Morning Digest: ಚಿನ್ನದ ಬೆಲೆ ಇಳಿಕೆ, ಕರ್ನಾಟಕದಲ್ಲಿ ಇಂದು ಮಳೆ, ಬೆಂಗಳೂರಿನಲ್ಲಿ ಪವರ್ ಕಟ್, ಬೆಳಗಿನ ಟಾಪ್​ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1.Gold Price Today: ಇಳಿಕೆಯಾದ ಚಿನ್ನದ ಬೆಲೆ, ಆಭರಣ ಖರೀದಿಸಲು ಇದೇ ಸರಿಯಾದ ಸಮಯ..!

Gold Rate on Jan 28, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಕಡಿಮೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,900 ರೂ. ಇತ್ತು. ಇಂದು 400 ರೂ. ಕಡಿಮೆಯಾಗಿ 45,500 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,830 ರೂ. ಇತ್ತು. ಇಂದು 190 ರೂ. ಕಡಿಮೆಯಾಗಿ 49,640 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ.

2.Bengaluru Power Cut: ಉತ್ತರಹಳ್ಳಿ ಸೇರಿದಂತೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ- ನಿಮ್ಮ ಏರಿಯಾ ಲಿಸ್ಟ್​ನಲ್ಲಿದೆಯಾ ನೋಡಿ

ಬಾಲಾಜಿ ಬಡಾವಣೆ, ವಿಜಯಶ್ರೀ ಬಡಾವಣೆ, ಮೂಕಾಂಬಿಕ ಬಡಾವಣೆ, ಬಿಎಚ್‌ಇಎಲ್‌, ಕೃಷ್ಣ ಗಾರ್ಡನ್‌, ಬೃಂದಾವನ ನಗರ, ಅನ್ನಪೂರ್ಣೇಶ್ವರಿ ಬಡಾವಣೆ, ಟಿ.ಪಿ. ಸರ್ಕಲ್‌, ಹೊಸಹಳ್ಳಿ ರಸ್ತೆ, ಗಾಂಧಿನಗರ, ದುಬಾಸಿಪಾಳ್ಯ, ಉತ್ತರ ಹಳ್ಳಿ ರಸ್ತೆ, ಕೋಡಿಹಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಲಿದೆ. ಜೆಪಿ ನಗರ 1 ನೇ ಹಂತ, ಶಾಕಾಂಬರಿ ನಗರ, ಸಾರಕ್ಕಿ ಮಾರುಕಟ್ಟೆ, ಆರ್‌ಬಿಐ ಲೇಔಟ್, ಜೆಪಿ ನಗರ 5 ನೇ ಹಂತ, ದೊರೆಸಾನಿಪಾಳ್ಯ, ಬನಶಂಕರಿ, ಮಾರತ್‌ವ್ಯೂ , ಚೌಡೇಶ್ವರಿ ದೇವಸ್ಥಾನ ರಸ್ತೆ, ಗಾಂಧಿನಗರ ರಸ್ತೆ, ಭೋಗನಹಳ್ಳಿ ಮುಖ್ಯರಸ್ತೆ, ಪಾಣತ್ತೂರು ಮುಖ್ಯರಸ್ತೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

3.Karnataka Weather Today: ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶದಲ್ಲಿ ಹಿಮಪಾತವಾಗಲಿದೆ ಎಂದು ಭಾರತೀಯ ಇಲಾಖೆ ಮಾಹಿತಿ ನೀಡಿದೆ. ಇದರೊಂದಿಗೆ ಅಂಡಮಾನ್ ನಿಕೋಬಾರ್​ನಲ್ಲಿಯೂ ಸಹ ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು, ಆಂಧ್ರ ಪ್ರದೇಶದ ಕರಾವಳಿ ಭಾಗ, ತಮಿಳುನಾಡಿನ ಹಲವೆಡೆ ಹಾಗೂ ಕೇರಳದಲ್ಲಿ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಲಕ್ಷದ್ವೀಪದಲ್ಲೂ ಸಹ ಹಗುರ ಮಳೆಯಾಗಲಿದೆ ಎಂದು IMD ಹೇಳಿದೆ.

4.Petrol Price Today: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ

Petrol and Diesel Price on Jan 28th 2022: ಪೆಟ್ರೋಲ್‌, ಡೀಸೆಲ್‌ ದರ(Petrol Diesel Price) ಪ್ರತಿನಿತ್ಯ ಬದಲಾಗುತ್ತಲೇ ಇರುತ್ತದೆ. ಈ ಹಿನ್ನೆಲೆ ನೀವು ನಿಮ್ಮ ವಾಹನಗಳಿಗೆ ಇಂಧನ ಹಾಕಿಸಿಕೊಳ್ಳಲು ರಾಜ್ಯದ ವಿವಿಧ ನಗರಗಳಲ್ಲಿ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಇವತ್ತಿನ ಪೆಟ್ರೋಲ್‌, ಡೀಸೆಲ್‌ ಬೆಲೆ ಎಷ್ಟು ಅಂತ ತಿಳ್ಕೋಬೇಕಾ..? ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು 1 ಲೀಟರ್ ಪೆಟ್ರೋಲ್​ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ಇದೇ ರೀತಿ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ ನೋಡಿ..
Published by:Latha CG
First published: