Morning Digest: ಸ್ವತಂತ್ರ್ಯ ದಿನಾಚರಣೆಯ ಸಂಭ್ರಮ, ಈ ಭಾಗದಲ್ಲಿ ಮಳೆ, ಚಿನ್ನದ ದರ; ಬೆಳಗಿನ ಟಾಪ್ ನ್ಯೂಸ್

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಈವರೆಗಿನ ಪ್ರಮುಖ ಸುದ್ದಿಗಳು

ಈವರೆಗಿನ ಪ್ರಮುಖ ಸುದ್ದಿಗಳು

  • Share this:
1.Karnataka Weather Report: ಅಬ್ಬರ ಕಡಿಮೆಯಾದ್ರೂ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಕಳೆದ ನಾಲ್ಕೈದು ದಿನಗಳಿಂದ ಮಳೆರಾಯನ ಅಬ್ಬರ (Rainfall) ಕಡಿಮೆಯಾಗಿದೆ. ಒಂದು ತಿಂಗಳಿನಿಂದ ಸುರಿಯುತ್ತಿದ್ದ ಮಳೆಗೆ ಜನರು ಹೈರಾಣು ಆಗಿದ್ದರು. ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮಳೆಯಾಗಿದೆ. ಆದ್ರೆ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಸಿಂಚನ ಮುಂದುವರಿಯಲಿದೆ. ಇಂದು ಸಹ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು ಮತ್ತು ಬಳ್ಳಾರಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ರಾಜಧಾನಿ ಬೆಂಗಳೂರಿನಲ್ಲಿಂದು (Bengaluru Weather) ಮೋಡ ಕವಿದ ವಾತಾವರಣದ (Cloudy Weather) ಜೊತೆ ಸೂರ್ಯನ ಪ್ರಖರತೆ ಇರಲಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

2.Independence Day 2022: ಕಿತ್ತೂರು ರಾಣಿ ಚೆನ್ನಮ್ಮ, ನಾರಾಯಣ ಗುರುಗಳನ್ನು ಸ್ಮರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಕರ್ನಾಟಕದ ಸ್ವಾತಂತ್ರ್ಯ ಕಲಿಗಳು ಮತ್ತು ಸಮಾಜ ಸುಧಾರಕರ ಕುರಿತು ಸಹ ಸ್ಮರಿಸಿದ್ದಾರೆ. ಕರ್ನಾಟಕದ ಹೆಮ್ಮೆಯ ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi Speech) ಸ್ಮರಿಸಿಕೊಂಡಿದ್ದಾರೆ. ರಾಣಿ ಲಕ್ಷ್ಮೀಬಾಯಿ, ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಸೇರಿದಂತೆ ಭಾರತದ ಮಹಿಳೆಯರ ಶಕ್ತಿಯನ್ನು ಸ್ಮರಿಸಿಕೊಂಡಿದ್ದಾರೆ. ಮಹಿಳೆಯರ ಸ್ವಾತಂತ್ರ್ಯ ಹೋರಾಟವನ್ನು ನೆನೆಸಿಕೊಂಡಾಗ ಪ್ರತಿಯೊಬ್ಬ ಭಾರತೀಯನು ಹೆಮ್ಮೆಯಿಂದ ಪುಳಕಿತನಾಗುತ್ತಾನೆ ಎಂದು ಪ್ರಧಾನಿ ಮೋದಿ (Independence Day 2022) ಹೇಳಿದ್ದಾರೆ. ಅಲ್ಲದೇ ನಾರಾಯಣ ಗುರು ಅವರನ್ನು (Narayana Guru) ಸಹ ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿಕೊಂಡಿದ್ದಾರೆ.

3.Azadi Ka Amrit Mahotsav: 'ಹಲೋ ಬೇಡ ವಂದೇ ಮಾತರಂ ಹೇಳಿ: ಅಧಿಕಾರಿಗಳಿಗೆ ಮಹಾರಾಷ್ಟ್ರ ಸಚಿವರ ಆದೇಶ!

ಮಹಾರಾಷ್ಟ್ರದ (Maharashtra) ನೂತನವಾಗಿ ನೇಮಕಗೊಂಡಿರುವ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸುಧೀರ್ ಮುಂಗಂತಿವಾರ್ ಭಾನುವಾರ, ಎಲ್ಲಾ ರಾಜ್ಯ ಸರ್ಕಾರಿ ಅಧಿಕಾರಿಗಳು ಕಚೇರಿಗಳಲ್ಲಿ ಫೋನ್ ಕರೆಗಳನ್ನು ತೆಗೆದುಕೊಳ್ಳುವಾಗ 'ಹಲೋ' ಬದಲಿಗೆ 'ವಂದೇ ಮಾತರಂ' ಎಂದು ಹೇಳಬೇಕು ಎಂದು ಹೇಳಿದ್ದಾರೆ. ಮುಂಗಂತಿವಾರ್ ಮಾತನಾಡಿ, ಸ್ವಾತಂತ್ರ್ಯದ 76ನೇ ವರ್ಷಕ್ಕೆ (Azadi Ka Amrit Mahotsav) ನಾವು ಕಾಲಿಡುತ್ತಿದ್ದೇವೆ. ನಾವು ಅಮೃತ ಮಹೋತ್ಸವವನ್ನು (ಸ್ವಾತಂತ್ರ್ಯದ) ಆಚರಿಸುತ್ತಿದ್ದೇವೆ. ಅದಕ್ಕಾಗಿಯೇ ಅಧಿಕಾರಿಗಳು ಫೋನ್ ಎತ್ತಿದಾಗ ‘ಹಲೋ’ ಬದಲು ‘ವಂದೇ ಮಾತರಂ’ ಎಂದು ಹೇಳಬೇಕೆಂದು ನಾನು ಬಯಸುತ್ತೇನೆ. ಈ ಬಗ್ಗೆ ಆಗಸ್ಟ್ 18 ರೊಳಗೆ ಅಧಿಕೃತ ಸರ್ಕಾರಿ ಆದೇಶ ಬರಲಿದೆ ಎಂದು ಹೇಳಿದರು.

4.Gold Rate on August 15, 2022: ಚಿನ್ನಾಭರಣ ಪ್ರಿಯರೇ ಗಮನಿಸಿ, ನಿನ್ನೆಯ ಬೆಲೆಯಲ್ಲಿ ಖರೀದಿಸಿ ಬಂಗಾರ, ಬೆಳ್ಳಿ

ಕಳೆದ ಕೆಲ ದಿನಗಳಿಂದ ಬಂಗಾರದ ಬೆಲೆ ನಿರಂತರವಾಗಿ ಏರಿಳಿತ ಕಾಣುತ್ತಿದೆ. ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದೇಶದಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,150 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 52530 ರೂ. ಇದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 52,580 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 48,200 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

5.Thara Anuradha: ಕೇಸರಿ, ಬಿಳಿ, ಹಸಿರು ಉಡುಪಿನಲ್ಲಿ ಮಿಂಚಿದ ತಾರಾ

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನ ದೇಶ ಅದ್ದೂರಿಯಾಗಿ ಅಚರಿಸಲು ಸಜ್ಜಾಗುತ್ತಿರುವ ಬೆನ್ನಲ್ಲೇ, ರಾಷ್ಟ್ರಪ್ರಶಸ್ತಿ ವಿಜೇತರಾದ ನಟಿ ತಾರಾ ಅನುರಾಧ ಕೇಸರಿ,ಬಿಳಿ, ಹಸಿರು ಬಣ್ಣಗಳಲ್ಲಿ ಡಿಸೈನ್ ಮಾಡಿರುವ ಉಡುಪಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ ವಿಶೇಷ ಫೋಟೋ ಶೂಟ್ ಮಾಡಿದ್ದಾರೆ. ಕೇಸರಿ, ಬಿಳಿ, ಹಸಿರು ಬಣ್ಣಗಳಲ್ಲಿ ಡಿಸೈನ್ ಮಾಡಿರುವ ಉಡುಪಿನಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ.
Published by:Mahmadrafik K
First published: