Morning Digest: ದಶಕಗಳ ಬಳಿಕ ತುಂಬಿದ ಅರ್ಕಾವತಿ, ಮತ್ತೆ ಕೋವಿಡ್ ಅಬ್ಬರ, ಚಿನ್ನದ ದರ; ಬೆಳಗಿನ ಟಾಪ್ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1.Arkavathi River: ದಶಕಗಳ ನಂತರ ಮೈದುಂಬಿ ಹರಿಯುತ್ತಿದ್ದಾಳೆ ಅರ್ಕಾವತಿ; 1962ರಲ್ಲಿ ಕಾಣಿಸಿಕೊಂಡಿತ್ತು ಪ್ರವಾಹ

ಎಡೆಬಿಡದೇ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಅರ್ಕಾವತಿ ನದಿ (Arkavathi River) ಸುಮಾರು 52 ವರ್ಷಗಳ ಬಳಿಕ ಪ್ರವಾಹೋಪಾದಿಯಲ್ಲಿ (Flood) ಹರಿದಿದೆ. ಇದುವರೆಗೆ ಕುರುಹು ಇಲ್ಲದಂತಿದ್ದ ನದಿಯಲ್ಲಿ ಪ್ರವಾಹ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಸುಮಾರು ಐದು ದಶಕಗಳ ಬಳಿಕ ಕಂಡು ಬಂದ ಪ್ರವಾಹದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ ಮಳೆಯ ಕಾರಣ ಮಂಚನಬೆಲೆ ಜಲಾಶಯದಿಂದ (Manchanabele Dam) ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ಅರ್ಕಾವತಿ ನದಿ ಪಾತ್ರದ ಜಮೀನುಗಳು ಮುಳುಗಡೆಯಾಗಿ (Agriculture Submerge) ಜನ ಪರದಾಡುವಂತಾಗಿದೆ. ಹಾಗೆ ನೋಡಿದರೆ ದಶಕಗಳಿಂದ ಚರಂಡಿ ನೀರಿನ (Drainage Water) ಹರಿವಿಗೆ ಸೀಮಿತವಾಗಿದ್ದ ಅರ್ಕಾವತಿ ನದಿಯು ನಿರಂತರ ಮಳೆಯಿಂದ ಇದೀಗ ಹಿಂದಿನ ವೈಭವದೊಂದಿಗೆ ಮೈದುಂಬಿ ಹರಿಯುತ್ತಿದೆ. ಹೀಗಾಗಿ ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲು ತಾಲ್ಲೂಕು ಆಡಳಿತ ಕ್ರಮ ಕೈಗೊಂಡಿದೆ.

2.Parent Dressing: ಮಕ್ಕಳನ್ನು ಸ್ಕೂಲಿಗೆ ಬಿಡೋಕೆ ಹೋಗುವಾಗ ಪೋಷಕರು ಈ ಬಟ್ಟೆಗಳನ್ನು ಧರಿಸುವಂತಿಲ್ಲ!

ಸಮಯಕ್ಕೆ ಸರಿಯಾಗಿ ತಮ್ಮ ಮಕ್ಕಳನ್ನು (Student) ಶಾಲೆಗೆ ಬಿಡುವ ಧಾವಂತದಲ್ಲಿ, ಪೋಷಕರು (Parents) ನೈಟ್ ಡ್ರೆಸ್ (Night dress) ಅಥವಾ ಮನೆಯ ಉಡುಪಿನಲ್ಲಿ ಶಾಲೆಗೆ (School) ಆಗಮಿಸುತ್ತಾರೆ. ಹಲವಾರು ನಗರ ಶಾಲೆಗಳು ಅಂತಹ ಪೋಷಕರಿಗೆ ವಿನಾಯಿತಿ ನೀಡಿವೆ. ಔಪಚಾರಿಕ ಮಾರ್ಗಸೂಚಿಗಳನ್ನು ನೀಡಿವೆ. ಅವರು ಶಾಲಾ ಕ್ಯಾಂಪಸ್‌ಗೆ ಭೇಟಿ ನೀಡಿದಾಗ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಶಾಲೆಯ ಆಡಳಿತಗಳು ಕೇಳಿವೆ. ಅಂಬಾವಾಡಿ ಮೂಲದ ಅಮೃತ್ ಜ್ಯೋತಿ ಇತ್ತೀಚೆಗೆ ಶಾಲಾ ಆವರಣಕ್ಕೆ ಭೇಟಿ ನೀಡಿದಾಗ ಎಲ್ಲಾ ಪೋಷಕರಿಗೆ ಸೂಕ್ತವಾಗಿ ಡ್ರೆಸ್ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

3.Black Magic: ಮಾಟ ಮಂತ್ರಕ್ಕಾಗಿ ಹೆತ್ತ ಮಗಳನ್ನೇ ಹೊಡೆದು ಕೊಂದ ಪೋಷಕರು!

ಮಹಾರಾಷ್ಟ್ರದ ನಾಗ್ಪುರ (Nagpura) ನಗರದಲ್ಲಿ ದುಷ್ಟ ಶಕ್ತಿಗಳನ್ನು ಓಡಿಸಲು ಐದು ವರ್ಷದ ಬಾಲಕಿಯ ಪೋಷಕರು ‘ಮಾಟ ಮಂತ್ರ (Black Magic) ಮಾಡುವಾಗ’ ಆಕೆಯನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶುಕ್ರವಾರ-ಶನಿವಾರದ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು (Police) ಮಗುವಿನ ತಂದೆ ಸಿದ್ಧಾರ್ಥ್ ಚಿಮ್ನೆ (45), ತಾಯಿ ರಂಜನಾ (42) ಮತ್ತು ಚಿಕ್ಕಮ್ಮ ಪ್ರಿಯಾ ಬನ್ಸೋದ್ (32) ಅವರನ್ನು ಬಂಧಿಸಿದ್ದಾರೆ. ಯೂಟ್ಯೂಬ್‌ನಲ್ಲಿ (YouTube) ಸ್ಥಳೀಯ ಸುದ್ದಿ ವಾಹಿನಿಯನ್ನು ನಡೆಸುತ್ತಿರುವ ಸುಭಾಷ್ ನಗರದ ನಿವಾಸಿ ಚಿಮ್ನೆ, ಕಳೆದ ತಿಂಗಳು ಗುರು ಪೂರ್ಣಿಮೆಯಂದು ತನ್ನ ಪತ್ನಿ ಮತ್ತು 5 ಮತ್ತು 16 ವರ್ಷದ ಇಬ್ಬರು ಹೆಣ್ಣುಮಕ್ಕಳೊಂದಿಗೆ ತಕಲ್‌ಘಾಟ್ ಪ್ರದೇಶದ ದರ್ಗಾಕ್ಕೆ (Darga) ಹೋಗಿದ್ದರು ಎಂದು ಹಿರಿಯ ಪೊಲೀಸ್ (Police) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

4.Gold and Silver Price: ಇಂದು ಮತ್ತೆ ದುಬಾರಿಯಾಯ್ತು ಚಿನ್ನ! ಇಂದಿನ ಬೆಲೆ ವಿವರ ಇಲ್ಲಿದೆ ಓದಿ

ಮಾರುಕಟ್ಟೆಯಲ್ಲಿ ಇಂದು ಒಂದು ಗ್ರಾಂ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,755, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,187 ಆಗಿದೆ. ಇನ್ನು ಎಂಟು ಗ್ರಾಂ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,040, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,496 ರೂಪಾಯಿ ಆಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,600 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,450 ರೂ. 47,550, ರೂ. 47,500 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,700 ರೂ. ಆಗಿದೆ.

5.Karnataka Weather Report: ಮುಂದುವರಿಯಲಿದೆ ಮಳೆ; 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಮಳೆ ನಿಂತರೆ ಸಾಕು ಅನ್ನೋ ಮಾತುಗಳು ಎಲ್ಲರ ಬಾಯಲ್ಲಿ ಕೇಳುತ್ತಿದ್ದೇವೆ. ದಕ್ಷಿಣ, ಉತ್ತರ ಒಳನಾಡು ಸೇರಿದಂತೆ ಎಲ್ಲಾ ಭಾಗಗಳಲ್ಲಿ ಕಳೆದ ಮೂರು ವಾರಗಳಿಂದ ನಿರಂತರ ಮಳೆ (Rainfall) ಆಗ್ತಿದೆ. ತೊಳೆದು ಹಾಕಿರೋ ಬಟ್ಟೆ ಒಣಗುತ್ತಿಲ್ಲ. ಸೂರ್ಯದೇವ (Sun) ಕೃಪೆ ತೋರಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಿಕೊಳ್ತಿದ್ದಾರೆ. ಇಂದಿನಿಂದ ಮೂರು ದಿನ ರಾಜ್ಯದ 10 ಜಿಲ್ಲೆಗಳಲ್ಲಿ ಮಳೆಯ ಅಲರ್ಟ್ (Rain Alert) ಘೋಷಣೆ ಮಾಡಲಾಗಿದೆ. ಇನ್ನು ನಿರಂತರ ಮಳೆಯಿಂದಾಗಿ ನದಿಗಳು (River) ಅಪಾಯಮಟ್ಟದಲ್ಲಿ ಹರಿಯುತ್ತಿವೆ. ವಾಹನಗಳು (Vehicles) ನೀರಿನಲ್ಲಿ ಕೊಚ್ಚಿ ಹೋಗಿರುವ ವರದಿಗಳು ರಾಜ್ಯದ ಮೂಲೆ ಮೂಲೆಯಿಂದಲೂ ಬರುತ್ತಿವೆ. ಕೆಲವಡೆ ಪ್ರಾಣಹಾನಿ ಸಹ ಸಂಭವಿಸಿವೆ.
Published by:Mahmadrafik K
First published: