Morning Digest: ಅ.15ರವರೆಗೆ ರಾಜ್ಯದಲ್ಲಿ ಮಳೆ, ಪೆಟ್ರೋಲ್​ ಬೆಲೆ ಏರಿಕೆ, ಚಿನ್ನದ ದರ ಸ್ಥಿರ; ಬೆಳಗಿನ ಟಾಪ್ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.Karnataka Weather Today: ಅಕ್ಟೋಬರ್ 15 ವರೆಗೆ ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷೆ- ಬೆಂಗಳೂರಿನ ಇಂದಿನ ಹವಾಮಾನ ಹೀಗಿರಲಿದೆ

  Karnataka Rains Today ಬೆಂಗಳೂರು(ಅ.12):ಮುಂಗಾರು (Monsoon)ಅಂತ್ಯವಾಗಲು ಶುರುವಾಗಿ ಬಹಳ ದಿನಗಳಾಗಿದೆ, ಆದರೆ ಮಳೆಯ ಅಬ್ಬರ ಮಾತ್ರ ಕಡಿಮೆಯಾಗಿಲ್ಲ. ಒಂದೆಡೆ ವಾಯುಭಾರ ಕುಸಿತ ಹಾಗೂ ಮತ್ತೊಂದೆಡೆ ಜವಾಬ್ (Javab)ಚಂಡಮಾರುತ ಪರಿಣಾಮ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ(Karnataka) ಸಹ ಕಳೆದ 3 ದಿನಗಳಿಂದ ಬೆಂಬಿಡದೆ ಮಳೆಯಾಗುತ್ತಿದೆ(Rainfall). ಈಗಾಗಲೇ ರಾಜ್ಯದಲ್ಲಿ ಅಕ್ಟೋಬರ್ 15ರವರೆಗೆ ಅಧಿಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಅಂಡಮಾನ್ ಸಮುದ್ರದ ಉತ್ತರ ಭಾಗದಲ್ಲಿ ಚಂಡಮಾರುತ ಪರಿಚಲನೆಯಿದೆ. ಇದರ ಪ್ರಭಾವ, ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

  2.Gold Price Today: ಮತ್ತೆ ಯಥಾಸ್ಥಿತಿ ಕಾಯ್ದುಕೊಂಡ ಬಂಗಾರ; ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ

  Gold Rate on October 12 2021: ಕಳೆದ ಕೆಲ ದಿನಗಳಿಂದ ಬಂಗಾರದ ಬೆಲೆ(Gold Price) ನಿರಂತರವಾಗಿ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಶಾಕ್ ಕೊಡುತ್ತಿದೆ. ಆದರೆ ನಿನ್ನೆಯಿಂದ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,940 ರೂ. ಇತ್ತು. ಇಂದೂ ಸಹ ಅದೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 46,940 ರೂ. ಇತ್ತು. ಇಂದೂ ಸಹ ಅದೇ ಬೆಲೆ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ ಚಿನ್ನ ಬೆಲೆ ಎಷ್ಟಿದೆ?: ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 47,890 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 43,900 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

  3.Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

  ಬೆಸ್ಕಾಂ(BESCOM) ಸಹ ಪವರ್ ಕಟ್ (Power Cut)ಮಾಡುತ್ತಿದ್ದು ಜನರ ಸಮಸ್ಯೆಯನ್ನು ಹೆಚ್ಚು ಮಾಡುತ್ತಿದೆ. ಇಂದು ಸಹ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಾಹಿತಿ ನೀಡಿದ್ದು, ಯಾವ್ಯಾವ ಏರಿಯಾಗಳಲ್ಲಿ ವಿದ್ಯುತ್ ಸಮಸ್ಯೆಯಾಗಲಿದೆ ಎಂಬ ಲಿಸ್ಟ್ ಸಹ ನೀಡಿದೆ. ಮಾರುತಿ ನಗರ, ಯಲಹಂಕ ಓಲ್ಡ್ ಟೌನ್, ಯೋಗೀಶ್ ನಗರ, ವಿನಾಯಕ ನಗರ, ಪಂಪ ಲೇಔಟ್ಮ ಸಿಂಧಿ ಸ್ಕೂಲ್, ನೇತಾಜಿ ನಗರ, ವೆಂಕಟೇಗೌಡ ಲೇಔಟ್ , ಜೆಪಿ ನಗರ 5 ನೇ ಹಂತ, ಇಸ್ರೋ ಲೇಔಟ್, ಪೈಪ್ ಲೈನ್, ಕೆಎಸ್ ಲೇಔಟ್ 1 ನೇ ಹಂತ, 14 ನೇ ಮೇನ್, ಸಿದ್ದಾಪುರ, ತೂಬರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

  4.Twitter ಬಳಕೆದಾರ ಮತ್ತು YouTube Influencer ವಿರುದ್ಧ ದೂರು ಸಲ್ಲಿಸಿದ ನಟಿ ಸ್ವರಾ ಭಾಸ್ಕರ್

  ಟ್ವಿಟ್ಟರ್‌ ಬಳಕೆದಾರ ಮತ್ತು ಯೂಟ್ಯೂಬ್ ಇನ್ಫ್ಲುಯೆನ್ಸರ್ ಒಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ತನ್ನನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಬಾಲಿವುಡ್​ ನಟಿ ಸ್ವರಾ ಭಾಸ್ಕರ್ (Swara Bhasker) ಆರೋಪಿಸಿದ್ದಾರೆ. ಅಲ್ಲದೆ, ತನ್ನ ವಿರುದ್ಧ ಕೆಲವು ಸಂದೇಶಗಳನ್ನು ಪ್ರಸಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಲವು ಚಲನಚಿತ್ರ ದೃಶ್ಯಗಳಿಗೆ ಸಂಬಂಧಿಸಿದಂತೆ ಕೆಲವು ಹ್ಯಾಶ್‌ ಟ್ಯಾಗ್‌ಗಳನ್ನು ಸಹ ಹಾಕಿ ಪ್ರಸಾರ ಮಾಡಲಾಗಿದೆ ಎಂದು ನಟಿ ದೂರಿದ್ದಾರೆ. ಈ ದೂರಿನ ಆಧಾರದ ಮೇಲೆ ದೆಹಲಿಯ ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ (Criminal Case) ದಾಖಲಿಸಲಾಗಿದೆ ಮತ್ತು ತನಿಖೆ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಸೆಕ್ಷನ್‌ಗಳಾದ 354 ಡಿ, 509 ಐಪಿಸಿ ಮತ್ತು 67 ಐಟಿ ಕಾಯ್ದೆಗಳನ್ನು ವಿಧಿಸಲಾಗಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

  5.Petrol Price| ಸತತ 14ನೇ ದಿನ ಏರಿಕೆ ಕಾಣುತ್ತಿರುವ ತೈಲ ಬೆಲೆ; 100 ರೂ. ಗಡಿ ದಾಟಿದ ಡೀಸೆಲ್, ಪೆಟ್ರೋಲ್ 110 ರೂ.!

  ಬೆಂಗಳೂರು (ಅಕ್ಟೋಬರ್​ 12): ದೇಶದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ (Petrol - Diesel Price) ಸತತ 14ನೇ ದಿನ ಏರಿಕೆ ಕಾಣುತ್ತಿದ್ದು, ಬೆಲೆ ಏರಿಕೆ ನಾಗಾಲೋಟ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ತೈಲ ಬೆಲೆ ಇಂದು ಮತ್ತೆ ಹೊಸ ಸಾರ್ವಕಾಲಿಕ ದಾಖಲೆ ಬರೆದಿದೆ. ಇಂದು ಬೆಂಗಳೂರಿನಲ್ಲಿ (Bengaluru) ಪೆಟ್ರೋಲ್ ಬೆಲೆ 31 ಪೈಸೆ ಏರಿಸಿ 1 ಲೀಟರ್ ಪೆಟ್ರೋಲ್ ಅನ್ನು 108.08 ರೂ.ಗೆ ಮಾರಾಟ ಮಾಡಲಾಗುತ್ತಿದ್ದರೆ, ಬಳ್ಳಾರಿಯಲ್ಲಿ 1.12 ರೂ ಏರಿಸಿದ್ದು, ಅತ್ಯಧಿಕ 110.27 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ, ಚಿಕ್ಕಮಗಳೂರಿನಲ್ಲಿ (Chikmagalur) ಡೀಸೆಲ್ ಬೆಲೆ 10 ಪೈಸೆ ಏರಿಸಿದ್ದು, ಲೀಟರ್​ ಡೀಸೆಲ್ ಅನ್ನು 100.04 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಹ ಇಂದು ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದ್ದು, ಆ ಕುರಿತ ವಿವರ ಇಲ್ಲಿದೆ.
  Published by:Latha CG
  First published: