Morning Digest: ಅ.22ರವರೆಗೆ ರಾಜ್ಯದಲ್ಲಿ ಮಳೆ, ಚಿನ್ನದ ದರ ಸ್ಥಿರ, ಪೆಟ್ರೋಲ್ ಬೆಲೆ ಏರಿಕೆ ; ಬೆಳಗಿನ ಟಾಪ್ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.Karnataka Weather Today: ಅಕ್ಟೋಬರ್ 22ರವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ -ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

  Karnataka Rains Today ಬೆಂಗಳೂರು(ಅ.19):ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಆರ್ಭಟ(Heavy rainfall) ಹೆಚ್ಚಿದೆ. ನೈರುತ್ಯ ಮುಂಗಾರು ಕರಾವಳಿ ಭಾಗದಲ್ಲಿ(Coastal Karnataka) ಹೆಚ್ಚಿನ ಪರಿಣಾಮ ಬೀರಲಿದೆ. ಅಲ್ಲದೇ ಅರಬ್ಬೀ ಸಮುದ್ರದ ವಾಯುಭಾರ ಕುಸಿತದ ಕಾರಣ ಮಳೆ ಹೆಚ್ಚಿನ ದಿನ ಮುಂದುವರೆಯಲಿದೆ. ಹಾಗಾಗಿ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

  2.Gold Price Today: ಬೆಂಗಳೂರಿನಲ್ಲಿ ಏರಿಕೆ ಕಂಡ ಚಿನ್ನದ ಬೆಲೆ; ದೇಶದ ಪ್ರಮುಖ ನಗರಗಳ ಇಂದಿನ ದರ ವಿವರ ಇಲ್ಲಿದೆ

  Gold Rate on October 19 2021: ಕಳೆದ 3 - 4 ದಿನಗಳಿಂದ ದೇಶದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಅಕ್ಟೋಬರ್‌ 16ರಿಂದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೆ, ಬೆಂಗಳೂರಿನಲ್ಲಿ (Bengaluru) ಇಂದು ಮತ್ತೆ ಚಿನ್ನದ ಬೆಲೆ ಏರಿಕೆ(Gold Price Hike) ಕಂಡಿದ್ದು, ಆಭರಣ ಪ್ರಿಯರಿಗೆ ನಿರಾಸೆ ತಂದಿದೆ. ಇಂದು 10 ಗ್ರಾಂ ಚಿನ್ನಕ್ಕೆ 110 ರೂಪಾಯಿ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,070 ರೂ. ಇತ್ತು. ಇಂದು ಸಹ ಅದೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,070 ರೂ. ಇತ್ತು. ಇಂದೂ ಕೂಡ ಅದೇ ಬೆಲೆಯಿದ್ದು ಯಾವುದೇ ವ್ಯತ್ಯಾಸವಾಗಿಲ್ಲ.

  3.Petrol Price| ಜಿಲ್ಲೆಗಳಲ್ಲಿ ತೈಲ ಬೆಲೆ ಮತ್ತೆ ಏರಿಳಿತ; ನಿಮ್ಮ ನಗರದಲ್ಲಿ ಪೆಟ್ರೋಲ್-ಡೀಸೆಲ್ ಎಷ್ಟು ದುಬಾರಿ? ಇಲ್ಲಿದೆ ವಿವರ!

  ಬೆಂಗಳೂರು (ಅಕ್ಟೋಬರ್​ 19); ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆ (Petrol and Diesel Price) ನಿಯಂತ್ರಣಕ್ಕೆ ಬರುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಮಂಗಳವಾರದವಾದ ಇಂದೂ ಸಹ ತೈಲ ಬೆಲೆಯಲ್ಲಿ ಏರಿಕೆ ಕಂಡು ಬಂದಿದ್ದು, ಬಡವರ ಕೈಗೆ ಎಟುಕದಂತಾಗಿದೆ. ಈಗಾಗಲೇ ಎಲ್​ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿರುವ ಜನ ದಿನನಿತ್ಯ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇಂದು ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಬೆಂಗಳೂರಿನಲ್ಲಷ್ಟೆ ಸ್ಥಿರವಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಲ್ಲೂ ಸಾಕಷ್ಟು ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Banglore) ಇಂದು 1 ಲೀಟರ್ ಪೆಟ್ರೋಲ್​ ಅನ್ನು 109.53 ರೂ ಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 100.37 ರೂ.ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.

  4.CoronaVirus| ಮುಂಬೈನಲ್ಲಿ ಶೂನ್ಯಕ್ಕಿಳಿದ ಕೊರೋನಾ ಸಾವಿನ ಸಂಖ್ಯೆ; ಈ ಯುದ್ಧದಲ್ಲಿ ಮಹಾನಗರ ಗೆದ್ದದ್ದು ಹೇಗೆ?

  ಮುಂಬೈ (ಅಕ್ಟೋಬರ್​ 19); ಕಳೆದ ವರ್ಷ ಭಾರತಕ್ಕೆ ಮಾರಕ ಕೊರೋನಾ (CoronaVirus) ಸಾಂಕ್ರಾಮಿಕ ವ್ಯಾಪಿಸಿದ ಸಂದರ್ಭದಲ್ಲಿ ಮುಂಬೈನಲ್ಲಿ ಈ ಸೋಂಕಿಗೆ ಮೊದಲ ಬಲಿಯಾಗಿದ್ದು, ಮಾರ್ಚ್ 17, 2020 ರಂದು. ಈ ದಿನ ಮುಂಬೈ (Mumbai) ತನ್ನ ಮೊದಲ ಕೋವಿಡ್ -19 ಸಾವನ್ನು ವರದಿ ಮಾಡಿತ್ತು. ಇಡೀ ದೇಶದಲ್ಲಿ ಅತೀ ಹೆಚ್ಚು ಸೋಂಕು ಪೀಡಿತ ರಾಜ್ಯ ಎಂಬ ಕುಖ್ಯಾತಿಗೂ ಮುಂಬೈ ಒಳಗಾಗಿತ್ತು. ಪರಿಣಾಮ ಮಹಾರಾಷ್ಟ್ರ (Maharashtra) ಸರ್ಕಾರ ಸೋಂಕಿನ ವಿರುದ್ಧ ದೊಡ್ಡ ಹೋರಾಟವನ್ನೇ ಕೈಗೊಂಡಿತ್ತು. ಪರಿಣಾಮ ಕಳೆದ ಮಾರ್ಚ್ 17 ರ ನಂತರ ಮೊದಲ ಅಕ್ಟೋಬರ್​ 17 ರಂದು ಮೊದಲ ಕೊರೋನಾ ವೈರಸ್ ಸಂಬಂಧಿತ ಸಾವು ದಾಖಲಾಗಿದೆ. ಕಳೆದ 6 ತಿಂಗಳಿನಿಂದ ಮುಂಬೈನಲ್ಲಿ ಒಂದೇ ಒಂದು ಸಾವು ದಾಖಲಾಗದೆ ಇರುವುದು ವಿಶೇಷ.
  Published by:Latha CG
  First published: