Morning Digest: ಮಗುವನ್ನ ಕೊಂದ ತಾಯಿ, ರಕ್ಕಮ್ಮ ಟೆಂಪಲ್ ರನ್, ಚಿನ್ನದ ದರ ಇಳಿಕೆ; ಬೆಳಗಿನ ಟಾಪ್ ನ್ಯೂಸ್​​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಈವರೆಗಿನ ಪ್ರಮುಖ ಸುದ್ದಿಗಳು

ಈವರೆಗಿನ ಪ್ರಮುಖ ಸುದ್ದಿಗಳು

  • Share this:
1.Bengaluru: ಟಬ್​​ನಲ್ಲಿ ಮುಳುಗಿಸಿ ಮಗುವನ್ನ ಕೊಂದ ತಾಯಿ

ತಾಯಿಯೇ (Mother) ನೀರಿನ ಟಬ್​ನಲ್ಲಿ ಮೂರುವರೆ ವರ್ಷದ ಮಗುವನ್ನು (Baby) ಮುಳುಗಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಗುವನ್ನ ಕೊಲೆಗೈದ ಬಳಿಕ ತಾಯಿ ಸಹ ಆತ್ಮಹತ್ಯೆಗೆ (Suicide Attempt) ಯತ್ನಿಸಿದ್ದಾಳೆ. ಗಾಯಿತ್ರಿ ಮಗುವನ್ನು ಕೊಲೆಗೈದ ತಾಯಿ. ಸಂಯುಕ್ತಾ ಸಾವನ್ನಪ್ಪಿದ ಮಗು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪತ್ನಿಯನ್ನು ಪತಿ ಆಸ್ಪತ್ರೆಗೆ (Husband) ದಾಖಲು ಮಾಡಿದ್ದರಿಂದ ಗಾಯಿತ್ರಿ ಬದುಕುಳಿದಿದ್ದಾಳೆ. ತಮಿಳುನಾಡು ಮೂಲದ ನರೇಂದ್ರ ಹಾಗೂ ಗಾಯಿತ್ರಿ ದಂಪತಿ ಬೆಂಗಳೂರಿನ ಹೆಚ್​​ಎಎಲ್​ನ ವಿಭೂತಿಪುರದಲ್ಲಿ (Vibhuipuram Bengaluru) ವಾಸವಾಗಿದ್ದರು. ಇಪ್ಪತ್ತು ದಿನಗಳ ಹಿಂದೆ ನರೇಂದ್ರ ತಾಯಿ ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

2.Jacqueline Fernandez: 200 ಕೋಟಿ ವಂಚನೆ ಪ್ರಕರಣದಲ್ಲಿ ಜಾಕ್ಲಿನ್, ರಕ್ಕಮ್ ಟೆಂಪಲ್ ರನ್

ಬಾಲಿವುಡ್ ನಟಿ, ವಿಕ್ರಾಂತ್ ರೋಣ ಬೆಡಗಿ ಜಾಕ್ಲಿನ್ ಫರ್ನಾಂಡಿಸ್ (Jacqueline Fernandez) ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸುಕೇಶ್ ಚಂದ್ರಶೇಖರ್ (Sukesh Chandrashekhar) ಮುಖ್ಯ ಆರೋಪಿಯಾಗಿರುವ ಪ್ರಕರಣದಲ್ಲಿ ಇಡಿ ಚಾರ್ಜ್​ ಶೀಟ್​ನಲ್ಲಿ (ED Chargesheet) ನಟಿ ಜಾಕ್ಲಿನ್ ಫರ್ನಾಂಡಿಸ್ ಹೆಸರು ಇದೆ ಎಂಬ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿತ್ತು. 200 ಕೋಟಿ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿ ಹೆಸರಿಸಲ್ಪಟ್ಟ ನಂತರ ಜಾಕ್ಲಿನ್ ಫರ್ನಾಂಡಿಸ್ ಮೊದಲ ಬಾರಿಗೆ ಸೋಮವಾರ ಮುಂಬೈನಲ್ಲಿ ಕಾಣಿಸಿಕೊಂಡರು. ನಟಿ ಜುಹುವಿನಲ್ಲಿರುವ (Juhu) ಮುಕ್ತೇಶ್ವರ ದೇವಸ್ಥಾನಕ್ಕೆ (Temple) ಭೇಟಿ ನೀಡಿದರು.

3.Karnataka Weather: ರಾಜ್ಯದ ಜನರೇ ಗಮನಿಸಿ, ಯೆಲ್ಲೋ ಅಲರ್ಟ್ ಘೋಷಣೆ; ಇಂದು, ನಾಳೆ ಭಾರೀ ಮಳೆ ಸಾಧ್ಯತೆ

ಹತ್ತು ದಿನಗಳ ಬಳಿಕ ರಾಜ್ಯದಲ್ಲಿ ಮಳೆ (Karnataka Rains) ಆರಂಭಗೊಂಡಿದೆ. ಇಡೀ ವಾರ ಕರಾವಳಿ (Coastal Karnataka) ಮತ್ತು ಮಲೆನಾಡು (Malnadu) ಭಾಗದಲ್ಲಿ ಯೆಲ್ಲೋ ಅಲರ್ಟ್ (Yellow Alert)​ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯ (Rainfall) ನಿರೀಕ್ಷೆ ಇದೆ. ರಾಜ್ಯದಲ್ಲಿ ಇನ್ನೊಂದು ವಾರ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ದಕ್ಷಿಣ ಒಳನಾಡು ಕೆಲ‌ ಜಿಲ್ಲೆಗಳಿಗೆ ಐದು ದಿನ ಮತ್ತು ಇಂದು ಮತ್ತು ನಾಳೆ ಚಿಕ್ಕಮಗಳೂರು (Chikkamagaluru) ಹಾಗೂ ಕೊಡಗು (Kodagu) ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

4.Today Gold and Silver Price: ಗ್ರಾಹಕರಿಗೆ ಬಂಪರ್, ಚಿನ್ನ-ಬೆಳ್ಳಿ ಎರಡರ ದರವೂ ಇಳಿಕೆ!

ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,650 ಆಗಿದೆ. ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಬಗ್ಗೆ ನೋಡುವುದಾದರೆ ಒಂದು ಗ್ರಾಂ (1GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,760 ಆಗಿದ್ದರೆ, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,193 ಆಗಿದೆ. ಇನ್ನು ಎಂಟು ಗ್ರಾಂ (8GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 38,080 ಆಗಿದ್ದರೆ, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,544 ಆಗಿದೆ.

5.Congress Election: ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಯಲ್ಲಿ ವಿಳಂಬ ಏಕೆ? ಬಯಲಾಯ್ತು ಮಹತ್ವದ ಕಾರಣ!

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ (Congress President Election) ಆಗಸ್ಟ್ 21 ರಿಂದ ಸೆಪ್ಟೆಂಬರ್ 20ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕಾಂಗ್ರೆಸ್ ಚುನಾವಣಾ ಸಮಿತಿಯು (Congress Election Committee) ಪ್ರಸ್ತಾಪಿಸಿತ್ತು. ಆದರೀಗ ಆಗಸ್ಟ್ 21 ಕಳೆದರೂ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಲಕ್ಷಣ ಕಾಣುತ್ತಿಲ್ಲ. ಮೂಲಗಳ ಪ್ರಕಾರ, ಕೆಲವು ದಿನಗಳ ಹಿಂದೆ, ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷದ ಹಿರಿಯ ನಾಯಕರೊಂದಿಗಿನ ಮಾತುಕತೆಯ ಸಂದರ್ಭದಲ್ಲಿ ಅಧ್ಯಕ್ಷರ ಸ್ಥಾನಕ್ಕೇರಲು ನಿರಾಕರಿಸಿದ್ದಾರೆನ್ನಲಾಗಿದೆ. ರಾಹುಲ್ ಗಾಂಧಿಯವರ ಈ ಹೆಜ್ಜೆಯ ನಂತರ ಪಕ್ಷದ ಹಿರಿಯ ನಾಯಕರು ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.
Published by:Mahmadrafik K
First published: