Morning Digest: ಚಿನ್ನದ ಬೆಲೆ ಏರಿಕೆ, ಹೈ ಕೋರ್ಟ್​​ನಲ್ಲಿ ಹಿಜಬ್ ಮಹತ್ವದ ವಿಚಾರಣೆ; ಬೆಳಗಿನ ಟಾಪ್ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1. ಇಂದು ಹೈಕೋರ್ಟ್​​ನಲ್ಲಿ ಹಿಜಬ್ ಮಹತ್ವದ ವಿಚಾರಣೆ

ರಾಜ್ಯದಲ್ಲಿ ಹಿಜಬ್ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಎಲ್ಲೆಡೆ ವಾದ ಪ್ರತಿವಾದಗಳು ಭುಗಿಲೆದ್ದಿವೆ. ಹೈಕೋರ್ಟ್ ನಲ್ಲಿ ಹಿಜಬ್ ಕುರಿತು ಇಂದು ಮಹತ್ವದ ವಿಚಾರಣೆ ನಡೆಯಲಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ಅತೀ ಮಹತ್ವ ಪಡೆದಿದೆ. ಹಿಜಬ್ ವಿವಾದ ತಾರಕಕ್ಕೇರಿರುವ ವೇಳೆ ಹೈಕೋರ್ಟ್ ವಿಚಾರಣೆ ಮಹತ್ವದ ಪಡೆದಿದೆ. ಹಿಜಬ್ ವಿವಾದ ಕುರಿತು ಹೈಕೋರ್ಟ್ ನಲ್ಲಿ ಎಜಿ ವಾದ ಮಂಡನೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರ, ವಿದ್ಯಾರ್ಥಿಗಳು ಸೇರಿ ಎಲ್ಲರ ಚಿತ್ತ ಇಂದು ಹೈಕೋರ್ಟ್​​​ನತ್ತ ನೆಟ್ಟಿದೆ. ಹಿಜಬ್ ಧರಿಸಲು ನಿರ್ಬಂಧ ವಿಧಿಸಿರುವುದನ್ನ ಪ್ರಶ್ನಿಸಿ ವಿದ್ಯಾರ್ಥಿನಿಯರು ಮತ್ತು ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಉಡುಪಿ ಮೂಲದ ವಿದ್ಯಾರ್ಥಿನಿಯರು ಮತ್ತು ಪೋಷಕರು ಹೈಕೋರ್ಟ್ ನಲ್ಲಿ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.

2.GST ಪರಿಹಾರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ

ನವದೆಹಲಿ, ಫೆ. 8: ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್ ಟಿ ಪರಿಹಾರವನ್ನು 2024-25ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Union Finance Minister Nirmala Seetaraman) ಅವರನ್ನು ಭೇಟಿಯಾಗಿ ಮನವಿ ಮಾಡಿದರು. ಎರಡು ದಿನಗಳ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು 2022ರ ಮಾರ್ಚ್ ಗೆ ಜಿ.ಎಸ್.ಟಿ. ಪರಿಹಾರದ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ ಕೋವಿಡ್ 19 ರಿಂದಾಗಿ ರಾಜ್ಯ ಸರ್ಕಾರಗಳು ಸಂಪನ್ಮೂಲ ಕ್ರೋಢೀಕರಿಸಲು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಜಿ.ಎಸ್.ಟಿ. ಪರಿಹಾರದ ಅವಧಿ ವಿಸ್ತರಿಸುವ ಮೂಲಕ ರಾಜ್ಯ ಸರ್ಕಾರಗಳ ಸಂಕಷ್ಟ ಬಗೆಹರಿಸುವಂತೆ ಮನವಿ ಮಾಡಿದರು.

3.Karnataka Weather Today: ತಗ್ಗಿದ ಚಳಿ, ಬೇಸಿಗೆ ಆರಂಭದ ಬಿಸಿಲಿಗೆ ಜನರು ಹೈರಾಣು

Karnataka Weather Today 8th Feb 2022: ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು, ಇಂದು ಸಹ ಸೂರ್ಯನ ಪ್ರಖರತೆ ನೆತ್ತಿ ಸುಡಲಿದೆ. ಇತ್ತ ಚಳಿಯ (Winter) ಪ್ರಮಾಣ ತಗ್ಗಿದ್ದು, ಕನಿಷ್ಠ 16 ರಿಂದ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 30 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಳೆದ ವಾರ ಕಾಣಿಸಿಕೊಂಡಿದ್ದ ದಟ್ಟವಾದ ಮಂಜು (Fog) ಕಾಣಿಸಿಕೊಳ್ಳುತ್ತಿತ್ತು. ಇದೀಗ ಮಂಜು ಸಹ ಕಡಿಮೆಯಾಗುತ್ತಿದೆ. ರಾಜ್ಯ ಬಹುತೇಕ ಭಾಗಗಳಲ್ಲಿ ಶುಷ್ಕ ಹವಾಮಾನ ಇರಲಿದೆ. ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮೈಸೂರು ಭಾಗದ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ (Cloudy Weather) ಇರಲಿದೆ.

4. Gold Price Today: ಏರಿಕೆಯಾದ ಚಿನ್ನದ ಬೆಲೆ, ಇಂದಿನ ಬೆಲೆ ಎಷ್ಟು ಗೊತ್ತಾ?

Gold Rate on Feb 8, 2022: ಕೇಂದ್ರ ಬಜೆಟ್‌ ಬಳಿಕ ಚಿನ್ನ, ಬೆಳ್ಳಿ ದರದಲ್ಲಿ ಭಾರೀ ವ್ಯತ್ಯಾಸವೇನಾಗಿಲ್ಲ. ಒಂದು ದಿನ ಹೆಚ್ಚಾದರೆ, ಇನ್ನೊಂದು ದಿನ ಕಡಿಮೆಯಾಗಿರುತ್ತದೆ. ಇಲ್ಲದಿದ್ದರೆ ಯಥಾಸ್ಥಿತಿ ಕಾಯ್ದುಕೊಂಡಿರುತ್ತದೆ. ದೇಶದಲ್ಲಿಂದು ಚಿನ್ನದ ಬೆಲೆ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,100 ರೂ. ಇತ್ತು. ಇಂದು ಅದೇ ಚಿನ್ನಕ್ಕೆ 45,200 ರೂ ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,200 ರೂ. ಇತ್ತು. ಇಂದು 49,250 ರೂ. ಆಗಿದೆ.
Published by:Latha CG
First published: