ಮೋದಿ ಕರ್ನಾಟಕಕ್ಕೆ ಬಂದು ಸ್ಪರ್ಧಿಸಲಿ; ಪ್ರಧಾನಿಗೆ ಸಿದ್ದರಾಮಯ್ಯ ಸವಾಲು

ಮೈತ್ರಿ ನಾಯಕರು ಆಪರೇಷನ್​ ಕಮಲ ವಿರೋಧಿಸಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ಧಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Latha CG | news18
Updated:February 11, 2019, 11:17 AM IST
ಮೋದಿ ಕರ್ನಾಟಕಕ್ಕೆ ಬಂದು ಸ್ಪರ್ಧಿಸಲಿ; ಪ್ರಧಾನಿಗೆ ಸಿದ್ದರಾಮಯ್ಯ ಸವಾಲು
ಸಿದ್ದರಾಮಯ್ಯ
Latha CG | news18
Updated: February 11, 2019, 11:17 AM IST
ಹುಬ್ಬಳ್ಳಿ,(ಫೆ.11): ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡಕ್ಕಿಳಿಯಲು ರಾಜಕೀಯ ಪಕ್ಷಗಳು ಬಾರೀ ಸಿದ್ಧತೆ ಮಾಡಿಕೊಳ್ಳುತ್ತವೆ. ಜೆಡಿಎಸ್​-ಕಾಂಗ್ರೆಸ್​ ಮೈತ್ರಿಯಾಗಿ ಚುನಾವಣೆಗೆ ಸ್ಪರ್ಧಿಸುವುದರಿಂದ ಕಮಲ ಪಾಳಯದಲ್ಲಿ ಬಿಜೆಪಿ ನಾಯಕರು ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಬಿಜೆಪಿ ಆಪರೇಷನ್ ಕಮಲ ತಂತ್ರದಿಂದ ಸಮ್ಮಿಶ್ರ ಸರ್ಕಾರ ಬೀಳಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರೆ, ಮೈತ್ರಿ ನಾಯಕರು ಪ್ರತಿತಂತ್ರ ರೂಪಿಸಿ ಆಪರೇಷನ್​ ಕಮಲದ ಆಡಿಯೋ ತುಣುಕೊಂದನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ.

ಬಿಜೆಪಿಯನ್ನು ದೂರವಿಡುವ ಉದ್ದೇಶದಿಂದಲೇ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್​​-ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಮಣಿಸಲು ತಯಾರಿ ನಡೆಸುತ್ತಿದೆ. ಮೈತ್ರಿ ನಾಯಕರು ಆಪರೇಷನ್​ ಕಮಲ ವಿರೋಧಿಸಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ಧಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ಸ್ಪರ್ಧಿಸಲಿ ಎಂದು ಸವಾಲೆಸೆದಿದ್ಧಾರೆ. 22 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ಗೆದ್ದು ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿದ ಅವರು, ಪ್ರಧಾನಿ ಮೋದಿಯವರು ಬರೀ ಸುಳ್ಳು ಹೇಳುತ್ತಾರೆ. ಬಿಜೆಪಿ ನಾಯಕರು ಮೈತ್ರಿ ಸರ್ಕಾರ ರೈತರ ಸಾಲ ಮಾಡಿಲ್ಲ ಎಂದು ಟೀಕಿಸುತ್ತಿದ್ದಾರೆ. ಆದರೆ ಮೋದಿ ಏಕೆ ಇನ್ನೂ ರೈತರ ಸಾಲಮನ್ನಾ ಮಾಡಿಲ್ಲ ಎಂದು  ಪ್ರಶ್ನಿಸಿದರು. ಪ್ರಧಾನಿಗೆ ಸುಳ್ಳು ಹೇಳೋದು ಬಿಟ್ಟು ಬೇರೆ ಗೊತ್ತಿಲ್ಲ. ಸಾಲಮನ್ನಾಗೆ ಎರಡು ಬಾರಿ ನಿಯೋಗ ಹೋಗಿದೆ. ಕೇಂದ್ರ ಇದುವರೆಗೆ ರೈತರ ಸಾಲಮನ್ನಾ ಮಾಡಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ ಅತೃಪ್ತರಿಗೆ ಆಪತ್ತು; ನಾಲ್ವರು ರೆಬೆಲ್ ಶಾಸಕರ ಅನರ್ಹತೆಗೆ ಕೋರಿ ಸಿದ್ದರಾಮಯ್ಯ ದೂರು

ಇನ್ನು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪನವರ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕುಮಾರಸ್ವಾಮಿ ನನ್ನ ಮೇಲೆ ಮಾಡಿರುವ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದಿದ್ದ ಬಿಎಸ್​ವೈ ಕೊಟ್ಟ ಮಾತಿನಂತೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ನಿನ್ನೆ ಕರ್ನಾಟಕಕ್ಕೆ ಆಗಮಿಸಿದ್ದ ಮೋದಿ ಹುಬ್ಬಳ್ಳಿಯಲ್ಲಿ ರಣಕಹಳೆ ಮೊಳಗಿಸಿ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಪಕ್ಷದ ಕಾರ್ಯಚಟುವಟಿಕೆಗಳು ಚುರುಕುಗೊಂಡಿದ್ದು, ಮೈತ್ರಿ ಪಕ್ಷಗಳನ್ನು ಮಣಿಸಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.

First published:February 11, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...