Morning Digest: ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ, ಇಳಿಕೆಯಾದ ಚಿನ್ನದ ಬೆಲೆ; ಬೆಳಗಿನ ಟಾಪ್​​ ನ್ಯೂಸ್​​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1.Karnataka Politics: ಇಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ, ಸಿಎಂ ಸ್ಥಾನದಿಂದ ಬೊಮ್ಮಾಯಿಗೆ ಕೊಕ್​?

ಹುಬ್ಬಳ್ಳಿ(ಡಿ.28): ಹತ್ತು ವರ್ಷಗಳ ನಂತರ ಹುಬ್ಬಳ್ಳಿ(Hubli)ಯಲ್ಲಿ ನಡೆಯುತ್ತಿರೋ ಬಿಜೆಪಿ ರಾಜ್ಯ ಕಾರ್ಯಕಾರಿಣಿ(BJP Core Committee Meeting)ಯತ್ತ ಎಲ್ಲರ ದೃಷ್ಟಿ ನೆಟ್ಟಿದೆ. ಧಾರವಾಡ ಸಿಎಂ ಬಸವರಾಜ ಬೊಮ್ಮಾಯಿರವರ (CM Basavaraj Bommai) ತವರು ಜಿಲ್ಲೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh Shettar) ರಾಜಕೀಯ ಕರ್ಮಭೂಮಿಯಾಗಿರೋ ಹುಬ್ಬಳ್ಳಿಯಲ್ಲಿ ನಡೆಯುತ್ತಿರೋ ಕಾರ್ಯಕಾರಿಣಿ ಬಿಸಿಯೇರಿದ ಚರ್ಚೆಗೆ ವೇದಿಕೆಯಾಗುತ್ತೆ ಎಂದೇ ಚರ್ಚೆಗೊಳ್ಳುತ್ತಿದೆ. ಸಿಎಂ ಬದಲಾವಣೆ (CM Change) ಕುರಿತೂ ಮಾಹಿತಿ ಸಂಗ್ರಹಿಲಾಗುತ್ತಿದೆ ಎನ್ನೋ ಮಾತೂ ಕೇಳಿ ಬರುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜೆ.ಪಿ.ನಡ್ಡಾ(JP Nadda) ಪ್ರವಾಸ ಕೊನೆಯ ಕ್ಷಣದಲ್ಲಿ ರದ್ದಾಗಿರೋದು ಕುತೂಹಲ ಕೆರಳಿಸಿದೆ.

2.PM Modi: ಇಂದು ಉತ್ತರ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ, ಕಾನ್ಪುರ ಮೆಟ್ರೋ ರೈಲು ಯೋಜನೆಗೆ ಚಾಲನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ(Prime Minister Narendra Modi)ಯವರು ಇಂದು ಉತ್ತರ ಪ್ರದೇಶದ(Uttar Pradesh) ಕಾನ್ಪುರ(Kanpur)ಕ್ಕೆ ಭೇಟಿ ನೀಡಲಿದ್ದು, ಕಾನ್ಪುರ ಮೆಟ್ರೋ ರೈಲು​ ಯೋಜನೆ(Kanpur Metro Rail Project)ಯ ಪೂರ್ಣಗೊಂಡ ಭಾಗವನ್ನು ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಅವರು ಕಾನ್ಪುರ ಮೆಟ್ರೋ ರೈಲು ಯೋಜನೆಯನ್ನು ಪರಿಶೀಲಿಸಲಿದ್ದಾರೆ. ಇದರೊಂದಿಗೆ ಐಐಟಿ ಮೆಟ್ರೋ ನಿಲ್ದಾಣದಿಂದ ಗೀತಾ ನಗರ(Geeta Nagar)ಕ್ಕೆ ಮೆಟ್ರೋ(Metro)ದಲ್ಲಿ ಸಂಚರಿಸಲಿದ್ದಾರೆ.

3. Karnataka Weather Report: ಚಳಿ ಜೊತೆ ಆರಂಭವಾದ ಶೀತ ಗಾಳಿ: ಮಧ್ಯಾಹ್ನವಾದ್ರೂ ಕಡಿಮೆಯಾಗದ ನಡುಗುವಿಕೆ

ರಾಜ್ಯದಲ್ಲಿ ಚಳಿ (Winter) ಆರಂಭವಾಗಿದ್ದು, ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಶೀತಗಾಳಿ (Cold wave) ಸಹ ಆರಂಭಗೊಂಡಿದೆ. ಸಂಜೆಯಾಗುತ್ತಲೇ ಆರಂಭವಾಗುವ ಚಳಿಯಿಂದ ತಪ್ಪಿಸಿಕೊಳ್ಳಲು ಜನರು ಮನೆ ಸೇರುಕೊಳ್ಳುವಂತಾಗಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ ಸುಮಾರು 9 ಗಂಟೆವರೆಗೂ ದಟ್ಟವಾದ ಮಂಜು ಆವರಿಸಿ ಮಲೆನಾಡಿನ ಅನುಭವ ನೀಡುತ್ತಿದೆ. ಬಳ್ಳಾರಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಆವರಿಸುತ್ತಿರುವ ಮಂಜಿನಿಂದ ರೈತರು ಆತಂಕಕ್ಕೆ ಒಳಗಾಗಿದ್ದು, ಬೆಳೆ ಹಾಳುಗುವ ಭಯದಲ್ಲಿದ್ದಾರೆ. ಮಧ್ಯಾಹ್ನದ ನಂತರ ಎಂದಿನಂತೆ ಸೂರ್ಯದೇವ ಅಬ್ಬರಿಸಲಿದ್ದಾನೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಗರಿಷ್ಠ 27 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

4. Gold Price Today: ಚಿನ್ನ ಖರೀದಿಗೆ ಇಂದೇ ಹೋಗಿ, ಬೆಲೆ ಕಡಿಮೆಯಾಗಿದೆ

Gold Rate on Dec 28, 2021: ದೇಶದಲ್ಲಿ ಕಳೆದ ಮೂರು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆ (Gold Price) ಇಂದು ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿಯೂ (Bengaluru) ಸಹ ಇಂದು ಬಂಗಾರದ ಬೆಲೆ ಕಡಿಮೆಯಾಗಿದೆ. ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,310 ರೂ. ಇತ್ತು. ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,240ಕ್ಕೆ ಇಳಿಕೆಯಾಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,310 ರೂ. ಇತ್ತು. ಇಂದು ಅದೇ ಚಿನ್ನ 48,240 ರೂ.ಗೆ ಇಳಿಕೆಯಾಗಿದೆ.
Published by:Latha CG
First published: