Karnataka Weather Today: ಬೆಂಗಳೂರಿನಲ್ಲಿ ಇಂದು ಭಾರೀ ಮಳೆ ಸಾಧ್ಯತೆ- ಆಂಧ್ರದಲ್ಲಿ ಗುಲಾಬ್ ಚಂಡಮಾರುತ ಆರ್ಭಟ..

Rainfall: ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕಳೆದ 2 ದಿನಗಳಿಂದ ಭಾರೀ ಮಳೆಯಾಗುತಿತ್ತು, ಆದರೆ ನಿನ್ನೆ ಕೊಂಚ ಬಿಡುವು ಪಡೆದ ಹಾಗಿತ್ತು. ನಗರದ ಕೆಲ ಭಾಗಗಳಲ್ಲಿ ಮಳೆಯಾಗಿದ್ದು, ಇನ್ನು ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿತ್ತು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today: ಬೆಂಗಳೂರು(ಸೆ.27):ಕರ್ನಾಟಕದಲ್ಲಿ ಮತ್ತೆ ಮಳೆಯ(Rainfall) ಆರ್ಭಟ ಜೋರಾಗಿದ್ದು, ಇನ್ನು ಕೆಲ ದಿನಗಳ ತನಕ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ  ಹವಾಮಾನ ಇಲಾಖೆ(IMD) ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿನ ಚಂಡ ಮಾರುತ ಹಾಗೂ ಮುಂಗಾರು(Monsoon) ಚುರುಕುಗೊಂಡ ಪ್ರಭಾವ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ  ಎರಡು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್ ಜೈಸಲ್ಮೇರ್, ಕೋಟ, ರಾಯ್ಪುರ್, ಪುರಿ ಮತ್ತು ನಂತರ ಪೂರ್ವ-ಆಗ್ನೇಯ ದಿಕ್ಕಿನಲ್ಲಿ ಗುಲಾಬ್ ಚಂಡಮಾರುತದ ಕೇಂದ್ರದ ಕಡೆಗೆ ಹಾದು ಹೋಗುತ್ತಿದೆ. ಮಧ್ಯ ಮಧ್ಯಪ್ರದೇಶದ ಉತ್ತರ ಭಾಗಗಳಲ್ಲಿ ಚಂಡಮಾರುತದ ಪರಿಚಲನೆ ಮುಂದುವರಿದಿದೆ ಎಂದು ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕಳೆದ 2 ದಿನಗಳಿಂದ ಭಾರೀ ಮಳೆಯಾಗುತಿತ್ತು, ಆದರೆ ನಿನ್ನೆ ಕೊಂಚ ಬಿಡುವು ಪಡೆದ ಹಾಗಿತ್ತು. ನಗರದ ಕೆಲ ಭಾಗಗಳಲ್ಲಿ ಮಳೆಯಾಗಿದ್ದು, ಇನ್ನು ಕೆಲ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿತ್ತು.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಾಗಲಿದೆ ವರುಣನ ಆರ್ಭಟ- ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..

ಇಂದು  ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು,  ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬೀದರ್,ಚಿತ್ರದುರ್ಗ, ದಾವಣಗರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ನೈಋತ್ಯ ಮುಂಗಾರು ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ಭಾರೀ ಮಳೆಗೆ ಕಾರಣವಾಗುತ್ತದೆ. ಆದರೆ ಈ ಬಾರಿ ಮುಂಗಾರು ಇನ್ನೂ 10 ದಿನಗಳ ಕಾಲ ಮಂದುವರೆಯಬಹುದು ಎಂದು ಇಲಾಖೆ ತಿಳಿಸಿದೆ.  ಮಹಾರಾಷ್ಟ್ರದಲ್ಲಿಯೂ ಮಳೆ ಸುರಿದ ಕಾರಣ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿತ್ತು. ಈಗ ಮುಂಗಾರು ಚುರುಕುಗೊಂಡಿದ್ದು, ಮಳೆಯ ಎಚ್ಚರಿಕೆ ಕೊಡಲಾಗಿದೆ.

ಈಗಾಗಲೇ ಬಂಗಾಳ ಕೊಲ್ಲಿಗೆ ಗುಲಾಬ್ ಚಂಡ ಮಾರುತ ಅಪ್ಪಳಿಸಿದ್ದು, ವಿವಿಧ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ 24 ಗಂಟೆ ಎಲ್ಲೆಲ್ಲಿ ಮಳೆ ? 

ಮುಂದಿನ 24 ಗಂಟೆಗಳಲ್ಲಿ, ಕರಾವಳಿಯ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳಗಿನ ಒಡಿಶಾ, ಛತ್ತೀಸ್‌ಗಢದ ಕೆಲವು ಭಾಗಗಳು, ವಿದರ್ಭ, ಮರಾಠವಾಡ, ತೆಲಂಗಾಣ, ಮಧ್ಯಪ್ರದೇಶದ ಕೆಲವು ಭಾಗಗಳು, ಆಗ್ನೇಯ ರಾಜಸ್ಥಾನ ಮತ್ತು ಗುಜರಾತ್, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಲಾಬ್ ಚಂಡ ಮಾರುತದ ಪರಿಣಾಮ ಮಳೆಯಾಗುವ ನಿರೀಕ್ಷೆ ಇದ್ದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಲಕ್ಷದ್ವೀಪ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಸಹ ಮಳೆಯಾಗುವ ಸೂಚನೆಯಲ್ಲಿ ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕರ ತಿಳಿಸಿದ್ದಾರೆ. ಕಳೆದ ಜೂನ್-ಜುಲೈ ತಿಂಗಳಲ್ಲಿ ಅಬ್ಬರಿಸಿದ್ದ ಮಳೆರಾಯ, ಆಗಸ್ಟ್​ ತಿಂಗಳಲ್ಲಿ ಕೊಂಚ ವಿರಾಮ ನೀಡಿದ್ದ. ಈಗ ಮತ್ತೆ ಸೆಪ್ಟೆಂಬರ್ ಪ್ರಾರಂಭದಿಂದಲೇ ಮಳೆರಾಯನ ಅಬ್ಬರ ಜೋರಾಗಿದ್ದು, ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Published by:Sandhya M
First published: