ಇಂದು ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ. ಭಾರತೀಯರಿಗೆ ಸ್ವಾತಂತ್ರ್ಯ ದೊರೆತ 75ನೇ ವರ್ಷದ ಅಂಗವಾಗಿ ಇಂಡಿಯನ್ಸ್ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ವಿಶ್ವದಾದ್ಯಂತ 1.5 ಕೋಟಿಗೂ ಹೆಚ್ಚು ಭಾರತೀಯರು ಸಾಮಾಜಿಕ ಜಾಲತಾಣಗಳಲ್ಲಿ ರಾಷ್ಟ್ರಗೀತೆ ಹಾಡುವ ತಮ್ಮ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದಾರೆ. 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹಿಂದೆಂದೂ ಮಾಡದ ದಾಖಲೆಯನ್ನು ಸೃಷ್ಟಿಯಾಗಿದೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಇಂದು ಆಚರಿಸಲಾಗುತ್ತಿರುವ ಆಜಾದಿ ಕಾ ಅಮೃತ್ ಮಹೋತ್ಸವದ ಸಂಭ್ರಮದಲ್ಲಿ ಭಾಗಿಯಾಗುವಂತೆ ಆಗಸ್ಟ್ 14 ರಂದು ಸಂಸ್ಕೃತಿ ಸಚಿವಾಲಯ ಘೋಷಿಸಿತ್ತು. ಇದಕ್ಕೆ ಒಂದೇ ದಿನದಲ್ಲಿ ಅಭೂತಪೂರ್ವ ಸ್ಪಂದನೆ ವಿಶ್ವದಾದ್ಯಂತ ವ್ಯಕ್ತವಾಗಿದೆ.
ಪ್ರಪಂಚದಾದ್ಯಂತ ಭಾರತೀಯರು ರಾಷ್ಟ್ರಗೀತೆ ಜನ ಗಣ ಮನ ಹಾಡುವ ವೀಡಿಯೊಗಳನ್ನು ಅಪ್ಲೋಡ್ ಮಾಡಿದ್ದಾರೆ. ಹೊಸ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾದ್ದಾರೆ. ಇದು ಭಾರತದ ಅಂತರ್ಗತ ಏಕತೆ, ಶಕ್ತಿ ಮತ್ತು ಸಾಮರಸ್ಯಕ್ಕೆ ಸಾಕ್ಷಿಯಾಗಿದೆ ಎಂದು ಸಚಿವಾಲಯ ಹೇಳಿದೆ. ವಿಶ್ವದಾದ್ಯಂತ ಭಾರತೀಯರು ಆಗಸ್ಟ್ 15 ರೊಳಗೆ ರಾಷ್ಟ್ರಗೀತೆ ಹಾಡಲು ಮತ್ತು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲು ಸಾಧ್ಯವಾಗುವಂತೆ ಸಂಸ್ಕೃತಿ ಸಚಿವಾಲಯವು ಕಾರ್ಯಕ್ರಮವನ್ನು ರಚಿಸಿತ್ತು. ವಿಡಿಯೋಗಳು ದಾಖಲೆಯ ಸಂಖ್ಯೆಯಲ್ಲಿ ಅಪಲೋಡ್ ಆಗುವ ಮೂಲಕ ರೆಕಾರ್ಡ್ ನಿರ್ಮಿಸಿದೆ.
ಖ್ಯಾತ ಕಲಾವಿದರು, ಪ್ರಖ್ಯಾತ ವಿದ್ವಾಂಸರು, ಉನ್ನತ ನಾಯಕರು, ಹಿರಿಯ ಅಧಿಕಾರಿಗಳು, ಸೈನಿಕರು, ಪ್ರಸಿದ್ಧ ಕ್ರೀಡಾಪಟುಗಳು ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಾರತೀಯರು ಕೂಡ ಒಂದೇ ಧ್ವನಿಯಾಗಿ ರಾಷ್ಟ್ರಗೀತೆಯಲ್ಲಿ ಒಂದಾಗಿದ್ದಾರೆ ಎಂದು ಸಚಿವಾಲಯ ಬಣ್ಣಿಸಿದೆ. ಸಾವಿರಾರು ಮೈಲುಗಳ ದೂರದಲ್ಲಿ, ಮೂಲೆ ಮೂಲೆಗಳಲ್ಲಿರುವ ಭಾರತೀಯರು ರಾಷ್ಟ್ರಗೀತೆಯನ್ನು ಹಾಡಿದಾಗ, ಅವರ ಧ್ವನಿಯು ಭಾರತದ ನೂರ ಮೂವತ್ತಾರು ಕೋಟಿ ನಾಗರಿಕರ ಹೆಮ್ಮೆಯನ್ನು ಸಾರಿದೆ.
ಇದನ್ನೂ ಓದಿ: ಸಿದ್ಧರಾಮಯ್ಯನವರ ಕನಸು ಭಗ್ನವಾಗಲಿದೆ; ಮಡಿಕೇರಿಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವ್ಯಂಗ್ಯ
ಭಾರತೀಯರಿಗೆ ಯಾವುದೇ ಗುರಿಯೂ ಕಷ್ಟಕರವಲ್ಲ ಎಂಬುದಕ್ಕೆ ಒಂದು ದಿನವೇ ಜೀವಂತ ಸಾಕ್ಷಿಯಾಗಿದೆ ಎಂದು ಸಚಿವಾಲಯ ಹೇಳಿದೆ. ರಾಷ್ಟ್ರಗೀತೆ ನಮ್ಮ ಹೆಮ್ಮೆಯ ಸಂಕೇತವಾಗಿದೆ. ರಾಷ್ಟ್ರಗೀತೆ ಹಾಡುವ ಕಾರ್ಯಕ್ರಮವು ಎಲ್ಲರಲ್ಲೂ ಉತ್ಸಾಹವನ್ನು ಸೃಷ್ಟಿಸಿದೆ. ಇಡೀ ವಿಶ್ವಕ್ಕೆ ಭಾರತದ ಬಲವಾದ ಏಕತೆಯ ಸಂದೇಶವನ್ನು ಸಾರಿದೆ ಎಂದು ಸಚಿವಾಲಯ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪು ಕೋಟೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯವನ್ನು ಆಚರಿಸಿದರು. ಭಾರತೀಯರು ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಿದರು. ರಾಷ್ಟ್ರಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ಉಳಿದಿರುವ 20 ತಿಂಗಳಲ್ಲಿ ಎಷ್ಟು ಸಾಧ್ಯವೋ ಅಷ್ಟು ಅಭಿವೃದ್ಧಿ ಕೆಲಸಗಳನ್ನ ಮಾಡುತ್ತೇವೆ. ಇವತ್ತಿನಿಂದ ನವಕರ್ನಾಟಕ ಆಗುತ್ತದೆಂದು ಘೋಷಣೆ ಮಾಡುತ್ತೇವೆ ಎಂದರು. ಸಿಎಂ ಆಗಿ ಕನ್ನಡಿಗರಿಗೆ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಜನರು ಹಾಗೂ ತಮ್ಮ ಹಿರಿಯರಿಗೆ ತಾನು ಚಿರ ಋಣಿಯಾಗಿರುತ್ತೇನೆ. ತನ್ನ ನಮನವನ್ನು ಅಂಬೇಡ್ಕರ್ ಅವರಿಗೆ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ