1.Karnataka Weather Report: ರಾಜ್ಯದ ಈ ಭಾಗಗಳಲ್ಲಿ ಮಳೆ ಸಾಧ್ಯತೆ: ಗರಿಷ್ಠ ತಾಪಮಾನ ಏರಿಕೆ
Karnataka Weather Report Today: ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಚಳಿಯ (Cold) ಪ್ರಮಾಣ ತಗ್ಗಿದ್ದು, ಸೂರ್ಯನ ಪ್ರಖರತೆ ಹೆಚ್ಚಾಗುತ್ತಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಳಲ್ಲಿ ಮಾತ್ರ ಬೆಳಗ್ಗೆ ದಟ್ಟವಾದ ಮಂಜು ಆವರಿಸಿಕೊಂಡ ವಾತಾವರಣ ನಿರ್ಮಾಣವಾಗಿದೆ. ಇನ್ನು ಉತ್ತರ ಕರ್ನಾಟಕದ (North Karnataka) ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟುವ ಮೂಲಕ ಬೇಸಿಗೆ (Summer) ಆರಂಭದ ಸುಳಿವು ನೀಡುತ್ತಿದೆ. ಈ ಬಾರಿ ನವೆಂಬರ್ ಮತ್ತು ಡಿಸೆಂಬರ್ ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ (Unseasonal Rains) ವಾತಾವರಣದಲ್ಲಿ ವೈಪರೀತ್ಯ ಉಂಟಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 29 ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
2.Delhi Coronavirus: ದೆಹಲಿಯಲ್ಲಿ 1,000 ಪೊಲೀಸ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್
ನವದೆಹಲಿ(ಜ.11): ದೇಶದಲ್ಲಿ ಕೊರೋನಾ-ಓಮೈಕ್ರಾನ್(Corona-Omicron) ಅಟ್ಟಹಾಸ ಮುಂದುವರೆದಿದ್ದು, ಜನರ ಮನಸ್ಸಲ್ಲಿ ಮತ್ತೆ ತಲ್ಲಣ ಮೂಡಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ(Delhi)ಯಲ್ಲಿ ಕೊರೋನಾ ಮಹಾಮಾರಿ ಕೇಕೆ ಹಾಕುತ್ತಿದೆ. ದಿನೇ ದಿನೇ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಹೊಸ ನಿರ್ಬಂಧಗಳಿಗೆ (New Rules) ದಾರಿ ಮಾಡಿಕೊಡುತ್ತಿದೆ. ಮತ್ತೊಂದು ಆತಂಕಕಾರಿ ವಿಷವೇನೆಂದರೆ, ದೆಹಲಿಯಲ್ಲಿ ಜನವರಿ 1ರಿಂದ ಅಂದರೆ ಕಳೆದ 10 ದಿನಗಳಲ್ಲಿ ಸುಮಾರು ಒಂದು ಸಾವಿರ ಪೊಲೀಸ್ ಸಿಬ್ಬಂದಿಗೆ(Police Personnel) ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
3.Gold Price Today: ಬೆಂಗಳೂರಿನಲ್ಲಿ ಮತ್ತೊಮ್ಮೆ ದರ ಇಳಿಕೆ: ಚಿನ್ನ ಖರೀದಿಗೆ ಇದುವೇ ಸುವರ್ಣಾವಕಾಶ
Gold Rate on Jan 11, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,610 ರೂ. ಇತ್ತು. ಇಂದೂ ಸಹ ಅದೇ ಬೆಲೆ ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,610 ರೂ. ಇತ್ತು. ಇಂದೂ ಸಹ ಅದೇ ಬೆಲೆ ಇದೆ.
4.Petrol And Diesel Price Today: ಪೆಟ್ರೋಲ್ ಬೆಲೆ ರಾಯಚೂರಿನಲ್ಲಿ ₹1.23 ಏರಿಕೆ, ಉ.ಕನ್ನಡದಲ್ಲಿ ₹ 1.40 ಇಳಿಕೆ
Petrol And Diesel Price today: ಕೇಂದ್ರ ಹಾಗೂ ರಾಜ್ಯ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.
5.Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಜನವರಿ 11 ರಿಂದ 15 ರವರೆಗೆ ವಿದ್ಯುತ್ ವ್ಯತ್ಯಯ
ಬೆಂಗಳೂರಿಗರಿಗೆ(Bengaluru)ಪ್ರತಿನಿತ್ಯ ಇರುವ ಹಲವು ಸಮಸ್ಯೆಗಳ(Problems)ಜೊತೆ ವಿದ್ಯುತ್ ಕಡಿತ(Lower Cut)ಸಂಪರ್ಕ ಸಮಸ್ಯೆಯು ದೊಡ್ಡ ತೊಂದರೆಯಾಗಿ ಪರಿಣಮಿಸಿದೆ.. ಈಗಾಗಲೇ ಒಂದಲ್ಲ ಒಂದು ಕಾರಣ ಹೇಳಿ ಪ್ರತಿನಿತ್ಯ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಬೆಸ್ಕಾಂ(Bescom)ವಿದ್ಯುತ್ ಕಡಿತ ಮಾಡುತ್ತಲೇ ಇದೆ.. ಹೀಗಾಗಿ ಎಷ್ಟೋ ಜನರು ತಮ್ಮ ಹಲವು ಅಗತ್ಯಗಳನ್ನು ಪೂರೈಕೆ ಮಾಡಿಕೊಳ್ಳಲಾಗದ ಸ್ಥಿತಿಯಲ್ಲಿ ಇದ್ದಾರೆ.. ಅದರಲ್ಲೂ ವರ್ಕ್ ಫ್ರಮ್ ಹೋಮ್(Work From Home )ಎಂದು ಕಾರ್ಯ ನಿರ್ವಹಣೆ ಮಾಡುತ್ತಿರುವ ಜನರು ಪ್ರತಿನಿತ್ಯ ವಿದ್ಯುತ್ ಕಡಿತವಾಗುತ್ತಿರುವುದಕ್ಕೆ ತೊಂದರೆಗೆ ಒಳಗಾಗಿದ್ದಾರೆ.. ಇದು ಸಾಲದು ಎಂಬಂತೆ ರಾಜ್ಯದಲ್ಲಿ ತೀವ್ರ ಚಳಿ (Cold)ಶುರುವಾಗಿದ್ದು, ಜನರು ಮನೆಯಿಂದ ಹೊರ ಬರಲಾರದೆ ಸಂಕಷ್ಟ ಪಡುತ್ತಿದ್ದಾರೆ. ಸದ್ಯ ಜನವರಿ 11 ರಿಂದ ಜನವರಿ 15ರವರೆಗೆ ಬೆಂಗಳೂರಲ್ಲಿ ತುರ್ತು ವಿದ್ಯುತ್ ನಿರ್ವಹಣೆ ಕಾಮಗಾರಿ ಇರುವುದರಿಂದ ವಿದ್ಯುತ್ ವ್ಯತ್ಯಯ ಆಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ