Morning Digest: ಇಂದು ನೂತನ ಸಚಿವರ ಪ್ರಮಾಣ ವಚನ, ಕರಾವಳಿ ಜಿಲ್ಲೆಗಳಲ್ಲಿ ಮಳೆ; ಇಂದಿನ ಪ್ರಮುಖ ಸುದ್ದಿಗಳಿವು

ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1.ಬೊಮ್ಮಾಯಿ ಸಂಪುಟದ ಸಂಭಾವ್ಯ ಸಚಿವರ ಹೊಸ ಪಟ್ಟಿ; ಸೋಮಣ್ಣ, ಚವ್ಹಾಣ್ ಮೊದಲಾದವರಿಗೆ ಕೊಕ್

  ಮೂರು ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟು ಸಂಪುಟ ಪಟ್ಟಿ ಅಂತಿಮಗೊಳಿಸಿಕೊಂಡು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ಮರಳಿದ್ದಾರೆ. ಇಂದು ಮಧ್ಯಾಹ್ನ 2:15ಕ್ಕೆ ನೂತನ ಮಂತ್ರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ. ರಾಜಭನವದ ಗಾಜಿನಮನೆಯಲ್ಲಿ ಈ ಕಾರ್ಯಕ್ರಮಕ್ಕಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇನ್ನು, ವರಿಷ್ಠರು ಸಂಪುಟ ಪಟ್ಟಿ ಅಂತಿಮಗೊಳಿಸಿದ್ದರೂ ಕೆಲ ಬದಲಾವಣೆಗಳಾಗುವ ಸಾಧ್ಯತೆ ಇದೆ. ಹಲವು ಆಕಾಂಕ್ಷಿಗಳು ಕೊನೆಯ ಕ್ಷಣದವರೆಗೂ ಪ್ರಯತ್ನ ಮುಂದುವರಿಸುತ್ತಿದ್ದಾರೆ. ಇದೇ ವೇಳೆ, ಕೆಲ ಸಚಿವರಿಗೆ ನಿನ್ನೆ ರಾತ್ರಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಡೆಯಿಂದ ಪ್ರಮಾಣ ವಚನಕ್ಕೆ ಸಿದ್ಧರಾಗುವಂತೆ ಕರೆ ಬಂದಿದೆ. ಬಿ ಸಿ ಪಾಟೀಲ್, ಪೂರ್ಣಿಮಾ ಶ್ರೀನಿವಾಸ್ ಮೊದಲಾದವರು ತಮಗೆ ಕರೆ ಬಂದಿರುವುದನ್ನು ಖಚಿತಪಡಿಸಿದ್ದಾರೆ. ನ್ಯೂಸ್18 ಕನ್ನಡಕ್ಕೆ ಸಂಭಾವ್ಯ ಸಚಿವರ ಹೊಸ ಪಟ್ಟಿ ಸಿಕ್ಕಿದ್ದು, ಅದರಲ್ಲಿರುವ ಪ್ರಕಾರ ಮುನಿರತ್ನ, ಅರಗ ಜ್ಞಾನೇಂದ್ರ, ಕೆ ಪಿ ಮಾಧುಸ್ವಾಮಿ, ಆರ್ ಅಶೋಕ್ ಮೊದಲಾದವರ ಹೆಸರು ಇದೆ. ಸಂಪುಟದಿಂದ ಹೊರಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದ ಕೆ ಎಸ್ ಈಶ್ವರಪ್ಪ ಅವರನ್ನ ಸಂಪುಟದಲ್ಲಿ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಈಶ್ವರಪ್ಪ ಪರವಾಗಿ ಪ್ರಭಾವಿ ಆರೆಸ್ಸೆಸ್ ನಾಯಕರೊಬ್ಬರು ಶಿಫಾರಸು ಮಾಡಿರುವುದು ತಿಳಿದುಬಂದಿದೆ.

  2.Karnataka Weather Today: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ; ಬೆಂಗಳೂರಿನ ವಾತಾವರಣ ಹೇಗಿರಲಿದೆ?

  ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ 76 ಮಿ.ಮೀ ಮಳೆಯಾಗಿದೆ. ನಿನ್ನೆ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗಿರುವ ಪ್ರದೇಶ ಇದಾಗಿದೆ.
  ನಿನ್ನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆರಾಯ ನಿನ್ನೆ ಸಂಜೆ ಬೆಂಗಳೂರಿಗೆ ತಂಪೆರೆದಿದ್ದಾನೆ. ಇಂದು ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

  3.Petrol Price Today: ಬೆಂಗಳೂರು ಹಾಗೂ ಇತರೆ ನಗರಗಳಲ್ಲಿ ಇಂದಿನ ಪೆಟ್ರೋಲ್​-ಡೀಸೆಲ್ ದರ ಹೀಗಿದೆ...!

  Petrol, Diesel Prices on August 4 ಬೆಂಗಳೂರು: ನಿರಂತರವಾಗಿ ಏರಿಕೆ ಕಾಣುತ್ತಾ ಬಂದಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಳೆದ 18 ದಿನಗಳಿಂದ ತಟಸ್ಥವಾಗಿದೆ. ಜುಲೈ 17ರಿಂದ ಪೆಟ್ರೋಲ್ ಬೆಲೆ ಯಾವುದೇ ಏರಿಕೆ ಕಂಡಿಲ್ಲ. ಆದರೆ, ಮೇ 4ರಿಂದ ಇಲ್ಲಿಯವರೆಗೆ ಹಲವು ಬಾರಿ ಬೆಲೆ ಹೆಚ್ಚಳಗೊಂಡ ಪರಿಣಾಮ ಈ ಅವಧಿಯಲ್ಲಿ ಪೆಟ್ರೋಲ್ 11 ರೂ ದುಬಾರಿಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105.25 ರೂ ದರ ಇದೆ. ಡೀಸೆಲ್ ಬೆಲೆ 95.26 ರೂ ನಲ್ಲೇ ಮುಂದುವರಿದಿದೆ. ಮಹಾನಗರಿಗಳ ಪೈಕಿ ಮುಂಬೈನಲ್ಲಿ ಪೆಟ್ರೋಲ್ ಡೀಸೆಲ್ ಅತಿ ದುಬಾರಿ ಇದೆ. ಈ ವಾಣಿಜ್ಯ ನಗರಿಯಲ್ಲಿ ಪೆಟ್ರೋಲ್ ಬೆಲೆ 107.83 ಇದ್ದರೆ, ಡೀಸೆಲ್ ದರ 97.43 ರೂ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 101.84 ರೂ ಇದೆ. ಇಲ್ಲಿ ಡೀಸೆಲ್ ಬೆಲೆ ಇನ್ನೂ 90 ರೂ ಗಡಿ ಮುಟ್ಟಿಲ್ಲ.

  4. ‘ಓಲೆಕಾರ್​ಗೆ ಮಂತ್ರಿಸ್ಥಾನ ನೀಡದಿದ್ದರೆ ಸಿಎಂ ಹಾವೇರಿಗೆ ಕಾಲಿಡಲು ಬಿಡಲ್ಲ’

  ದೆಹಲಿಯಲ್ಲಿ ಅನೇಕ ಶಾಕಸರು ಹಲವು ದಿನಗಳಿಂದ ಅಲ್ಲೇ ಬೀಡುಬಿಟ್ಟು, ಮಂತ್ರಿಗಿರಿಗಾಗಿ ಭರ್ಜರಿ ಒತ್ತಡ, ಲಾಬಿ ನಡೆಸುತ್ತಿದ್ದಾರೆ. ಇತ್ತ ರಾಜೀನಾಮೆ ಬಳಿಕವೂ ಮಾಜಿ ಸಿಎಂ ಯಡಿಯೂರಪ್ಪ ನಿವಾಸ ಪವರ್ ಸೆಂಟರ್ ಆಗಿ ಹೊರಹೊಮ್ಮಿದ್ದು ಇಲ್ಲಿಯೂ ಅನೇಕರು ಯಡಿಯೂರಪ್ಪ ಮೇಲೆ ಒತ್ತಡ ಹೇರುತ್ತಿದ್ದಾರೆ. ಅದರಲ್ಲೂ ಹಾವೇರಿ ಶಾಸಕ ನೆಹರು ಓಲೆಕಾರ್ ಅವರ ಬೆಂಬಲಿಗರಂತೂ ನಿತ್ಯವೂ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು.ಕಳೆದ ಮೂರು ದಿನಗಳಿಂದ ಯಡಿಯೂರಪ್ಪ ನಿವಾಸಕ್ಕೆ ಬರುತ್ತಿರುವ ನೆಹರು ಓಲೆಕಾರ್ ಅವರ ಬೆಂಬಲಿಗರು ನಿನ್ನೆ ತುಸು ಹೆಚ್ಚೇ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಕೂಡ ನಮ್ಮ ಹಾವೇರಿ ಜಿಲ್ಲೆಯವರೇ. ಆದರೂ ನೆಹರು ಓಲೆಕಾರ್ ಅವರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ನೀಡಬೇಕು. ಇಲ್ಲವಾದರೆ ನಾವು ಸುಮ್ಮನಿರಲು ಸಾಧ್ಯವಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿಗೆ ಕಾಲಿಡಲು ಬಿಡುವುದಿಲ್ಲ. ಅವರು ಆಗಮಿಸಿದರೆ ಅಲ್ಲೇ ಘೇರಾವ್ ಹಾಕಿ ತಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು.
  Published by:Latha CG
  First published: