Morning Digest: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ಮಾರುಕಟ್ಟೆ ಸ್ಥಳಾಂತರ; ಬೆಳಗಿನ ಟಾಪ್​ ನ್ಯೂಸ್​​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
 1.ಎರಡನೇ ವಾರದ Weekend Curfew ; ಬೆಂಗಳೂರಿನಲ್ಲಿ ಮಾರುಕಟ್ಟೆ ಸ್ಥಳಾಂತರದ ಮಾಹಿತಿ ಇಲ್ಲಿದೆ 

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಮಹಾಮಾರಿ ಕೊರೊನಾ ಮತ್ತು ಓಮೈಕ್ರಾನ್ (Corona Virus And Omicron) ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ (Weekend Curfew) ಅಸ್ತ್ರ ಪ್ರಯೋಗಿಸಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದಲೇ ರಾಜ್ಯ ಸ್ತಬ್ಧವಾಗಿದ್ದು, ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ . ಕೇವಲ ಅಗತ್ಯ ವಸ್ತು, ತರಕಾರಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ಬೆಂಗಳೂರಿನ ರಸ್ತೆಗಳು ಬಿಕೋ ಎನ್ನುತ್ತಿದ್ದು, ತುರ್ತು ಸೇವೆಗಳಿಗೆ BMTC ಬಸ್ ಗಳು ಕಾರ್ಯಾಚರಣೆ ನಡೆಸಲಿವೆ. ಪ್ರಯಾಣಿಕರನ್ನು (Passengers) ಗಮನಿಸಿ ಬಸ್ ಗಳನ್ನು ರಸ್ತೆಗೆ ಇಳಿಸಲು ಬಿಎಂಟಿಸಿ ಪ್ಲಾನ್ ಮಾಡಿಕೊಂಡಿದೆ. ಮತ್ತೊಂದು ಕಡೆ ಜನದಟ್ಟಣೆ ಕಡಿಮೆ ಮಾಡುವ ಹಿನ್ನೆಲೆ ಬೆಂಗಳೂರಿನ ಮಾರುಕಟ್ಟೆಗಳನ್ನು ಸ್ಥಳಾಂತರ ಮಾಡಲಾಗಿದೆ.


2.Bipin Rawat: ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ ಪ್ರಕರಣ, ತನಿಖಾ ವರದಿಯಿಂದ ಕಾರಣ ಬಹಿರಂಗನವದೆಹಲಿ(ಜ.15): ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್(Bipin Rawat) ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ದುರಂತಕ್ಕೆ(Chopper Crash) ಕಾರಣವೇನು ಎಂಬುದು ತನಿಖಾ ವರದಿಯಿಂದ ಕೊನೆಗೂ ಬಹಿರಂಗಗೊಂಡಿದೆ. ಇಂದು ಈ ತನಿಖಾ ವರದಿ ರಕ್ಷಣಾ ಸಚಿವರ ಕೈ ಸೇರಲಿದೆ. ಘಟನೆ ನಡೆದಾಗಿನಿಂದಲೇ ಈ ಬಗ್ಗೆ ತನಿಖೆ ಆರಂಭಗೊಂಡಿತ್ತು. ಒಂದು ತಿಂಗಳ ಬಳಿಕ ತನಿಖೆ ಮುಗಿದಿದ್ದು, ಹೆಲಿಕಾಪ್ಟರ್ ಪತನಕ್ಕೆ ಕಾರಣವೇನು ಎಂಬುದು ಈಗ ಬಹಿರಂಗಗೊಂಡಿದೆ.  ದುರಂತ ಘಟನೆಗೆ ಕಾರಣವಾಗಿರಬಹುದಾದ ಎಲ್ಲಾ ಸನ್ನಿವೇಶಗಳನ್ನು ತನಿಖಾ ತಂಡವು ವಿಶ್ಲೇಷಿಸಿದೆ. ಪ್ರಾಥಮಿಕ ತನಿಖೆಯ ಬಳಿಕ ಈ ದುರಂತಕ್ಕೆ ಪ್ರತಿಕೂಲ ಹವಾಮಾನದಲ್ಲಿ ಹೆಲಿಕಾಪ್ಟರ್ ಹಾರಾಟ ಮಾಡಿದ್ದೇ ದುರಂತಕ್ಕೆ ಕಾರಣ. ತಾಂತ್ರಿಕ ದೋಷವಲ್ಲ ಎಂದು ತನಿಖಾ ವರದಿಯಿಂದ ತಿಳಿದು ಬಂದಿದೆ.


3.Gold And Silver Price Today: ದೇಶದಲ್ಲಿ ಇಳಿಕೆಯಾದ ಚಿನ್ನದ ಬೆಲೆ: ಬೆಂಗಳೂರಿನಲ್ಲಿ ಎಷ್ಟಿದೆ ದರ?

Gold Rate on Jan 15, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಯಥಾಸ್ಥಿತಿ ಇದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,100 ರೂ. ಇತ್ತು. ಇಂದು 120 ರೂ. ಇಳಿಕೆಯಾಗಿದ್ದು 46,980 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,100 ರೂ. ಇತ್ತು. ಇಂದು 120 ರೂ. ಇಳಿಕೆಯಾಗಿ 48,980 ರೂ. ಆಗಿದೆ.


4.Karnataka Weather Report: ಬೆಳಗ್ಗೆ ಚುಮು ಚುಮು ಚಳಿ, ಮಧ್ಯಾಹ್ನವಾದ್ರೂ ಎಳೆ ಬಿಸಿಲು

Karnataka Weather Report: ಕಳೆದ ಎರಡು ದಿನಗಳಿಂದ ಏರಿಕೆಯಾಗಿದ್ದ ಚಳಿ (Winter) ಕೊಂಚ ಇಳಿಕೆಯಾಗಿದೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಉತ್ತರ ಕರ್ನಾಟಕದಲ್ಲಿ (North Karnataka) ಚಳಿ ಜೊತೆ ಒಣ ಹವೆ ಇರಲಿದ್ದು, ಬೆಳಗ್ಗೆ ದಟ್ಟವಾದ ಮಂಜು ಆವರಿಸಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ (Bengaluru Weather) ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಬೀದರ್, ಯಾದಗಿರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಇರಲಿದೆ. ಎಂದಿನಂತೆ ಬೆಳಗ್ಗೆ ಚಳಿ(Cold Weather)ಯಿಂದ ಕೂಡಿದ ವಾತಾವರಣ ಇರಲಿದೆ.


5. Bengaluru ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ: Weekend Curfewನಿಂದಾಗಿ ಉಳಿದ ಜೀವಗಳು!


ಬನ್ನೇರುಘಟ್ಟ ರಸ್ತೆ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ನಿರಂತರ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಮಾಲ್ ನ ಗ್ರೌಂಡ್ ಪ್ಲೋರ್ ನಲ್ಲಿರೋ ಸೂಪರ್ ಮಾರ್ಕೆಟ್ ನಲ್ಲಿರುವ ಸ್ಟೋರೇಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಆದ್ರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Published by:Latha CG
First published: