HOME » NEWS » State » MORNING DIGEST HERE IS IMPORTANT NEWS OF THIS DAY JUNE 11TH LG

Morning Digest: ಪೆಟ್ರೋಲ್​ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ, ಯೂಟರ್ನ್ ಹೊಡೆದ ಬಾಬಾ ರಾಮ್​ದೇವ್; ಇಂದಿನ ಪ್ರಮುಖ ಸುದ್ದಿಗಳಿವು

ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

news18-kannada
Updated:June 11, 2021, 8:55 AM IST
Morning Digest: ಪೆಟ್ರೋಲ್​ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ, ಯೂಟರ್ನ್ ಹೊಡೆದ ಬಾಬಾ ರಾಮ್​ದೇವ್; ಇಂದಿನ ಪ್ರಮುಖ ಸುದ್ದಿಗಳಿವು
ಸಾಂದರ್ಭಿಕ ಚಿತ್ರ
  • Share this:
1.Karnataka Monsoon Rain: ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 1 ವಾರ ಮಳೆ

ಕರ್ನಾಟಕದಲ್ಲಿ ಮುಂಗಾರಿನ ಅಬ್ಬರ ಶುರುವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ 1 ವಾರಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ತೀವ್ರಗೊಳ್ಳಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2.Petrol Price Today: ಗಗನಕ್ಕೇರಿದ ಪೆಟ್ರೋಲ್ ಬೆಲೆ; ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ

ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ದೇಶಾದ್ಯಂತ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಕರೆ ಕೊಟ್ಟಿದೆ. ಕೊರೋನಾ ಹಿನ್ನೆಲೆಯಲ್ಲಿ ಪಕ್ಷವು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದೆ ಎಂದು ತಿಳಿಸಿದೆ. ಆದರೆ ಇನ್ನೊಂದೆಡೆ ಕೇಂದ್ರ ಸರ್ಕಾರವು ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 29 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಬೆಲೆ ಹೆಚ್ಚಳ ಮಾಡಿದೆ.

3.Gold Price Today June 11: ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ?; ಹಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್

Gold Rate Today | ಭಾರತದಲ್ಲಿ 2 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ದರ ಒಂದೇ ದಿನ 200 ರೂ. ಏರಿಕೆ ಕಂಡಿದೆ. ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ದೇಶದ ವಿವಿಧ ನಗರಗಳಲ್ಲಿ ಚಿನ್ನಕ್ಕೆ ಯಾವ ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ನಿನ್ನೆ 50,070 ರೂ. ಇದ್ದುದು, ಇಂದು 49,970 ರೂ.ಗೆ ಕುಸಿದಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,900 ರೂ. ಇದ್ದುದು ಇಂದು 45,800 ರೂ.ಗೆ ಕುಸಿದಿದೆ. ಬೆಂಗಳೂರಿನಲ್ಲಿ ಕುಸಿದಿರುವ ಚಿನ್ನದ ಬೆಲೆ ಭಾರತದ ಬೇರೆ ನಗರಗಳಲ್ಲಿ ಏರಿಕೆಯಾಗಿದೆ. ನಿನ್ನೆ 71,900 ರೂ.ಇದ್ದ ಬೆಳ್ಳಿ ಬೆಲೆ (Silver Price) ಇಂದು 71,400ಕ್ಕೆ ಕುಸಿದಿದೆ.

4.ಕೊರೋನಾ ಲಸಿಕೆ ಪಡೆಯುತ್ತೇನೆ ಎಂದು ಯೂಟರ್ನ್ ಹೊಡೆದ ಬಾಬಾ ರಾಮ್​ದೇವ್ತನಗೆ ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ಕೊರೋನಾ ಲಸಿಕೆ ಪಡೆಯಲ್ಲ ಎಂದು ಹೇಳಿದ್ದ ಖ್ಯಾತ ಯೋಗ ಗುರು ಬಾಬಾ ರಾಮ್​ ದೇವ್​, ಈಗ ಯೂಟರ್ನ್​ ಹೊಡೆದಿದ್ದಾರೆ. ವೈದ್ಯರು ಭೂಲೋಕದ ದೇವದೂತರು ಎಂದು ಡಾಕ್ಟರ್ಸ್​​ನ್ನು ಹೊಗಳಿ, ನಾನು ಆದಷ್ಟು ಬೇಗ ಕೋವಿಡ್ ಲಸಿಕೆ ಪಡೆಯುತ್ತೇನೆ ಎಂದು ಹೇಳಿದ್ದಾರೆ. ಬಾಬಾ ರಾಮ್​ ದೇವ್​ ಇತ್ತೀಚೆಗೆ ಅಲೋಪತಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈಗ ಯೂಟರ್ನ್ ಹೊಡೆದಿರುವ ಬಾಬಾ ರಾಮ್​ದೇವ್, ವೈದ್ಯರನ್ನು ಭೂಮಿಯ ಮೇಲಿನ ದೇವಧೂತರು ಎಂದೆಲ್ಲಾ ಹೊಗಳಿದ್ದಾರೆ. ಜೊತೆಗೆ ಕೋವಿಡ್ ಲಸಿಕೆ ಪಡೆಯಲ್ಲ ಎಂದಿದ್ದ ಅವರು, ಈಗ ಶೀಘ್ರದಲ್ಲೇ ವ್ಯಾಕ್ಸಿನ್​​ ಕೂಡ ಪಡೆಯುವುದಾಗಿ ಹೇಳಿದ್ದಾರೆ.
Published by: Latha CG
First published: June 11, 2021, 8:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories