ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಕೋವಿಡ್ ಲಸಿಕೆ ಪಡೆಯಿರಿ; ಆರೋಗ್ಯ ಸಚಿವ ಕೆ.ಸುಧಾಕರ್ ಮನವಿ

ಕೊರೋನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮ ನಡೆಸಲಾಗುತ್ತಿದೆ. ಕೋವಿಡ್ ಲಸಿಕೆ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಕೊರೋನಾ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನರ ಮಿತಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಡ್ಡಾಯ ಎಂದರು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು (ಮಾರ್ಚ್ 22, ಸೋಮವಾರ): ಕೋವಿಡ್ ಎರಡನೇ ಅಲೆ ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಆದರೆ ಸೆಮಿ ಲಾಕ್ ಡೌನ್ ಅಥವಾ ಲಾಕ್ ಡೌನ್ ಇಂದಿನ ಪರಿಸ್ಥಿತಿಗೆ ಅನ್ವಯವಾಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಹಾರಾಷ್ಟ್ರ, ಕೇರಳ ಗಡಿಭಾಗಗಳಿಂದ ಬರುವ ಜನರ ಮೇಲೆ ತೀವ್ರ ನಿಗಾ ಇರಿಸುವುದು, ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೇ ಬಿಡದಿರುವುದು ಅಥವಾ ಅಲ್ಲೇ ಪರೀಕ್ಷೆ ಮಾಡುವುದು, ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದು, ಹೆಚ್ಚು ಅರಿವು ಮೂಡಿಸುವುದು ಎನ್ನುವ ವಿಷಯಗಳ ಬಗ್ಗೆ ಆರೋಗ್ಯ ಇಲಾಖೆಯ ಸಭೆಯಲ್ಲಿ ಚರ್ಚೆಯಾಗಿದೆ. ಜನರು ಆದಷ್ಟು ಬೇಗ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಲಸಿಕೆ ಪಡೆಯುವಂತೆ ಮಾಡಬೇಕಿದೆ ಎಂದರು.

  ಗಡಿಭಾಗಗಳಲ್ಲಿ ಕ್ರಮ ವಹಿಸಲು ಗೃಹ ಇಲಾಖೆಯ ಸಹಯೋಗ ಬೇಕಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು ಈಗಾಗಲೇ ಸಭೆ ನಡೆಸಿದ್ದಾರೆ. ಸೆಮಿ ಲಾಕ್ ಡೌನ್ ಅಥವಾ ಲಾಕ್ ಡೌನ್ ಎಲ್ಲ ಇಂದಿನ ಪರಿಸ್ಥಿತಿಗೆ ಅನ್ವಯವಾಗಲ್ಲ. ಹಿಂದಿನ ತಪ್ಪುಗಳನ್ನು ನೋಡಿಕೊಂಡು ಈಗ ಸರಿಪಡಿಸಿಕೊಳ್ಳಬೇಕಿದೆ ಎಂದರು.

  ಮದುವೆ ಸಮಾರಂಭಗಳಲ್ಲಿ ನಿಗದಿಪಡಿಸಿದ ಮಿತಿ, ಸಾಮಾಜಿಕ ಅಂತರ, ಮಾಸ್ಕ್ ಧರಿಸುವ ಕ್ರಮ ಅನುಸರಿಸಬೇಕು. ಇಲ್ಲದಿದ್ದರೆ ಮಾಲೀಕರ ಮೇಲೆ, ಆಯೋಜಕರ ಮೇಲೆ ದಂಡ ವಿಧಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಭೌತಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿ, ಸೋಂಕಿತರ ಪ್ರಮಾಣ ಹೆಚ್ಚಿದ್ದರೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ, ಮುಂದಿನ ಕ್ರಮ ವಹಿಸಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದರು.

  ಇದನ್ನು ಓದಿ: ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಂಡಂತಾಯಿತು ಸ್ಟೇ ತಂದ 6 ಸಚಿವರ ಪರಿಸ್ಥಿತಿ; ಸದನದಲ್ಲಿ ಸಿದ್ದರಾಮಯ್ಯ ಟೀಕೆ

  ಬೆಂಗಳೂರಿನಲ್ಲಿ ಈ ವಾರದಿಂದಲೇ ಮೂರು ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು. ಇವೆಲ್ಲ ಕ್ರಮಗಳಿಂದ ಕೋವಿಡ್ ನಿಯಂತ್ರಣಕ್ಕೆ ಬರಲಿದೆ.  ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರಂಭಗೊಂಡಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಲಾಗಿದೆ. ಮಾಸ್ಕ್​ ಬಳಕೆ ಕಡ್ಡಾಯವಾಗಿದೆ. ಮಾಸ್ಕ್​ ಹಾದಿದ್ದರೇ 250 ರೂ ದಂಡ ಹಾಕಲಾಗುತ್ತದೆ ಎಂದರು. ಇದೇ ವೇಳೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಲಾಕ್​ಡೌನ್​ ಬಗ್ಗೆಗಿನ ಸುಳ್ಳು ಸುದ್ದಿಗೆ ಕಿವಿಗೊಡಬಾರದು. ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಲಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

  ಕೊರೋನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮ ನಡೆಸಲಾಗುತ್ತಿದೆ. ಕೋವಿಡ್ ಲಸಿಕೆ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಕೊರೋನಾ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನರ ಮಿತಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಡ್ಡಾಯ. ರಾಜ್ಯದಲ್ಲಿ ಕೋವಿಡ್​ ಲಸಿಕೆ ವಿತರಣೆ ನಡೆಯುತ್ತಿದ್ದು, ರಾಜ್ಯದಲ್ಲಿ ವ್ಯಾಕ್ಸಿನ್ ವೇಸ್ಟ್ ಆಗುತ್ತಿಲ್ಲ. ಅದಕ್ಕೆ ಅವಕಾಶವೂ ಇಲ್ಲ. ಖಾಸಗಿಯವರೂ ಹಿರಿಯ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್ ಕೊಡುವ ವಿಷಯದಲ್ಲಿ ಅವರೊಂದಿಗೆ ಚರ್ಚಿಸಲಾಗುತ್ತದೆ ಎಂದು ಸಚಿವ ಕೆ.ಸುಧಾಕರ್ ಮಾಹಿತಿ ನೀಡಿದರು.
  Published by:HR Ramesh
  First published: