Morning Digest: ಇಂದು ಸಂಜೆ 2nd PU ರಿಸಲ್ಟ್ ಪ್ರಕಟ, ನಟಿ ಶಿಲ್ಪಾ ಶೆಟ್ಟಿ ಗಂಡ ರಾಜ್​ ಕುಂದ್ರಾ ಅರೆಸ್ಟ್; ಇಂದಿನ ಪ್ರಮುಖ ಸುದ್ದಿಗಳಿವು

ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1. Karnataka 2nd PU Results Today: ಇಂದು ಸಂಜೆ 4.30ಕ್ಕೆ ಪಿಯು ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ

  ಈ ಬಾರಿ ಕೊರೋನಾ ಆತಂಕದಿಂದ ದ್ವಿತೀಯ ಪಿಯು(2nd PUC) ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿರಲಿಲ್ಲ. ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಹಾಗೂ ಆಂತರಿಕ ಅಂಕಗಳ ಮೌಲ್ಯ ಮಾಪನ ನಡೆಸಿ ಫಲಿತಾಂಶ ಪ್ರಕಟ ಮಾಡಲಾಗುತ್ತಿದೆ. ಅದರಂತೆ ಇಂದು ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ. ಆನ್​ಲೈನ್​ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. http://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ Know My Register Number ಮೂಲಕ ರಿಜಿಸ್ಟರ್​ ನಂಬರ್​ನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಮಂಡಳಿಯ ವೆಬ್​ಸೈಟ್ http://pue.kar.nic.in/​ ತೆರೆದ ಕೂಡಲೇ ನಿಮಗೆ Know my Register Number ಎಂಬ ಲಿಂಕ್​ ಸಿಗುತ್ತದೆ. ಅದನ್ನು ಕ್ಲಿಕ್​ ಮಾಡಿದರೆ ಅದರ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ ರಿಜಿಸ್ಟರ್ ನಂಬರ್​ ಸಿಗಲಿದೆ. ಈ ಲಿಂಕ್​ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ಪಡೆಯಬಹುದು.

  2.Karnataka Weather Today: ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

  ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಜುಲೈ 19ರಿಂದ 23ರವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್​ ಪಾಟೀಲ್​ ಹೇಳಿದ್ದಾರೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮನೆಗಳು ಜಲಾವೃತಗೊಂಡಿವೆ. ಮಳೆಯ ಆರ್ಭಟಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.  ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಜೊತೆಗೆ ಜು.21,22 ಮತ್ತು 23ರಂದು ಈ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​​ ಘೋಷಣೆ ಮಾಡಲಾಗಿದೆ. ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಅಧಿಕ ಮಳೆಯಾಗಲಿದೆ. ಹೀಗಾಗಿ ಜು.21 ಮತ್ತು 22ರಂದು ಹಳದಿ ಅಲರ್ಟ್​​ನ್ನು, ಹಾಗೂ ಜು.23ರಂದು ಆರೆಂಜ್​ ಅಲರ್ಟ್​​ನ್ನು ಘೋಷಿಸಲಾಗಿದೆ. ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಜು. 22 ಮತ್ತು 23ರಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

  3.ರಾಜ್ಯ ಕಾಂಗ್ರೆಸ್ ಬಿಕ್ಕಟ್ಟಿನ ಹಿನ್ನೆಲೆ: ರಾಹುಲ್ ಗಾಂಧಿ ಜೊತೆ ಇಂದು ಸಿದ್ದು-ಡಿಕೆಶಿ ಸಭೆ, ಸಿಎಂ ಅಭ್ಯರ್ಥಿ ನಿರ್ಧಾರ ?

  ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ' ಎಂಬ ವಿಚಾರ ಚರ್ಚೆಯ ಮುನ್ನೆಲೆಗೆ ಬಂದ ನಂತರ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಸೃಷ್ಟಿ ಆಗಿರುವ ಕಂದಕವನ್ನು ಮುಚ್ಚಲು ಕಾಂಗ್ರೆಸ್ ಹೈಕಮಾಂಡ್ ಇಬ್ಬರನ್ನೂ ದೆಹಲಿಗೆ ಕರೆಸಿಕೊಂಡಿದ್ದು ಮಂಗಳವಾರ ಇಬ್ಬರ ನಡುವೆ ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ರಾಜಿ ಸಂಧಾನ ನಡೆಯುವ ಸಾಧ್ಯತೆ ಇದೆ. ಪಂಜಾಬ್ ಕಾಂಗ್ರೆಸ್ ತಲೆನೋವಿನ ಬಳಿಕ ಈಗ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್ ಕಡೆ ಗಮನ ಹರಿಸಿದೆ. ಹೈಕಮಾಂಡ್ ಸೂಚನೆ ಮೇರೆಗೆ ಸೋಮವಾರವೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದೆಹಲಿಗೆ ಬಂದಿದ್ದಾರೆ. ಮಂಗಳವಾರ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಮಹತ್ವದ ಚರ್ಚೆ ನಡೆಯಲಿದೆ. ರಾಹುಲ್ ಗಾಂಧಿ ಜೊತೆಗಿನ ಸಭೆಯಲ್ಲಿ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಕೂಡ ಭಾಗಿ ಆಗಲಿದ್ದಾರೆ.

  4. Shilpa Shetty-Raj Kundra: ಅಶ್ಲೀಲ ಚಿತ್ರ ನಿರ್ಮಾಣ: ಶಿಲ್ಪಾ ಶೆಟ್ಟಿ ಗಂಡ ರಾಜ್​ ಕುಂದ್ರಾ ಬಂಧನ..!
  ನೀಲಿ ಚಿತ್ರಗಳನ್ನು ನಿರ್ಮಿಸಿದ ಆರೋಪದ ಮೇಲೆ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಹಾಗೂ ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ.  ಕಳೆದ ಫೆಬ್ರವರಿಯಲ್ಲಿ ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ, ಮೊಬೈಲ್ ಅಪ್ಲಿಕೇಶನ್​ನಲ್ಲಿ ಅಪ್ಲೋಡ್​ ಮಾಡಿದರವ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.  ಈ ಪ್ರಕರಣದಲ್ಲಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದ್ದು, ರಾಜ್​ ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ವ್ಯಕ್ತಿಯಾಗಿದ್ದಾರೆ ಎನ್ನಲಾಗಿದೆ.
  Published by:Latha CG
  First published: