Morning Digest: ಮೆಹುಲ್ ಚೋಕ್ಸಿಗೆ ಜಾಮೀನು, ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ; ಇಂದಿನ ಪ್ರಮುಖ ಸುದ್ದಿಗಳಿವು

ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1. Karnataka Weather Update: ರಾಜ್ಯದಲ್ಲಿ ಜುಲೈ 16ರವರೆಗೆ ಭಾರೀ ಮಳೆ; ಆರೆಂಜ್ ಅಲರ್ಟ್​ ಘೋಷಣೆ

  ರಾಜ್ಯದಲ್ಲಿ ಈಗಾಗಲೇ ನೈರುತ್ಯ ಮಾನ್ಸೂನ್​ನಿಂದಾಗಿ ಉತ್ತಮ ಮಳೆಯಾಗುತ್ತಿದೆ. ಅಲ್ಲದೆ, ಜುಲೈ 16ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ. "ಸೋಮವಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಕೂಡ ಉತ್ತಮ ಮಳೆಯಾಗಿದೆ. ಜುಲೈ 16ರವರೆಗೂ ಮಳೆ ಮುಂದುವರೆಯಲಿದ್ದು, ಅಧಿಕ ಮಳೆಯಾಗಲಿದೆ" ಎಂದು ಹವಾಮಾನ ಇಲಾಖೆ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

  2. Mehul Choksi: ಮೆಹುಲ್ ಚೋಕ್ಸಿಗೆ ಡಾಮಿನಿಕಾ ಕೋರ್ಟ್ ಜಾಮೀನು; ಭಾರತಕ್ಕೆ ತಾತ್ಕಾಲಿಕ ಹಿನ್ನಡೆ

  ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಉದ್ಯಮಿ ಮೆಹುಲ್ ಚೋಕ್ಸಿ ಅವರನ್ನ ಬಂಧಿಸಿ ಭಾರತಕ್ಕೆ ವಾಪಸ್ ತರುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಮತ್ತೆ ಹಿನ್ನಡೆ ಆಗಿದೆ. ಡಾಮಿನಿಕಾ ದೇಶದ ಉಚ್ಚ ನ್ಯಾಯಾಲಯವೊಂದು ಮೆಹುಲ್ ಚೋಕ್ಸಿಗೆ ಜಾಮೀನು ನೀಡಿದೆ. ಇದರಿಂದ ಚೋಕ್ಸಿ ಕೆರಿಬಿಯನ್ ದ್ವೀಪವಾದ ಆಂಟಿಗುವಾ ಮತ್ತು ಬರ್ಬುಡಾಗೆ ಹೋಗಲು ಅನುಮತಿ ಸಿಕ್ಕಿದೆ. ವೈದ್ಯಕೀಯ ಚಿಕಿತ್ಸೆಯ ಕಾರಣಕ್ಕೆ ನೀಡಲಾಗಿರುವ ಜಾಮೀನಿಗೆ 10 ಸಾವಿರ ಕೆರಿಬಿಯನ್ ಡಾಲರ್ (East Caribbean Dollar) ಹಣದ ಬಾಂಡ್ ಪಡೆಯಲಾಗಿದೆ.

  3. Petrol Price Today| ಡೀಸೆಲ್ ಬೆಲೆ ಸ್ಥಿರ, ಪೆಟ್ರೋಲ್ ಬೆಲೆ ಮತ್ತೆ 29 ಪೈಸೆ ಏರಿಕೆ!

  ದೇಶದಲ್ಲಿ ತೈಲ ಬೆಲೆ ನಾಗಾಲೋಟ ಮುಂದುವರೆದಿದೆ. ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯನ್ನು ಇಂದು ಮತ್ತೆ ಹೆಚ್ಚಿಸಲಾಗಿದೆ. ಪೆಟ್ರೋಲ್ 29 ಪೈಸೆಗಳಷ್ಟು ದುಬಾರಿಯಾದರೆ, ಡೀಸೆಲ್ ಬೆಲೆ ಸ್ಥಿರವಾಗಿದೆ. ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಮಂಗಳವಾರ ಪ್ರತಿ ಲೀಟರ್‌ಗೆ 101.48 ರೂ. ಅದೇ ಸಮಯದಲ್ಲಿ ಡೀಸೆಲ್ ಅನ್ನು ಲೀಟರ್​ಗೆ 89.72 ರೂ.ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್​ಗೆ 104.58 ರೂ ಮತ್ತು ಡೀಸೆಲ್ 95.26 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಪ್ರಸ್ತುತ, ದೇಶದ 17 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಲಡಾಖ್, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ತಮಿಳುನಾಡು, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ, ದೆಹಲಿ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ಈ 17 ರಾಜ್ಯಗಳಲ್ಲಿ ಪೆಟ್ರೋಲ್ ಇದೀಗ ದುಬಾರಿಯಾಗಿದೆ.  4. National Education Policy: ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣ ಜಾರಿ; ಡಿಸಿಎಂ ಅಶ್ವತ್ಥ ನಾರಾಯಣ

  2030 ರ ಹೊತ್ತಿಗೆ ಶಿಕ್ಷಣ ನೀತಿಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರಕಾರಿ ಕಾಲೇಜುಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ. ಎನ್.‌ ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞರೊಂದಿಗೆ ನಡೆಸಿದ ಚರ್ಚಿಸಿ ಮಾತನಾಡಿದ ಅವರು, ಈ ಶೈಕ್ಷಣಿಕ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಮಾಡುವ ವಿಶ್ವವಿದ್ಯಾಲಯಗಳು, ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಸ್ವ ಇಚ್ಛೆಯಿಂದ ಯಾರೇ ಮುಂದೆ ಬಂದು ಜಾರಿ ಮಾಡಿದರೂ ಸರಕಾರ ಅವಕಾಶ ನೀಡಲಿದೆ ಎಂದರು.
  Published by:Latha CG
  First published: