• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Morning Digest: ರಾಜ್ಯದಲ್ಲಿ ರೆಡ್ ಅಲರ್ಟ್, ಲಿಂಗಾಯತ ನಾಯಕನ ಬರ್ತ್ ಡೇಗೆ BJP ಪ್ಲಾನ್, ಚಿನ್ನದ ಬೆಲೆ; ಬೆಳಗಿನ ಟಾಪ್ ನ್ಯೂಸ್

Morning Digest: ರಾಜ್ಯದಲ್ಲಿ ರೆಡ್ ಅಲರ್ಟ್, ಲಿಂಗಾಯತ ನಾಯಕನ ಬರ್ತ್ ಡೇಗೆ BJP ಪ್ಲಾನ್, ಚಿನ್ನದ ಬೆಲೆ; ಬೆಳಗಿನ ಟಾಪ್ ನ್ಯೂಸ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

  • Share this:

1.Karnataka Rains: ಮನೆಯಿಂದ ಹೊರ ಹೋಗುವ ಮುನ್ನಎಚ್ಚರ; ಎಲ್ಲೆಲ್ಲಿ ರೆಡ್ ಅಲರ್ಟ್ ಇದೆ ಗೊತ್ತಾ?


ಇಂದು ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು (Varamahalakshmi Festival) ಆಚರಣೆ ಮಾಡಲಾಗುತ್ತಿದೆ. ಹಬ್ಬ ಅಂತ ಹೊರಗೆ ಹೋಗುವ ಮುನ್ನ ನೂರು ಬಾರಿ ಯೋಚನೆ ಮಾಡಿ. ಕಾರಣ ಇಂದು ಸಹ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಈಗಾಗಲೇ ಹವಾಮಾನ ಇಲಾಖೆ ಮಲೆನಾಡು ಭಾಗದಲ್ಲಿ ರೆಡ್ ಅಲರ್ಟ್ (Red Alert) ಘೋಷಣೆ ಮಾಡಿದೆ. ಏಳಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ (Orange Alert) ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಮಲೆನಾಡು (Karnataka Malenadu) ಭಾಗಕ್ಕೆ ಬರೋ ಪ್ರವಾಸಿಗರು (Tourist) ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನಿರಂತರ ಮಳೆಯಿಂದಾಗಿ (Karnataka Rainfall) ರಾಜ್ಯದ ಎಲ್ಲಾ ನದಿಗಳು ತುಂಬಿ ಹರಿಯುತ್ತಿದೆ. ಜಲಾಶಯಗಳ (Dams) ಸಹ ಭರ್ತಿಯಾಗಿದ್ದು, ಯಾವುದೇ ಕ್ಷಣದಲ್ಲಿ ಹೊರ ಹರಿವು ಪ್ರಮಾಣ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆದ್ರಿಂದ ನದಿ ತೀರಕ್ಕೆ ತೆರಳದಂತೆ ಗ್ರಾಮಗಳಲ್ಲಿ ಡಂಗೂರ ಮೂಲಕ ಎಚ್ಚರಿಕೆ ನೀಡಲಾಗಿದೆ.


2.Belagavi Politics: ಸಿದ್ದರಾಮೋತ್ಸವ ಬೆನ್ನಲ್ಲೇ ಲಿಂಗಾಯತ ನಾಯಕನ ಬರ್ತ್ ಡೇಗೆ ಬಿಜೆಪಿ ಪ್ಲಾನ್; ರಾಜ್ಯಪಾಲ ಆಗ್ತಾರಾ ಆ ಮುಖಂಡ?


ಬಣ ಜಗಳ, ಚುನಾವಣೆ (Election) ಮೊದಲೇ ಸಿಎಂ ಸ್ಥಾನಕ್ಕೆ ಕಿತ್ತಾಡಿ ಸುದ್ದಿಯಾಗುತ್ತಿದ್ದ ಕಾಂಗ್ರೆಸ್ ನಾಯಕರು (Congress Leaders) ಈಗ ಒಗ್ಗಟ್ಟು ಪ್ರದರ್ಶನ ಮೂಲಕ ಸದ್ದಿ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Opposition Leader Siddaramaiah) ಅದ್ಧೂರಿ ಹುಟ್ಟಹಬ್ಬದ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬೂಸ್ಟರ್ ಡೋಸ್ ನೀಡಿದಂತೆ ಆಗಿದೆ. ಇದು ಬಿಜೆಪಿ (BJP) ಹಾಗೂ ಜೆಡಿಎಸ್ (JDSS) ಪಕ್ಷಕ್ಕೆ ತಳಮಳವನ್ನು ಉಂಟು ಮಾಡಿದೆ. ಹೀಗಾಗಿ ಉತ್ತರ ಕರ್ನಾಟಕದ (North Karnataka) ಪ್ರಭಾವಿ ಲಿಂಗಾಯತ ನಾಯಕನ (Lingayat) ಹುಟ್ಟುಹಬ್ಬದ ಅದ್ದೂರಿ ಆಚರಣೆಗೆ ತೆರೆಮರೆಯಲ್ಲಿ ಪ್ಲ್ಯಾನ್ ರೂಪಿಸಲಾಗುತ್ತಿದೆ. ಎಲ್ಲಾ ಅಂದುಕೊಂಡಂತೆ ಆದ್ರೆ ಅಕ್ಟೋಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ(Belagavi) ಬೃಹತ್ ಸಮಾವೇಶ ನಡೆಯಲಿದೆ.


3.Ganesha Festival: ಮನೆಯಲ್ಲಿ ಕತ್ತಿ ಸುಳಿಬಾರದು, ಕೊಲೆ ಆಗಬಾರದು ಅಂದ್ರೆ ಹಿಂದೂಗಳ ಬಳಿ ವ್ಯವಹರಿಸಿ; ಮುತಾಲಿಕ್ ಕರೆ


ಸಾರ್ವಜನಿಕ ಗಣೇಶೋತ್ಸವಕ್ಕೆ (Ganeshotsava) ಸರ್ಕಾರ (Government) ಹಲವು ನಿರ್ಬಂಧ ಹಾಕುತ್ತಿದೆ. ಇದರಿಂದ ಎಷ್ಟೊಂದು‌ ಕಿರಿಕಿರಿ ಆಗುತ್ತಿದೆ. ನಮಗೆ ಸ್ವಾತಂತ್ರ್ಯವೇ ಇಲ್ಲವಾಗಿದೆ. ಸರ್ಕಾರದ ಈ ನೀತಿಯನ್ನು ನಾನು ವಿರೋಧಿಸುತ್ತೆನೆ. ಇದು ಬಿಜೆಪಿ ಸರ್ಕಾರದಲ್ಲೇ (BJP Government) ಹೀಗಾಗುತ್ತಿದೆ ಎಂದರೆ ಹೇಗೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.


4.Gold Price: ವರಮಹಾಲಕ್ಷ್ಮೀ ಹಬ್ಬದಂದೇ ಆಭರಣ ಪ್ರಿಯರಿಗೆ ಶಾಕ್! ಇಂದು ಚಿನ್ನ, ಬೆಳ್ಳಿ ಬೆಲೆ ಏರಿಕೆ


ಇಂದು ಭಾರತದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,750 ಆಗಿದೆ. ಈಗಾಗಲೇ ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತೆ ಏರಿಕೆಯಾಗುವ ಸಾಧ್ಯತೆಯನ್ನೂ ಅಲ್ಲಗಳೆಯಲು ಆಗಲ್ಲ. ಮಾರುಕಟ್ಟೆಯಲ್ಲಿ ಇಂದು ಒಂದು ಗ್ರಾಂ (1GM) 22 ಕ್ಯಾರೆಟ್ ಆಭರಣದ ಚಿನ್ನದ ಬೆಲೆ - ರೂ. 4,750, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,182 ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,550 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,250, ರೂ. 47,500, ರೂ. 47,500 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,650 ರೂ. ಆಗಿದೆ.


5.Yadagiri Accident: ಯಾದಗಿರಿಯಲ್ಲಿ ಭೀಕರ ಅಪಘಾತ; ಕಂದಮ್ಮ ಸೇರಿ ಒಂದೇ ಕುಟುಂಬದ ಆರು ಜನ ಸಾವು

top videos


    ಯಾದಗಿರಿ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ಕಾರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂರು ಜನ ಹಾಗೂ ಆಸ್ಪತ್ರೆಯಲ್ಲಿ ಮೂರು ಜನರ ಪ್ರಾಣಪಕ್ಷಿ ಹೋಗಿದೆ. ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ಅಪಘಾತ ನಡೆದಿದೆ. ಒಂದು ವರ್ಷದ ಹೆಣ್ಣು ಮಗು ಸೇರಿ 6 ಜನ ಮೃತರಾಗಿದ್ದಾರೆ.

    First published: