Karnataka Weather Today: ಅಕ್ಟೋಬರ್ 6 ರ ವೇಳೆಗೆ ಮುಂಗಾರು ಮುಕ್ತಾಯ ಸಾಧ್ಯತೆ- ರಾಜ್ಯದಲ್ಲಿ ಇನ್ನೆರೆಡು ದಿನ ಭಾರೀ ಮಳೆ ..

Rainfall: ಕರಾವಳಿ ಕರ್ನಾಟಕ ,ಉತ್ತರ ಪ್ರದೇಶ, ಮಧ್ಯಪ್ರದೇಶ, ಒಡಿಶಾ, ವಿದರ್ಭ, ಒಳ ಕರ್ನಾಟಕ, ರಾಯಲಸೀಮಾ, , ಕೊಂಕಣ ಮತ್ತು ಗೋವಾ, ಲಕ್ಷದ್ವೀಪ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಇಲಾಖೆ ಹೇಳಿದೆ. .

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(ಅ.01):ಬಂಗಾಳ ಕೊಲ್ಲಿಯಲ್ಲಿ(Bay of Bengal) ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಹಾಗೂ ಗುಲಾಬ್ಚಂಡಮಾರುತದ(Cyclone Gulab) ಪ್ರಭಾವದಿಂದಾಗಿ ದೇಶದ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ(Rainfall)ಯಾಗುತ್ತಿದೆ. ಗುಲಾಬ್ ದುರ್ಬಲಗೊಂಡ ಬಳಿಕ ನಿನ್ನೆ ಶಾಹೀನ್ಚಂಡಮಾರುತ(Cyclone Shaheen)  ಅಪ್ಪಳಿಸಿದ್ದು ಇನ್ನೆರೆಡು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ  ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಹೀಗಾಗಿ ಕರ್ನಾಟಕದಲ್ಲಿ(Karnataka Rains) ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಶಾಹೀನ್ ಚಂಡಮಾರುತ ರಾಜ್ಯದ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿ(Coastal)  ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಅಲರ್ಟ್ ಘೊಷನೆ ಮಾಡಲಾಗಿದೆ ಎಂದು  ಹವಾಮಾನ ಇಲಾಖೆ  ಎಚ್ಚರಿಕೆ ನೀಡಿದೆ.

 ಮುಂಗಾರು  ಜೈಸಲ್ಮೇರ್, ಉದೈಪುರ್, ಇಂದೋರ್, ಜಗದಲ್ಪುರ್ ಮತ್ತು ಪೂರ್ವ ಆಗ್ನೇಯ ದಿಕ್ಕಿನಲ್ಲಿ ಪೂರ್ವ ಮಧ್ಯ ಬಂಗಾಳ ಕೊಲ್ಲಿಯವರೆಗೆ ಹಾದು ಹೋಗುತ್ತಿದೆ ಶಾಹೀನ್ ಚಂಡಮಾರುತ ಅರಬ್ಬಿ ಸಮುದ್ರಕ್ಕೆ ಅಪ್ಪಳಿಸಿದೆ.  ಅಕ್ಟೋಬರ್ 6ರ ವೇಳೆಗೆ ಮುಂಗಾರು ಅಂತ್ಯವಾಗಬಹುದು ಎಂದು ಅಂದಾಜಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಹಾವೇರಿ, ರಾಯಚೂರು, ಬೆಳಗಾವಿ, ಕೊಪ್ಪಳ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಕಲಬರುಗಿ, ಬೀದರ್‌, ಬೆಂಗಳೂರು ಜಿಲ್ಲೆಗಳ ಕೆಲವು ಕಡೆ ಮುಂದಿನ  ಎರಡು ದಿನಗಳ ಕಾಲ  ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ..!

ಈ ಮಧ್ಯೆ ಈ ಬಾರಿ ಮುಂಗಾರು ಅವಧಿಯಲ್ಲಿ, ಅಂದರೆ ಜೂನ್ ತಿಂಗಳಿನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಟ್ಟದ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ದೇಶದ ದಕ್ಷಿಣ ರಾಜ್ಯಗಳಲ್ಲಿ ಈಶಾನ್ಯ ಮುಂಗಾರು ಅವಧಿಯಲ್ಲಿ ಕೂಡ ಸಾಮಾನ್ಯ ಮಳೆ ದಾಖಲಾಗಲಿದೆ ಎಂದು ಸಹ ಹೇಳಿದೆ.

ಅಕ್ಟೋಬರ್ 6ರ ವೇಳೆಗೆ ದೇಶದ ವಾಯವ್ಯ ಭಾಗದಲ್ಲಿ ನೈಋತ್ಯ ಮುಂಗಾರು ಕೊನೆಯಾಗಲು ಹವಾಮಾನ ಪರಿಸ್ಥಿತಿ ಸರಿಯಿರುತ್ತದೆ, ಆದರೂ ಕೂಡ ಶಾಹೀನ್ ಪರಿಣಾಮವಾಗಿ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಬಹುದು ಎಂದು ಇಲಾಖೆ ತಿಳಿಸಿದೆ.

ಮುಂದಿನ 24 ಗಂಟೆಗಳಲ್ಲಿ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್‌ನ ಕೆಲವು ಭಾಗಗಳು, ಛತ್ತೀಸ್‌ಗಢ, ತಮಿಳುನಾಡು ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕ ,ಉತ್ತರ ಪ್ರದೇಶ, ಮಧ್ಯಪ್ರದೇಶ, ಒಡಿಶಾ, ವಿದರ್ಭ, ಒಳ ಕರ್ನಾಟಕ, ರಾಯಲಸೀಮಾ, , ಕೊಂಕಣ ಮತ್ತು ಗೋವಾ, ಲಕ್ಷದ್ವೀಪ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಇಲಾಖೆ ಹೇಳಿದೆ. .

ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡು,  ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ರಾಜಸ್ಥಾನದ ಪ್ರತ್ಯೇಕ ಭಾಗಗಳಲ್ಲಿ ಸಹ ಚಂಡಮಾರುತ ಪ್ರಭಾವ ಹೆಚ್ಚಿರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಇಂದು ಅಪ್ಪಳಿಸಲಿದೆ ಶಾಹೀನ್ ಚಂಡಮಾರುತ; ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕರ ತಿಳಿಸಿದ್ದಾರೆ. ಕಳೆದ ಜೂನ್-ಜುಲೈ ತಿಂಗಳಲ್ಲಿ ಅಬ್ಬರಿಸಿದ್ದ ಮಳೆರಾಯ, ಆಗಸ್ಟ್​ ತಿಂಗಳಲ್ಲಿ ಕೊಂಚ ವಿರಾಮ ನೀಡಿದ್ದ. ಈಗ ಮತ್ತೆ ಸೆಪ್ಟೆಂಬರ್ ಪ್ರಾರಂಭದಿಂದಲೇ ಮಳೆರಾಯನ ಅಬ್ಬರ ಜೋರಾಗಿದ್ದು, ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Published by:Sandhya M
First published: