Morning Digest: ಉತ್ತರ ಒಳನಾಡಿನಲ್ಲಿ ಇಂದು ಮಳೆ, ದೀಪಿಕಾ ಪಡುಕೋಣೆ ಗರ್ಭಿಣಿ?; ಬೆಳಗಿನ ಟಾಪ್​ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1.Karnataka Weather Today: ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಧಿಕ ಮಳೆಯ ನಿರೀಕ್ಷೆ- ಬೆಂಗಳೂರಿನ ಹವಾಮಾನ ಹೀಗಿರಲಿದೆ

Karnataka Rains Today ಬೆಂಗಳೂರು(ಅ.18):ಅರಬ್ಬಿ ಸಮುದ್ರದಲ್ಲಿನ(Arabian Sea) ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಕೇರಳ(Kerala) ಮತ್ತು ಕರ್ನಾಟಕದಲ್ಲಿ(Karnataka) ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ(Rainfall) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ(IMD) ನೀಡಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

2.Gold Price Today: ಆಭರಣ ಪ್ರಿಯರಿಗೆ ಗುಡ್ ​ನ್ಯೂಸ್; ಬೆಂಗಳೂರಿನಲ್ಲಿ ಇಳಿಕೆಯಾದ ಚಿನ್ನದ ಬೆಲೆ

Gold Rate on October 18 2021: ಕಳೆದ ಒಂದು ವಾರದಿಂದ ಸತತ ಏರಿಕೆ ಕಂಡಿದ್ದ ಬಂಗಾರದ ಬೆಲೆ(Gold Price) ನಿನ್ನೆಯಿಂದ ಸ್ಥಿರತೆ ಕಾಯ್ದುಕೊಳ್ಳುತ್ತಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,070 ರೂ. ಇತ್ತು. ಇಂದೂ ಸಹ ಅದೇ ಬೆಲೆಯನ್ನು ಕಾಯ್ದುಕೊಂಡಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,070 ರೂ. ಇತ್ತು. ಇಂದೂ ಸಹ ಅದೇ ಬೆಲೆಯಿದ್ದು, ಯಾವುದೇ ವ್ಯತ್ಯಾಸವಾಗಿಲ್ಲ. ಬೆಂಗಳೂರಿನಲ್ಲಿ ಚಿನ್ನ ಬೆಲೆ ಎಷ್ಟಿದೆ?: ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,200 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,180 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.



3.Petrol Price| ಮುಂದುವರೆದ ತೈಲ ಬೆಲೆ ಏರಿಕೆ ನಾಗಾಲೋಟ, 111 ರೂ. ಗಡಿ ದಾಟಿದ ಪೆಟ್ರೋಲ್; ಜನ ಸಾಮಾನ್ಯರು ಕಂಗಾಲು!

ಬೆಂಗಳೂರು (ಅಕ್ಟೋಬರ್​ 18); ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ (Petrol and Diesel Price) ನಿಯಂತ್ರಣಕ್ಕೆ ಬರುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಸೋಮವಾರವಾದ ಇಂದೂ ಸಹ ತೈಲ ಬೆಲೆಯಲ್ಲಿ ಏರಿಕೆ ಕಂಡು ಬಂದಿದ್ದು, ಬಡವರ ಕೈಗೆ ಎಟುಕದಂತಾಗಿದೆ. ಈಗಾಗಲೇ ಎಲ್​ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿರುವ ಜನ ದಿನನಿತ್ಯ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇಂದು ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಸಾರ್ವಕಾಲಿಕ ದಾಖಲೆ ಬರೆದಿವೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Banglore) ಇಂದು 1 ಲೀಟರ್ ಪೆಟ್ರೋಲ್​ಗೆ 37 ಪೈಸೆ ಏರಿಸಿ 109.53 ರೂ ಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಬೆಲೆಯಲ್ಲಿ 37 ಪೈಸೆ ಏರಿಸಿ 100.37 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇನ್ನೂ ದಾವಣಗೆರೆಯಲ್ಲಿ (Davanagere) ಪೆಟ್ರೋಲ್ ಅನ್ನು 1 ಲೀಟರ್​ಗೆ 111.38 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದಲ್ಲದೆ, ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ 111 ರೂ ಗಡಿ ಮುಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.

4.Deepika Padukone ಗರ್ಭಿಣಿ? ಮಗುವಿಗೆ ಹೆಸರು ಹುಡುಕ್ತಿದಾರಂತೆ Ranveer Singh

ನಟ ರಣವೀರ್ ಸಿಂಗ್ (Ranveer Singh)​ ಅವರು ಈಗ ಕಿರುತೆರೆಗೂ ಎಂಟ್ರಿ ಕೊಟ್ಟಿದ್ದಾರೆ. ಇದೇ ಶುಭ ಸಂದರ್ಭದಲ್ಲಿ ತಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಒಂದು ವಿಷಯದ ಕುರಿತಾಗಿ ವೀಕ್ಷಕರ ಜೊತೆ ಹಂಚಿಕೊಂಡಿದ್ದಾರೆ. ಹೌದು, ರಣವೀರ್ ಸಿಂಗ್​ ತಮ್ಮ ಮಗುವಿನ ಹೆಸರಿನ ಹುಡುಕಾಟದಲ್ಲಿರುವುದಾಗಿ ಬಹಿರಂಗ ಪಡಿಸಿದ್ದಾರೆ. ಹೌದು, ರಣವೀರ್ ಸಿಂಗ್ ಅವರಿಗೆ ದೀಪಿಕಾ ಪಡುಕೋಣೆ ಅವರಂತಹ ಮುದ್ದಾದ ಹೆಣ್ಣು ಮಗು ಬೇಕಂತೆ. ಅವರು ಈಗಾಗಲೇ ಮಗುವಿನ ಹೆಸರಿನ ಹುಡುಕಾಟದಲ್ಲಿದ್ದಾರಂತೆ. ಅದಕ್ಕಾಗಿ ಸಾಕಷ್ಟು ಹೆಸರುಗಳನ್ನು ಫೈನಲ್ ಸಹ ಮಾಡಿದ್ದಾರಂತೆ. ಹೀಗೆಂದು ರಣವೀರ್​ ಸಿಂಗ್​ ಹೇಳಿಕೊಂಡಿದ್ದಾರೆ.
Published by:Latha CG
First published: