Karnataka Rain: ಕರ್ನಾಟಕದಲ್ಲಿ ಇನ್ನೈದು ದಿನ ಭಾರೀ ಮಳೆ; ಮಲೆನಾಡು, ಕರಾವಳಿ, ಕೊಡಗು, ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್​

Karnataka Weather: ಇಂದಿನಿಂದ 5 ದಿನಗಳ ಕಾಲ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

Sushma Chakre | news18-kannada
Updated:July 6, 2020, 9:39 AM IST
Karnataka Rain: ಕರ್ನಾಟಕದಲ್ಲಿ ಇನ್ನೈದು ದಿನ ಭಾರೀ ಮಳೆ; ಮಲೆನಾಡು, ಕರಾವಳಿ, ಕೊಡಗು, ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್​
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ (ಫೋಟೋ- ಟ್ವಿಟ್ಟರ್​)
  • Share this:
ಬೆಂಗಳೂರು (ಜು. 6): ಕರ್ನಾಟಕದಾದ್ಯಂತ ಮಳೆಗಾಲದ ಅಬ್ಬರ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಮತ್ತು ಮಲೆನಾಡಿನ ಭಾಗದಲ್ಲಿ ಮಾನ್ಸೂನ್ ಚುರುಕುಗೊಂಡಿದೆ. ಹೀಗಾಗಿ, ಇಂದಿನಿಂದ 5 ದಿನಗಳ ಕಾಲ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಅರಬ್ಬಿ ಸಮುದ್ರದಿಂದ ಕರ್ನಾಟಕದ ಕರಾವಳಿಯೆಡೆಗೆ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸತೊಡಗಿದೆ. ಇದರಿಂದ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರಿನಲ್ಲಿ ಭಾನುವಾರ ಸುರಿದ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ, ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉಡುಪಿಯಲ್ಲೂ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರಿನಲ್ಲೂ ಮಳೆ ಹೆಚ್ಚಾಗಿದೆ.
ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಳಸದಲ್ಲಿಯೂ ಮಳೆ ಹೆಚ್ಚಾಗಿದೆ. ಚಾರ್ಮಾಡಿ ಘಾಟ್​ನ ತೊರೆಗಳು, ಕಾಫಿನಾಡಿನ ಜಲಪಾತಗಳು ಮರುಜೀವ ಪಡೆದುಕೊಂಡಿವೆ. ಮಳೆಯಿಂದಾಗಿ ಈ ಭಾಗದ ಪ್ರಮುಖ ನದಿಗಳಾದ ತುಂಗಾ, ಭದ್ರಾ, ಹೇಮಾವತಿ, ವರಾಹಿ ತುಂಬಿ ಹರಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟ, ಹೊನ್ನಾವರ, ಅಂಕೋಲದಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದೆ. ಕೊಡಗಿನಲ್ಲಿಯೂ ಮಳೆಗಾಲ ಬಿರುಸು ಪಡೆದುಕೊಂಡಿದೆ.ಇದನ್ನೂ ಓದಿ: ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ...

ಉತ್ತರ ಕರ್ನಾಟಕದಲ್ಲಿಯೂ ಬೆಳಗಾವಿ, ದಾವಣಗೆರೆ, ಧಾರವಾಡ, ಬಳ್ಳಾರಿ ಮುಂತಾದ ಕಡೆಗಳಲ್ಲಿ ಮಳೆಯಾಗಿದೆ. ಇಂದು ಬೆಳಗ್ಗೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ಇನ್ನು ಕೆಲವೆಡೆ ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದೆ. ಜೂನ್​ನಲ್ಲೇ ಆರಂಭವಾಗಬೇಕಿದ್ದ ಮಳೆಗಾಲ ಒಂದು ತಿಂಗಳು ತಡವಾಗಿ ಕರ್ನಾಟಕಕ್ಕೆ ಕಾಲಿಟ್ಟಿದೆ. ಇಂದು ಬೆಂಗಳೂರಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಇಂದು ಯಾವ ಜಿಲ್ಲೆಯಲ್ಲಿ ಯಾವ ರೀತಿಯ ವಾತಾವರಣವಿದೆ ಎಂಬುದಕ್ಕೆ ಇಲ್ಲಿದೆ ಮಾಹಿತಿ...
ಬೆಂಗಳೂರು- ಮೋಡ ಕವಿದ ವಾತಾವರಣ
ಉಡುಪಿ- ತುಂತುರು ಮಳೆ
ದಕ್ಷಿಣ ಕನ್ನಡ- ತುಂತುರು ಮಳೆ
ಕೋಲಾರ- ಮೋಡ ಕವಿದ ವಾತಾವರಣ
ಕಲಬುರ್ಗಿ- ಮೋಡ ಕವಿದ ವಾತಾವರಣ
ವಿಜಯಪುರ- ಮೋಡ ಕವಿದ ವಾತಾವರಣ
ಬಾಗಲಕೋಟೆ- ಮೋಡ ಕವಿದ ವಾತಾವರಣ
ಧಾರವಾಡ- ಮೋಡ ಕವಿದ ವಾತಾವರಣ
ರಾಯಚೂರು- ಮೋಡ ಕವಿದ ವಾತಾವರಣ
ಗದಗ- ಮೋಡ ಕವಿದ ವಾತಾವರಣ
ಹುಬ್ಬಳ್ಳಿ- ಮೋಡ ಕವಿದ ವಾತಾವರಣ
Published by: Sushma Chakre
First published: July 6, 2020, 9:36 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading