Morning Digest: ನಾಳೆ ಭಾರತ್ ಬಂದ್, ರಾಜ್ಯದಲ್ಲಿ ಮಳೆಯ ಆರ್ಭಟ, ಚಿನ್ನದ ಬೆಲೆ ಸ್ಥಿರ; ಬೆಳಗಿನ ಟಾಪ್ ನ್ಯೂಸ್​ಗಳು

Top News of the day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.Bharat Bandh: ನಾಳೆ ಭಾರತ್ ಬಂದ್, ಕರ್ನಾಟಕದಲ್ಲಿ ಬಂದ್​ ಯಶಸ್ವಿಯಾಗುತ್ತಾ? ಅಂದು ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

  ಬೆಂಗಳೂರು(ಸೆ.26): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ(Agri Laws) ವಿರುದ್ಧ ರೈತಪರ ಸಂಘಟನೆಗಳು(Farmers Associations) ಮತ್ತೆ ಸಿಡಿದೆದ್ದಿದ್ದು, ನಾಳೆ ಅಂದರೆ ಸೆ.27ರಂದು ಭಾರತ್​ ಬಂದ್​ಗೆ(Bharat Bandh) ಕರೆ ನೀಡಿವೆ. ಹೀಗಾಗಿ ಕೆಲವು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಸೋಮವಾರ ಭಾರತ್ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆ, ಕರ್ನಾಟಕ(Karnataka Bandh)ವೂ ಬಹುತೇಕ ಬಂದ್ ಆಗುವ ನಿರೀಕ್ಷೆ ಇದೆ. ಸಂಯುಕ್ತ ಕಿಸಾನ್ ಮೋರ್ಚಾ(Samyuktha Kisan Morcha) ಭಾರತ್ ಬಂದ್​ಗೆ ಕರೆ ಕೊಟ್ಟಿದ್ದು, ಇನ್ನೂ ಹಲವು ಸಂಘಟನೆಗಳು ಬೆಂಬಲ ನೀಡಿವೆ. ದೇಶಾದ್ಯಂತ 500ಕ್ಕೂ ಹೆಚ್ಚು ಸಂಘಟನೆಗಳು ಭಾರತ್​ ಬಂದ್​ಗೆ ಬೆಂಬಲ ನೀಡಲಿವೆ. ಕರ್ನಾಟಕ ಬಂದ್​​ಗೆ ಕಬ್ಬು ಬೆಳೆಗಾರರ ಸಂಘ, ರೈತ ಸಂಘ, ಹಸಿರು ಸೇನೆ ಸೇರಿ ಕೆಲ ಸಂಘಟನೆಗಳು ಬೆಂಬಲ ನೀಡಲಿವೆ. ಬಂದ್​​​ ಇದ್ರೂ ಕರ್ನಾಟಕದಲ್ಲಿ ಎಲ್ಲವೂ ಯಥಾಸ್ಥಿತಿ ಇರುವ ಸಾಧ್ಯತೆ ಇದೆ. ಬಹುತೇಕ ಸಂಘಟನೆಗಳು ಬಂದ್​ಗೆ ನೈತಿಕ ಬೆಂಬಲ ನೀಡಲಿವೆ. ನೈತಿಕ ಬೆಂಬಲ ನೀಡುತ್ತೇವೆ, ಆದ್ರೆ ಅಂಗಡಿ ಮುಂಗಟ್ಟು ಬಂದ್​ ಮಾಡಲ್ಲ ಎಂದು ಹೇಳುತ್ತಿದ್ದಾರೆ.

  2.Karnataka Weather Today: ರಾಜ್ಯದಲ್ಲಿ ಹೆಚ್ಚಾಗಲಿದೆ ವರುಣನ ಆರ್ಭಟ- ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..

  Karnataka Rains Today: ಬೆಂಗಳೂರು(ಸೆ.26):ರಾಜ್ಯದಲ್ಲಿ ಮತ್ತೆ ಮುಂಗಾರು(Monsoon) ಚುರುಕುಗೊಂಡಿದ್ದು, ಮುಂದಿನ 3 ದಿನಗಳ ಕಾಲ ಭಾರಿ ಮಳೆಯಾಗುವ(Heavy Rainfall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ಧಾರವಾಡದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಾನ್ಸೂನ್ ಈಶಾನ್ಯ ಅರೇಬಿಯನ್ ಸಮುದ್ರ ಇಂದೋರ್, ರಾಯ್ಪುರ್, ಬಾಲಸೋರ್ ಮತ್ತು ನಂತರ ಆಗ್ನೇಯ ದಿಕ್ಕಿನಲ್ಲಿ ಉತ್ತರ ಮತ್ತು ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶದ ಮೂಲಕ ಹಾದು ಹೋಗುತ್ತಿದೆ.

  3.Gold Price Today: ಇಂದು ಏರಿಕೆ ಕಾಣದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಇಂದಿನ ರೇಟ್ ಹೀಗಿದೆ..!

  Gold Rate on September 26 2021 | ಚಿನ್ನ ಖರೀದಿಸುವ ಯೋಚನೆಯಲ್ಲಿದ್ದೀರಾ? ಮತ್ಯಾಕೆ ತಡ ಇಂದೇ ಹೋಗಿ ಬಂಗಾರ ಖರೀದಿಸಿ. ಯಾಕೆಂದರೆ ಕಳೆದ 2 ದಿನಗಳಿಂದ ಗಣನೀಯವಾಗಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Price) ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಆಭರಣ ಪ್ರಿಯರು ಚಿನ್ನ ಖರೀದಿಸಲು ಇದೇ ಸಕಾಲವಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,240 ರೂ. ಇತ್ತು. ಇಂದೂ ಸಹ ಅದೇ ಬೆಲೆಯನ್ನು ಕಾಯ್ದುಕೊಂಡಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆ ಕಂಡಿದೆ. ನಿನ್ನೆ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 46,240 ರೂ. ಇತ್ತು. ಇಂದೂ ಸಹ ಅದೇ ಬೆಲೆ ಇದೆ.

  4.Delhi's Rohini Court shoot out Case: ಮೂವರ ಸಾವಿಗೆ ಕಾರಣವಾದ ದೆಹಲಿ ಕೋರ್ಟ್​ ಶೂಟೌಟ್ ಪ್ರಕರಣ; ಇಬ್ಬರ ಬಂಧನ!

  ದೆಹಲಿಯ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಗುಂಡಿನ ಚಕಮಕಿ ನಡೆದಿದ್ದು, ಈ ಗಲಭೆ ವೇಳೆ ಒಬ್ಬ ಗ್ಯಾಂಗ್​ ಸ್ಟರ್​ ಮತ್ತು ಇತರೆ ಮೂವರು ಸಾವನ್ನಪ್ಪಿದ್ದರು. ಮೋಸ್ಟ್​ ವಾಂಟೆಂಡ್ ಕ್ರಿಮಿನಲ್ ಆಗಿದ್ದ ಜೀತೇಂದರ್ ಗೋಗಿ (Gangster Jitender Gogi) ಹಲವು ಕ್ರಿಮಿನಲ್ ಪ್ರಕರಣಗಳಿಗಾಗಿ ಬಂಧಿಸಿ ತಿಹಾರ್​ (Tihar Jail) ಜೈಲಿನಲ್ಲಿಡಲಾಗಿತ್ತು. ಶುಕ್ರವಾರ ವಿಚಾರಣೆಗಾಗಿ ಆತನನ್ನು ಕೋರ್ಟ್​ಗೆ ಹಾಜರುಪಡಿಸಿದ್ದ ವೇಳೆ ಗುಂಡಿನ ದಾಳಿಯಾಗಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೆಹಲಿಯ ರೋಹಿಣಿ ನ್ಯಾಯಾಲಯದ ( Delhi’s Rohini court) ಆವರಣದಲ್ಲಿ ಈ ಗುಂಡಿನ ದಾಳಿ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರ ತಂಡ ಸಹ ಗುಂಡಿನ ದಾಳಿ ನಡೆಸಿತ್ತು. ಆದರೆ, ದಾಳಿಕೋರರು ತಪ್ಪಿಸಿಕೊಂಡಿದ್ದರು. ಆದರೆ, ಪ್ರಕರಣ ನಡೆದು 2 ದಿನಗಳ ಬಳಿಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಮಂಗ್ (Umang) ಮತ್ತು ವಿನಯ್ (Vinay) ಎಂದು ಗುರುತಿಸಲಾಗಿದೆ.

  5.Petrol Price| ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೈಲ ಬೆಲೆ ಅಲ್ಪ ಇಳಿಕೆ; ಉತ್ತರ ಕನ್ನಡದಲ್ಲಿ 1 ಲೀಟರ್ ಪೆಟ್ರೋಲ್ 95 ಪೈಸೆ ಅಗ್ಗ!

  ಬೆಂಗಳೂರು (ಸೆಪ್ಟೆಂಬರ್​ 26); ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Banglore) ಕಳೆದ ಎರಡು ವಾರಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ (Petrol-Diesel Price) ಯಾವುದೇ ಬದಲಾವಣೆ ಇಲ್ಲ. ಆದರೆ, ತೆರಿಗೆಯಲ್ಲಿನ ವ್ಯತ್ಯಾಸ ಮತ್ತು ಇನ್ನಿತರೆ ಕಾರಣಗಳಿಂದಾಗಿ ರಾಜ್ಯ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಮಾತ್ರ ಅಲ್ಪ ಬದಲಾವಣೆ ಉಂಟಾಗಿದೆ. ಬೆಂಗಳೂರಿನಲ್ಲಿ ಒಂದು ಲಿಟರ್​ ಪೆಟ್ರೋಲ್ ಅನ್ನು 104.70 ರೂ.ಗೆ ಮಾರಾಟ ಮಾಡಲಾಗುತ್ತಿದ್ದರೆ, ಡೀಸೆಲ್ 94.04 ರೂ.ಗೆ ಮಾರಾಟ ಮಾಡಲಾ ಗುತ್ತಿದೆ. ಆದರೆ, ಬಳ್ಳಾರಿ (Bellary) ಜಿಲ್ಲೆಯಲ್ಲಿ ಪೆಟ್ರೋಲ್ ಅನ್ನು ಅತ್ಯಧಿಕ 106.54 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ, ಇಂದು ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್​ಗೆ ಅತ್ಯಧಿಕ 96 ಪೈಸೆ ಇಳಿಸಿದ್ದು, 105.58 ರೂ.ಗೆ ಮಾರಾಟ ಮಾಡಲಾಗುತ್ತಿದೆ.
  Published by:Latha CG
  First published: