Morning Digest: ಸಿಎಂ ಮನೆಗೆ ಬಿಗಿ ಭದ್ರತೆ - ಏರಿಕೆಯಾದ ತೈಲ ದರ: ಬೆಳಗಿನ ಟಾಪ್ ನ್ಯೂಸ್ ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:

  1. Congressನಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಿನ್ನೆಲೆ ಪೊಲೀಸರಿಂದ ಬಿಗಿ ಭದ್ರತೆ - ಈಶ್ವರಪ್ಪ ರಾಜೀನಾಮೆಗೆ ಒತ್ತಡ


ಗುತ್ತಿಗೆದಾರ ಸಂತೋಷ್ ಪಾಟೀಲ್ (Santhosh Patil) ಆತ್ಮಹತ್ಯೆ ಹಿನ್ನೆಲೆ    ಕಾಂಗ್ರೆಸ್ ನಾಯಕರು (Congress Leaders) ಇಂದು ಮುಖ್ಯಮಂತ್ರಿಗಳ (CM) ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದು, ಈ ಹಿನ್ನೆಲೆ ಸಿಎಂ ಮನೆಗೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಸಚಿವ ಕೆ.ಎಸ್. ಈಶ್ವರಪ್ಪನ (K.S. Eshwarappa) ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸಿಎಂ ಮನೆ ಮುತ್ತಿಗೆ ಹಾಕಲು ಯೋಜನೆ ಮಾಡಿಕೊಂಡಿದ್ದು, ಆರ್ ಟಿ‌ ನಗರದ ಸಿಎಂ ಮನೆಗೆ ಪೊಲೀಸರು ಹೆಚ್ಚು ಭದ್ರತೆ ಒದಗಿಸಿದ್ದಾರೆ.   ಬೆಳಿಗ್ಗೆ 10ಕ್ಕೆ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಗೃಹ ಕಚೇರಿ ಕೃಷ್ಣಾಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಬಳಿಕ ಗೃಹ ಕಚೇರಿ ಕೃಷ್ಣಾಕ್ಕೆ ಕಾಂಗ್ರೆಸ್ ನಾಯಕರು ಮುತ್ತಿಗೆ ಹಾಕಲಿದ್ದಾರೆ.

2.  KS Eshwarappa: ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ, ಅಮಿತ್ ಶಾ ಮನೆಗೆ ಮುತ್ತಿಗೆ ಯತ್ನ

ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ (K.S Eshwarappa) ಅವರೇ ಕಾರಣ ಎಂದು ಸ್ಪಷ್ಟವಾಗಿ ಡೆತ್​ ನೋಟ್ (Death Note)​ ಕಳಿಸಿ ಗುತ್ತಿಗೆದಾರ ಹಾಗೂ ಹಿಂದೂ ಸಂಘಟನೆಯ ಮುಖಂಡ ಸಂತೋಷ್​ ಪಾಟೀಲ್ (Santhosh Patil) ಆತ್ಮಹತ್ಯೆಗೆ ಶರಣಾಗಿರುವ ವಿಷಯ ಈಗ ದೆಹಲಿ ಮಟ್ಟದಲ್ಲೂ ಭಾರೀ ಸಂಚಲನ ಮೂಡಿಸಿದೆ. ಸಚಿವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕಿತ್ತುಹಾಕಬೇಕು ಎಂದು ಕಾಂಗ್ರೆಸ್ (Congress) ಒತ್ತಡ ಹೇರುತ್ತಿರುವುದರಿಂದ ಬಿಜೆಪಿ ಹೈಕಮಾಂಡ್ ಈಶ್ವರಪ್ಪ ರಾಜೀನಾಮೆ ಪಡೆಯಬೇಕೋ ಬೇಡವೋ ಎಂಬ ಬಗ್ಗೆ ಚಿಂತನೆ ನಡೆಸುತ್ತಿದೆ. ಇನ್ನೊಂದೆಡೆ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. (Youth Congress President Srinivas BV) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

3. KGF 2: ರಾಜ್ಯದಾದ್ಯಂತ ರಾಕಿ ಭಾಯ್ ಅಬ್ಬರ - ಥಿಯೇಟರ್ ಎದುರು ಪಟಾಕಿ ಸಿಡಿಸಿ ಸಂಭ್ರಮಾಚರಣೆ

 ಬಹುನಿರೀಕ್ಷಿತ ಯಶ್ (Rocking Star Yash) ಅಭಿನಯದ ಕೆಜಿಎಫ್ 2 (KGF  2) ಚಿತ್ರ ಬಿಡಗಡೆಯಾಗಿದ್ದು, ಯಶ್ ಅಭಿಮಾನಿಗಳು ಹಬ್ಬದಂತೆ ಆಚರಣೆ ಮಾಡುತ್ತಿದ್ದಾರೆ. ಸುಮಾರು 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ ಗಳಲ್ಲಿ ಚಿತ್ರ ತೆರೆಕಂಡು ದಾಖಲೆ ಬರೆದಿದೆ. ರಾಜ್ಯದಲ್ಲಿ ಯಶ್ ಅಭಿಮಾನಿಗಳು ರಾತ್ರಿಯಿಂದಲೇ ಥಿಯೇಟರ್ ಬಳಿ ಬಂದಿದ್ದು, ಯಶ್ ಕಟೌಟ್ಗೆ ಅಭಿಷೇಕ ಮಾಡಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬೆಂಗಳೂರಿನ  ಗೌಡನ ಪಾಳ್ಯದಲ್ಲಿರುವ ಶ್ರೀನಿವಾಸ ಚಿತ್ರಮಂದಿರದಲ್ಲಿ ನಾಲ್ಕು ಗಂಟೆಗೆ ಆರಂಭವಾದ ಎರಡನೇ ಫ್ಯಾನ್ ಷೋ ಆರಂಭವಾಗಿದ್ದು, ಬೆಳಂ ಬೆಳಗ್ಗೆ ಹುಮ್ಮಸ್ಸಿನಿಂದಲೇ ಥಿಯೇಟರ್ ಗೆ ಯಶ್ ಫ್ಯಾನ್ (Yash Fans)  ಆಗಮಿಸುತ್ತಿದ್ದು, ಶ್ರೀ ನಿವಾಸ ಥಿಯೇಟರ್ ನ 630 ಸೀಟ್ ಗಳು ಸೋಲ್ಡ್ ಔಟ್ ಆಗಿದೆ. ಈ ನಡುವೆ ಯಶ್ ಪೋಸ್ಟರ್ ಗೆ ಹಾಲಿನ ಅಭಿಷೇಕ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಸಂಭ್ರಮ ಆಚರಿಸಲಾಗುತ್ತಿದೆ.

4. Petrol-Diesel Price Today: ಕಚ್ಚಾ ತೈಲ ಮತ್ತಷ್ಟು ದುಬಾರಿ, ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ಹೀಗಿದೆ?

 ಪೆಟ್ರೋಲ್ (Petrol)‌, ಡೀಸೆಲ್ (Diesel)‌ ಬೆಲೆ ಏರಿಕೆಗೆ ಕಳೆದ 8 ದಿನಗಳಿಂದ ಬ್ರೇಕ್‌ ಬಿದ್ದಿದೆ. ಕಚ್ಚಾ ತೈಲ (Crude Oil) ಬೆಲೆ ಮತ್ತಷ್ಟು ಗಗನಮುಖಿಯಾಗುತ್ತಿದ್ದರೂ ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜಯ ರಾಜಧಾನಿ ಮುಂಬೈ (Mumbai), ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಹಾಗೂ ಹಲವೆಡೆ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡುಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ದೇಶದ ಬಹುತೇಕ ಕಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ.

5. Gold Price Today: ಆಭರಣ ಪ್ರಿಯರಿಗೆ ಶಾಕ್ - ಮತ್ತೆ ಹೆಚ್ಛಾಯ್ತು ಚಿನ್ನ, ಬೆಳ್ಳಿ ದರ

Gold Rate on April 14th, 2022: ಬಂಗಾರದ ದರ ಇಳಿಕೆಯಾಗಲು ಕಾಯುತ್ತಿದ್ದವರಿಗೆ ಶಾಕ್‌ ಆಗುವ ಸುದ್ದಿ ಇದು. ಎರಡು ದಿನಗಳ ಕಾಲ ಯಥಾಸ್ಥಿತಿ ಕಾಯ್ದುಕೊಂಡಿದ್ದ ಬಂಗಾರದ ಮೌಲ್ಯ ಸತತ 2 ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಇದರ ಜತೆಗೆ ಬೆಳ್ಳಿಯೂ ದುಬಾರಿಯಾಗುತ್ತಿದೆ. ಈ ಹಿನ್ನೆಲೆ ಮಗನ, ಮಗಳ ಮದುವೆ ಮಾಡಿಸೋಕೆ ಅಂತ ಹಣ ಕೂಡಿಟ್ಟು ಆಭರಣ ಮಾಡಿಸೋಕೆ ತಯಾರಾದವರಿಗೆ ಮತ್ತಷ್ಟು ಹಣ ಕೂಡಿಡುವಂತ ಪರಿಸ್ಥಿತಿ ಬಂದೊದಗಿದೆ. ಹೌದು, ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 49,000 ರೂ. ಇತ್ತು. ಇಂದು 350 ರೂ. ಏರಿಕೆಯಾಗಿ 49,350 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 53,450 ರೂ. ಇತ್ತು. ಇಂದು 390 ರೂ. ಹೆಚ್ಚಾಗಿ 53,840 ರೂ. ಆಗಿದೆ.
Published by:Sandhya M
First published: