ಬಡಕುಟುಂಬಗಳು ತೊಂದರೆಗೆ ಸಿಲುಕುವಂತಾಗಿದೆ. ಈಗ ಸಾಮಾಜಿಕ ಅಂತರ ಕಾಯ್ದುಕೊಂಡು ಅಗತ್ಯ ಮುಂಜಾಗ್ರತೆ ಕ್ರಮ ಅನುಸರಿಸುವ ಮೂಲಕ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗೋಕಟ್ಟೆ ನಿರ್ಮಾಣ, ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ, ಕಲ್ಯಾಣಿ ಸ್ವಚ್ಛತಾ ಕೆಲಸಗಳು ನಡೆಯುತ್ತಿದ್ದು ಸಾವಿರಾರು ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಜನರಿಗೆ ಕೂಲಿ ಸಿಗುವಂತಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.

ಚನ್ನಪಟ್ಟಣದಲ್ಲಿ 3 ಸಾವಿರ ಜನರಿಗೆ ನಿತ್ಯವೂ ಊಟ; ಸಚಿವ ಸಿ.ಪಿ.ಯೋಗೇಶ್ವರ್ ಜನಪರ ಕಾರ್ಯಕ್ಕೆ ಮೆಚ್ಚುಗೆ

ಬಡವರ ಕೈ ಹಿಡಿದ ಸಂಜೀವಿನಿ:

ಎಲ್ಲೆಡೆ ಹರಡುತ್ತಿರುವ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಯಲ್ಲಿರುವ ಅವದಿಯಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಸಮಸ್ಯೆ ಉಂಟಾಗಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಮಹಾತ್ಮ ಗಾಂದಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಉದ್ಯೋಗ ಖಾತ್ರಿ ಯೋಜನೆ ಕೊರೋನಾದಿಂದ ಕಂಗೆಟ್ಟಿರುವ ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಇಂದು ಸಂಜೀವಿನಿಯಂತೆ ಕೈ ಹಿಡಿದಿದೆ.ಕೋವಿಡ್ ನಿಯಮಗಳು ಕಡ್ಡಾಯ:

ಸಾಮಾಜಿಕ ಅಂತರ ಕಾಯ್ದುಕೊಂಡೇ ಕೂಲಿ ಕಾರ್ಮಿಕರು ಕೆಲಸವನ್ನು ಆರಂಭಿಸಿದ್ದಾರೆ. ಕೊರೋನಾ ಮುನ್ನೆಚರಿಕೆ ಕ್ರಮಗಳನ್ನು ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಅನುಸರಿಸಲಾಗುತ್ತಿದೆ. ಕಾಮಗಾರಿ ಸ್ಥಳದಲ್ಲಿ ಸ್ಯಾನಿಟೈಜರ್, ಕೈ ತೊಳೆಯಲು ನೀರಿನ ವ್ಯವಸ್ಥೆ ಮಾಡಲಾಗಿದೆ. ಕಾರ್ಮಿಕರು ಕಡ್ಡಾಯ ಮಾಸ್ಕ್ ಧರಿಸುವಂತೆ ತಿಳಿಸಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಡೆಸುವುದನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ. ಇದರಿಂದ ಆತಂಕವಿಲ್ಲದೇ ಕೆಲಸ ನಿರ್ವಹಿಸಲು ಕಾರ್ಮಿಕರಿಗೆ ಅನುಕೂಲವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋರೋನಾ ಸಂಕಷ್ಟದಲ್ಲಿದ್ದವರಿಗೆ ಉದ್ಯೋಗಖಾತ್ರಿ ಯೋಜನೆಯ ಮೂಲಕ ಕೆಲಸಕ್ಕೆ ಬರುತ್ತಿದ್ದಾರೆ. ಇದರಿಂದ ಕೂಲಿ ಕಾರ್ಮಿಕರಿಗೆ ಸಹಾಯವಾಗಿದೆ. ಕಾರ್ಮಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ನೆಲಮಂಗಲ ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಪದ್ಮನಾಭ್ ತಿಳಿಸಿದರು.
Youtube Video

ಕೊರೋನಾದಿಂದ ಕೆಲಸವಿಲ್ಲದೆ ಒಪ್ಪೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಇದೀಗ ಗ್ರಾಮ ಪಂಚಾಯ್ತಿ ಮುಖಾಂತರ ಗೋಕಟ್ಟೆ ನಿರ್ಮಾಣದ ಕೆಲಸಕ್ಕೆ ಬರುತ್ತಿದ್ದು ಕೆಲಸ ಸಿಕ್ಕಿದ್ದು ಹೇಗೋ ಕೋರೋನಾ ಮುಗಿಯುವವರೆಗೂ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಕೂಲಿ ಕಾರ್ಮಿಕ ರಾಮಯ್ಯ ತಮ್ಮ‌ ಅನುಭವ ಹಂಚಿಕೊಂಡರು.
Published by: Latha CG
First published: May 18, 2021, 11:10 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories