Morning Digest: ಮಲೆನಾಡಲ್ಲಿ ಮೋಡ ಕವಿದ ವಾತಾವರಣ -ಏರಿದ ಹಳದಿ ಲೋಹದ ರೇಟ್: ಬೆಳಗಿನ ಟಾಪ್ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:

  1. Karnataka Weather Report: ಬೆಳ್ಳಿ ಮೋಡಗಳ ಓಡಾಟ, ಇಲ್ಲಿದೆ ನಿಮ್ಮೂರಿನ ಹವಾಮಾನ ವರದಿ


ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆರಾಯ (Rainfall) ಬಹುತೇಕ ಭಾಗಗಳಲ್ಲಿ ಬ್ರೇಕ್ ಕೊಟ್ಟಿದ್ದಾನೆ. ಶುಕ್ರವಾರ ಮಂಡ್ಯ ಮತ್ತು ಹಾಸನ (Mandya And Hassan) ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಭಾರೀ ಮಳೆಯಾಗಿತ್ತು. ಮತ್ತೊಂದೆಡೆ ಉಳಿದಂತೆ ಎಲ್ಲ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದ್ದು, ಆಗಸದಲ್ಲಿ ಬೆಳ್ಳಿ ಮೋಡಗಳ (Cloud) ಓಡಾಟ ಹೆಚ್ಚಿದೆ. ಎಂದಿನಂತೆ ಮಲೆನಾಡು ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಇರಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರದಲ್ಲಿಯೂ ಅಲ್ಪ ಮಳೆಯ ಸಾಧ್ಯತೆ ಇದೆ. ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ವಾತಾವರಣ ಬದಲಾಗುತ್ತಿದ್ದು, ಜನರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ.

2. Gold Price Today: ಮತ್ತೆ ಏರಿಕೆ ಕಂಡ ಚಿನ್ನ ಬೆಲೆ - ಪ್ರಮುಖ ನಗರಗಳಲ್ಲಿ ಇಂದಿನ ದರ ಹೀಗಿದೆ

Gold Rate on Dec 4, 2021: ದೇಶದಲ್ಲಿ ಕಳೆದ ಎರೆಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ(Gold Rate) ಬೆಲೆ ಇಂದು ಏರಿಕೆಯಾಗಿದೆ. ಬೆಂ ಗಳೂರಿನಲ್ಲಿ(Bengaluru) ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ  10ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,450 ರೂ ಇತ್ತು.  ಇಂದು 150 ರೂ ಬೆಲೆ ಏರಿಕೆಯಾಗಿದ್ದು, 46, 500 ರೂ ಆಗಿದೆ. ಅಂತೆಯೇ 10ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47, 450 ರೂ ಇತ್ತು ಇಂದು 47, 500 ರೂ. ಆಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,820 ರೂ. ಆಗಿದೆ. ನಿನ್ನೆ ಬೆಲೆಗಿಂತ 330 ರೂ ಹೆಚ್ಚಾಗಿದೆ..ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,750 ರೂ. ಇದ್ದು ಇದು ಸಹ 300 ರೂ ಹೆಚ್ಚಾಗಿದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

3. Petrol And Diesel Price: ಇಂದಿನ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ

Petrol And Diesel Price December 5th 2021: ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್‌, ಡೀಸೆಲ್‌ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್​ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಳಿತ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್​ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.

4. Airportನಿಂದ ನಾಪತ್ತೆಯಾಗಿದ್ದ ಎಲ್ಲ ದಕ್ಷಿಣ ಆಫ್ರಿಕನನ್ನರ್ ಪತ್ತೆ, ಕೋವಿಡ್ ಪರೀಕ್ಷೆ

ಕೊರೊನಾದ ಬಹು ರೂಪಾಂತರಿ ಓಮಿಕ್ರಾನ್​​ (Omicron) ಸೋಂಕು ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಲ್ಲಿ ಪತ್ತೆಯಾಗಿದೆ. ಓಮಿಕ್ರಾನ್ (Omicron) ಆತಂಕದ ಹಿನ್ನೆಲೆ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ, ಅದಾಗಿಯೂ ದಕ್ಷಿಣ ಆಫ್ರಿಕಾದಿಂದ (South Africa) ಬೆಂಗಳೂರಿಗೆ (Bengaluru) ಬಂದಿದ್ದ ಪ್ರಯಾಣಿಕರು ಏರ್ ಪೋರ್ಟ್ (Airport) ತಲುಪುತ್ತಿದ್ದಂತೆ ಮಾಯವಾಗಿದ್ದರು, ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ BBMP), ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳ ತಂಡ ಕೊನೆಗೂ ಪತ್ತೆ ಹಚ್ಚಿವೆ. ಕಳೆದ ಒಂದು ವಾರದಿಂದ ಬಂದಿರುವ ಎಲ್ಲ ದಕ್ಷಿಣ ಆಫ್ರಿಕಾ ಸೇರಿದಂತೆ ಓಮಿಕ್ರಾನ್ ಪಸರಿಸಿರುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಎಲ್ಲ ಸ್ವ್ಯಾಬ್ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಮರು ಪರೀಕ್ಷೆಯೊಂದಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್ ವರದಿಯ ಅಗತ್ಯವನ್ನು ಕಡ್ಡಾಯಗೊಳಿಸದಿದ್ದಾಗ ಈ ಎಲ್ಲ ಜನರು ಎರಡು ಮೂರು ವಾರಗಳ ಹಿಂದೆ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದಾರೆ ಎಂದು ಗೌರವ್ ಗುಪ್ತಾ ಸ್ಪಷ್ಟಪಡಿಸಿದ್ದಾರೆ.
Published by:Sandhya M
First published: