Morning Digest: ಬಿಎಸ್​ವೈ ಕುರ್ಚಿ ಸದ್ಯಕ್ಕೆ ಸೇಫ್?, SSLC, PUC ಪರೀಕ್ಷೆ ಬಗ್ಗೆ ಇಂದು ನಿರ್ಧಾರ; ಪ್ರಮುಖ ಸುದ್ದಿಗಳತ್ತ ಒಂದು ನೋಟ

ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  1. ಯಡಿಯೂರಪ್ಪ ಕುರ್ಚಿ ಸದ್ಯಕ್ಕೆ ಸೇಫ್​?

  ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಒಲವು ಹೊಂದಿದೆ ಎನ್ನುವಂತೆ ಬರುತ್ತಿದ್ದ ಸುದ್ದಿಗಳಿಗೆ ಬ್ರೇಕ್ ಹಾಕಲು ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ವಿಜಯೇಂದ್ರ ದೆಹಲಿಗೆ ತೆರಳಿದ್ದು, ಸಿಎಂ ನೀಡಿದ್ದ ಸಂದೇಶಗಳನ್ನು ತಲುಪಿಸಿದ್ದಾರೆ. ಕುರ್ಚಿ ಭದ್ರಕ್ಕೆ ಬೇಕಾದ ಕೆಲಸವನ್ನು ಪುತ್ರನ ಮೂಲಕ ಹೈಕಮಾಂಡ್ ಮಟ್ಟದಲ್ಲಿ ಮಾಡುವಲ್ಲಿ ಯಡಿಯೂರಪ್ಪ ಸಫಲರಾಗಿದ್ದಾರೆ ಎನ್ನಲಾಗುತ್ತಿದೆ. ಜೂನ್ 1 ರಂದು ದಿಢೀರನೆ ದೆಹಲಿಗೆ ಬಂದಿದ್ದ ವಿಜಯೇಂದ್ರ ಅಂದೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಆಗಿದ್ದರು. ಅರುಣ್ ಸಿಂಗ್ ಭೇಟಿ ಸಂದರ್ಭದಲ್ಲೂ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ದೂರು ನೀಡಿದ್ದಾರೆ ಎಂದು ಕೇಳಿಬಂದಿತ್ತು.

  2. SSLC, PUC ಪರೀಕ್ಷೆ ಇದ್ಯಾ, ಇಲ್ವಾ? ಇಂದು ನಿರ್ಧಾರ

  ಇಂದು ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವರಾದ ಎಸ್​. ಸುರೇಶ್​ಕುಮಾರ್​ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುಮಾರು 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಇಂದೇ ನಿರ್ಧಾರವಾಗಲಿದೆ. ಶಿಕ್ಷಣ ಸಚಿವರು ಪರೀಕ್ಷೆ ನಡೆಸಬೇಕಾ? ಬೇಡವಾ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಇವರು ತೆಗೆದುಕೊಳ್ಳುವ ನಿರ್ಧಾರ ಲಕ್ಷಾಂತರ ಪೋಷಕರ ಟೆನ್ಶನ್​ಗೆ ಪರಿಹಾರ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

  3. ಕರ್ನಾಟಕಕ್ಕೆ ಮುಂಗಾರು ಮಳೆ ಆಗಮನ ಯಾವಾಗ?

  ಕರ್ನಾಟಕದಲ್ಲಿ ಮುಂಗಾರು ಮಳೆ ಆಗಮನಕ್ಕಾಗಿ ಕ್ಷಣಗಣನೆ ಶುರುವಾಗಿದೆ. ರೈತವರ್ಗ ಆಕಾಶದತ್ತ ಮುಖಮಾಡಿ ಮಳೆರಾಯನ ಬರುವಿಕೆಗಾಗಿ ಕಾಯುತ್ತಿದ್ದಾರೆ. ಇದೇ ವೇಳೆ ಇದೇ ಜೂನ್​ 6 ಅಥವಾ7ರಂದು ಮುಂಗಾರು ಮಳೆ ಕರ್ನಾಟಕ ಪ್ರವೇಶಿಸಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.ಈಗಾಗಲೇ ನಿನ್ನೆ ಕೇರಳಕ್ಕೆ ಮಾನ್ಸೂನ್​ ಎಂಟ್ರಿ ಕೊಟ್ಟಿದೆ. ಮುಂಬರುವ ದಿನಗಳಲ್ಲಿ ಕರ್ನಟಕದಲ್ಲಿಯೂ ಮುಂಗಾರು ಮಳೆಯ ಆರ್ಭಟ ಶುರುವಾಗಲಿದೆ. ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಾನ್ಸೂನ್​ ಮಳೆಯಾಗಲಿದೆ.

  4.ಚಿನ್ನ ಕೊಳ್ಳುವವರಿಗೆ ಗುಡ್ ನ್ಯೂಸ್; ಇಂದು ಬೆಲೆ ಏರಿಕೆ ಇಲ್ಲ

  ನಿನ್ನೆ ಚಿನ್ನದ ಬೆಲೆ ಗಗನಕ್ಕೇರಿದ್ದು, 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ 1330 ರೂಪಾಯಿ ಹೆಚ್ಚಾಗಿತ್ತು. ಇಂದು ಈ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಯಥಾಸ್ಥಿತಿ ಕಾಯ್ದುಕೊಂಡಿದೆ. ಹೀಗಾಗಿ ನೀವೇನಾದರೂ ಚಿನ್ನ ಕೊಳ್ಳಲು ಯೋಚಿಸುತ್ತಿದ್ದರೆ ವಿವಿಧ ನಗರಗಳಲ್ಲಿ ಯಾವ ಬೆಲೆ ಇದೆ ಎಂಬುದನ್ನು ನೋಡಬೇಕಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ Gold Price ನಿನ್ನೆ 50,300 ರೂ. ಇದ್ದುದು, ಇಂದು ಯಥಾಸ್ಥಿತಿಯಲ್ಲಿದೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 45,900 ರೂ. ಇದ್ದುದು ಕೂಡ ಬದಲಾಗಿಲ್ಲ.
  Published by:Latha CG
  First published: