Chamarajanagar: ಬಿಸಿಯೂಟ ತಿಂದು 100ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬಿಸಿಯೂಟ ತಿಂದ ಬಳಿಕ ಸುಮಾರು 100 ರಿಂದ 120 ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಬಿಸಿಯೂಟ ತಿಂದು ಮಕ್ಕಳು ಅಸ್ವಸ್ಥ

ಬಿಸಿಯೂಟ ತಿಂದು ಮಕ್ಕಳು ಅಸ್ವಸ್ಥ

  • Share this:
ಚಾಮರಾಜನಗರ: ಮಧ್ಯಾಹ್ನ ಬಿಸಿಯೂಟ (Bisiyuta) ಸೇವಿಸಿ ಶಾಲಾ ಮಕ್ಕಳು (Children) ಅಸ್ವಸ್ಥಗೊಂಡಿರೋ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಬಿಸಿಯೂಟ ತಿಂದ ಬಳಿಕ ಸುಮಾರು 100 ರಿಂದ 120 ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಪೋಷಕರು ಹಾಗೂ ಶಿಕ್ಷಕರು (Teacher) ಸೇರಿ ವಿದ್ಯಾರ್ಥಿಗಳನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಊಟ ಮಾಡಿದ ಬಳಿಕ ಚೆನ್ನಾಗಿಯೇ ಇದ್ದ ಮಕ್ಕಳಲ್ಲಿ ಸಂಜೆ 4ರ ಬಳಿಕ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಬಿಸಿಯೂಟ ತಿಂದ ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಬಳಲುತ್ತಿದ್ರು.



ಶಿಕ್ಷಕರ ವಿರುದ್ಧ ನಿರ್ಲಕ್ಷ್ಯದ ಆರೋಪ

ಇನ್ನು ಕೆಲ ತಿಂಗಳ ಹಿಂದಷ್ಟೆ ಇದೇ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿತ್ತು ಇದೀಗ ಮತ್ತೆ ಇಂತಹದ್ದೇ ಉಂಟಾಗಿದೆ. ಇದಕ್ಕೆಲ್ಲಾ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ರಸ್ತೆಯಲ್ಲೇ ಪ್ರತಿಭಟನೆ ನಡೆಸಿದ ಪೋಷಕರು, ಈ ಶಾಲಾ ಶಿಕ್ಷಕರು ಮಕ್ಕಳ ಜೀವದ ಜೊತೆ ಚೆಲ್ಲಾವಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು.

50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ರು

ಬಿಸಿಯೂಟ  ಸೇವಿಸಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು  ಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗದ ಇಸಾಮುದ್ರ ಗೊಲ್ಲರಹಟ್ಟಿ  ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ‌ ನಡೆದಿದೆ. ವಾಂತಿ, ಭೇದಿಯಿಂದ ಅಸ್ವಸ್ಥಗೊಂಡವರನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Murder Case: ಚಿಕನ್​ ಅಂಗಡಿ ತೆರೆದಿದ್ದೇ ಕೊಲೆಗೆ ಕಾರಣವಾಯ್ತಾ? ಪ್ರವೀಣ್​ ಸಹೋದರನ ಸ್ಫೋಟಕ ಹೇಳಿಕೆ

ಅನ್ನ, ಸಾಂಬಾರ್ ಊಟ ಮಾಡಿದ್ದ ಮಕ್ಕಳು


ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಚಿತ್ರದುರ್ಗ ತಹಶೀಲ್ದಾರ್ ಸತ್ಯ ನಾರಾಯಣ್, ಬಿಇಒ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಶಾಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದಾವಣಗೆರೆ FSL  ಪ್ರಯೋಗಾಲಯಕ್ಕೆ ಮಧ್ಯಾಹ್ನದ ಊಟದ ಸ್ಯಾಂಪಲ್ ರವಾನೆ ಮಾಡಲಾಗಿದೆ.

ಕಲಬುರ್ಗಿಯಲ್ಲಿ ಈ ಹಿಂದೆ ಅಸ್ವಸ್ವರಾಗಿದ್ದ ವಿದ್ಯಾರ್ಥಿಗಳು

ಕಲಬುರ್ಗಿಯಲ್ಲೂ ಇಂತಹದ್ದೆ ಘಟನೆ ನಡೆದಿತ್ತು. ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ  ಸೇಡಂ ತಾಲೂಕಿನ ಶಿಲಾರಕೋಟ ಗ್ರಾಮದಲ್ಲಿ  ನಡೆದಿತ್ತು. ಶಿಲಾರಕೋಟ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ ವಿದ್ಯಾರ್ಥಿಗಳು, ಸಂಜೆ ವೇಳೆಗೆ ವಾಂತಿ-ಬೇಧಿ ಮಾಡಿಕೊಳ್ಳ ಆರಂಭಿಸಿದ್ದರು. ವಿದ್ಯಾರ್ಥಿಗಳು ವಾಂತಿ-ಬೇಧಿ ಮಾಡಿಕೊಳ್ಳೋದನ್ನು ನೋಡಿ ಗಾಬರಿಗೊಂಡ ಶಿಕ್ಷಕರು, ಪೋಷಕರು ತಕ್ಷಣ ಮುಧೋಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು

ಇದನ್ನೂ ಓದಿ: Dakshina Kannada: 4 ತಾಲೂಕಿನಲ್ಲಿ 144 ಸೆಕ್ಷನ್​ ಮುಂದುವರಿಕೆ; 3 ದಿನ ಮದ್ಯ ಮಾರಾಟ ಬಂದ್​

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ

ಹಾವೇರಿ: ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದ ಸರ್ಕಾರಿ ಶಾಲೆಯ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದರು. ಊಟ ಮಾಡಿದ ಮಾಡಿದ ಬಳಿಕ 80ಕ್ಕೂ ಹೆಚ್ಚು ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಮಕ್ಕಳಿಗೆ ಶಾಲೆಯಲ್ಲಿ ಮಾಡಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದು ನಂತರ ತಿಳಿದು ಬಂದಿದೆ. ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ವಾಂತಿ ಭೇದಿಯಿಂದ 80ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದರು

ಅಸ್ವಸ್ಥ ಮಕ್ಕಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಸ್ವಸ್ಥಗೊಂಡ ಮಕ್ಕಳು ಅಪಾಯದಿಂದ ಪಾರಾಗಿದ್ದರು ಆಸ್ಪತ್ರೆಗೆ ಡಿಡಿಪಿಐ ಅಂದಾನಪ್ಪ ವಡಗೇರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲಾ ಬಾಲಕನೊಬ್ಬನ ತಟ್ಟೆಗೆ ಬಡಿಸಿದ ಊಟದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು. ಬಳಿಕ, ಬಾಲಕನಿಗೆ ವಾಂತಿ ಕಾಣಿಸಿಕೊಂಡಿತ್ತು. ಒಬ್ಬ ಬಾಲಕನಿಗೆ ವಾಂತಿ ಆಗ್ತಿದ್ದಂತೆ ಗಾಬರಿಗೊಂಡು ಮಕ್ಕಳು ಅಸ್ವಸ್ಥಗೊಂಡಿದ್ದರು.

Published by:Pavana HS
First published: