Morning Digest: ಮುಸ್ಲಿಮರ ವಾಹನ ಬಾಡಿಗೆಗೆ ಪಡೆಯದಂತೆ ಕರೆ: ಹಫೀಜ್ ಸಯೀದ್ ಗೆ 31 ವರ್ಷ ಜೈಲು: ಬೆಳಗಿನ ಟಾಪ್ ನ್ಯೂಸ್

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಮುಸ್ಲಿಮರ ವಾಹನ ಬಾಡಿಗೆಗೆ ಪಡೆಯದಂತೆ ಕರೆ : ರಾಜ್ಯದಲ್ಲಿ ಪ್ರತಿ ದಿನ ಹೊಸ ಹೊಸ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಹಿಜಾಬ್ (Hijab Controversy), ಹಲಾಲ್ ವರ್ಸಸ್ ಜಟ್ಕಾ ಕಟ್ (Halal Controversy), ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೀಗೆ ಹಲವು ವಿವಾದಗಳು ಮುಂದುವರೆದು ಇದೀಗ ಟ್ರಾವೆಲ್ಸ್ ಕ್ಷೇತ್ರಗಳಲ್ಲೂ (Travel Industry) ಮುಸ್ಲಿಮರನ್ನು (Muslims) ಬ್ಯಾನ್ ಮಾಡಬೇಕು ಎಂದು ಹಿಂದೂ ಪರ ಸಂಘಟನೆಗಳು ಒತ್ತಾಯಿಸಿದೆ. ಆದರೆ ಟ್ರಾವೆಲ್ಸ್ ಕ್ಷೇತ್ರ ಒಗ್ಗಟ್ಟಾಗಿ ನಿಂತಿದೆ. ಪ್ರತಿ ದಿನ ಬೆಳಗಾಗುವುದರಲ್ಲಿ ಒಂದಲ್ಲಾ ಒಂದು ವಿವಾದಗಳು ಸೃಷ್ಟಿಯಾಗ್ತಿವೆ. ಆರಂಭದಲ್ಲಿ ಉಡುಪಿಯಲ್ಲಿ ಶುರುವಾದ ಹಿಜಾಬ್ ವಿವಾದ ಕಾಡ್ಗಿಚ್ಚಿನಂತೆ ದೇಶವ್ಯಾಪಿ ಚರ್ಚೆಗೆ ಗ್ರಾಸವಾಯ್ತು. ಅದಾಗಿ ಹಿಜಾಬ್ ವಿಚಾರ ತಣ್ಣಗಾಗುತ್ತಿದ್ದಂತೆ ಜಾತ್ರೆಗಳಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ಆರ್ಥಿಕ ನಿರ್ಬಂಧ ಹೇರುವ ಅಭಿಯಾನ ಶುರುವಾಯಿತು. ಅಲ್ಲಿಂದ ಒಂದರ ಹಿಂದೆ ಮತ್ತೊಂದು ವಿವಾದಗಳು ಅಭಿಯಾನದ ರೂಪದಲ್ಲಿ ಹುಟ್ಟಿಕೊಳ್ಳಲಾರಂಭಿಸಿತು. ಅದರದ್ದೇ ಭಾಗವಾಗಿ ಈಗ ಮುಸ್ಲಿಮರು ಚಾಲಕರು ಅಥವಾ ಮಾಲೀಕರು ಆಗಿರುವ ವಾಹನಗಳನ್ನು ಬಾಡಿಗೆಗೆ ಪಡೆಯದಂತೆ ಹಿಂದೂ ಸಂಘಟನೆಗಳು ಹಿಂದೂಗಳಿಗೆ ಕರೆ ಕೊಟ್ಟಿದೆ.

  ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ: Muslim Cabs: ಹಿಜಾಬ್, ಹಲಾಲ್ ಆಯ್ತು.. ಈಗ ಮುಸ್ಲಿಮರ ವಾಹನ ಬಾಡಿಗೆಗೆ ಪಡೆಯದಂತೆ ಕರೆ!

  ಹಫೀಜ್ ಸಯೀದ್ ಗೆ 31 ವರ್ಷ ಜೈಲು
  26/11ರ ಮುಂಬೈ ದಾಳಿ (26/11 Mumbai Attack) ಮಾಸ್ಟರ್ ಮೈಂಡ್ (Master Mind), ಪಾಕಿಸ್ತಾನ (Pakistan) ಮೂಲದ ಭಯೋತ್ಪಾದಕ (Terrorist) ಸಂಘಟನೆ ಜಮಾತ್ ಉದ್ ದಾವಾ ಮುಖ್ಯಸ್ಥ (Jamaat-Ud-Dawa) ಹಫೀಜ್ ಸಯೀದ್ಗೆ (Hafiz Saeed) ಕೊನೆಗೂ ತಕ್ಕ ಶಾಸ್ತಿಯೇ ಆಗಿದೆ. ಎರಡು ಪ್ರಕರಣಗಳಲ್ಲಿ ಪಾಕಿಸ್ತಾನದ ಲಾಹೋರ್ನಲ್ಲಿರುವ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (Anti-Terror Court) ಹಫೀಜ್ ಸಯೀದ್ಗೆಗೆ 31 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಅಲ್ಲದೇ ಆತನ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಖಡಕ್ ಸೂಚನೆ ನೀಡಿದೆ. ಇಷ್ಟೇ ಅಲ್ಲದೇ ಆತನಿಗೆ 3 ಲಕ್ಷದ 40 ಸಾವಿರ ರೂಪಾಯಿ ದಂಡವನ್ನೂ ವಿಧಿಸಿ, ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

  ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ:Mumbai Attack ಮಾಸ್ಟರ್‌ಮೈಂಡ್‌ಗೆ 31 ವರ್ಷ ಜೈಲು ಶಿಕ್ಷೆ! ಹಫೀಜ್ ಸಯೀದ್ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಆದೇಶ

  HDK, ಸಿದ್ದರಾಮಯ್ಯ ಸೇರಿ 61 ಮಂದಿಗೆ ಜೀವ ಬೆದರಿಕೆ ಪತ್ರ!
  ಮಾಜಿ ಸಿಎಂಗಳಾದ (Ex-CM) ಎಚ್.ಡಿ. ಕುಮಾರಸ್ವಾಮಿ (H.D. Kumaraswamy), ಸಿದ್ದರಾಮಯ್ಯ (Siddaramaiah) ಸೇರಿದಂತೆ ಒಟ್ಟು 61 ಮಂದಿಗೆ ಜೀವ ಬೆದರಿಕೆ ಪತ್ರ (Life threatening letter) ಬಂದಿದೆ. ಬಳ್ಳಾರಿಯ (Bellary) ಕೊಟ್ಟೂರಿನಲ್ಲಿರುವ ಸಾಹಿತಿ ಕುಂ. ವೀರಭದ್ರಪ್ಪ ಅವರ ನಿವಾಸಕ್ಕೆ ಈ ಜೀವ ಬೆದರಿಕೆ ಪತ್ರ ತಲುಪಿದೆ. ಹಿಬಾಜ್ ವಿವಾದದಲ್ಲಿ (Hijab Controversy) ಬೆಂಬಲ ನೀಡಿದ ಸಾಹಿತಿಗಳು, ಹೋರಾಟಗಾರರ ಜೊತೆಗೆ ಎಚ್ಡಿಕೆ ಹಾಗೂ ಸಿದ್ದರಾಮಯ್ಯ ಅವರ ಹೆಸರು ಸೇರಿದಂತೆ 61 ಮಂದಿ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. “ನಿಮ್ಮ ಸರ್ವನಾಶ ನಿಶ್ಚಿತ. ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕೆ ಸಿದ್ಧರಾಗಿ, ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ” ಅಂತ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ.

  ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡ್ತಾರಾ ಅನಂತ್ ಕುಮಾರ್ ಹೆಗಡೆ?
  ತ್ತರ ಕನ್ನಡ (Uttara Kannada) ಲೋಕಸಭಾ ಕ್ಷೇತ್ರದಿಂದ (Lok Sabha constituency) ಸತತ ಆರು ಬಾರಿ ಸಂಸತ್ (Parliament) ಪ್ರವೇಶ ಮಾಡಿರುವ, ‘ಹಿಂದೂ ಫೈರ್ ಬ್ರಾಂಡ್’ (Hindu Fire Brand) ಖ್ಯಾತಿಯ ಸಂಸದ (MP) ಅನಂತಕುಮಾರ್ ಹೆಗಡೆ (Ananthkumar Hegde) ಮುಂದಿನ ಲೋಕಸಭಾ ಚುನಾವಣೆಯಲ್ಲಿ (Election) ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ. ಈ ನಡುವೆ ಕೇಂದ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣದತ್ತ (State Politics) ಅವರು ಮುಖ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡತೊಡಗಿದೆ. ಉತ್ತರ ಕನ್ನಡ ಬಿಜೆಪಿ (BJP) ಮಟ್ಟಿಗೆ ಸಂಸದ ಅನಂತಕುಮಾರ್ ಹೆಗಡೆ ಹೈಕಮಾಂಡ್ ಇದ್ದಂತೆ. ತಮ್ಮ ಪ್ರಖರ ಭಾಷಣದ ಮೂಲಕವೇ ಜನರ ಮೆಚ್ಚುಗೆ ಗಳಿಸಿ ಸತತ ಆರು ಬಾರಿ ಬಿಜೆಪಿಯಿಂದ ಸಂಸತ್ ಪ್ರವೇಶ ಮಾಡಿರುವ ಅನಂತಕುಮಾರ್, ಕೇಂದ್ರ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

  ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ದಾಳಿ
  ಬೆಂಗಳೂರಿನಲ್ಲಿ ಆಫ್ಟರ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಾರತಹಳ್ಳಿ ಔಟರ್ ರಿಂಗ್ ರಸ್ತೆಯ ಹೋಟೆಲ್ ಮೇಲೆ ದಾಳಿ ನಡೆಸಲಾಗಿದೆ.ಐಷಾರಾಮಿ ಹೋಟೆಲ್ ನಲ್ಲಿ ಭರ್ಜರಿ ಪಾರ್ಟಿ ನಡೆಯುತ್ತಿತ್ತು ಬೆಳಗಿನ ಜಾವ 3.30 ರವರೆಗೂ ಪಾರ್ಟಿ ನಡೆಯುತ್ತಿದ್ದು, ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಇದನ್ನು ಆಯೋಜಿಸಿದ್ದ ಎಂಬ ಮಾಹಿತಿ ಸಿಕ್ಕಿದೆ. ದಾಳಿಯ ವೇಳೆ 64 ಯುವಕರು ಮತ್ತು 24 ಯುವತಿಯರು ಪತ್ತೆಯಾಗಿದ್ದಾರೆ. ಪಾರ್ಟಿಯಲ್ಲಿ ಉತ್ತರ ಭಾರತದ ಮೂಲದ ಯುವತಿಯರೇ ಹೆಚ್ಚಾಗಿದ್ದರು. ಡ್ರಗ್ಸ್ ಸೇವಿಸಿ ಪಾರ್ಟಿ ಮಾಡಿರುವ ಅನುಮಾನದ ಹಿನ್ನೆಲೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.
  Published by:Kavya V
  First published: