Morning Digest: ಖ್ಯಾತ ಕ್ರಿಕೆಟಿಗ ನಿಧನ, ಇನ್ನೂ 3 ದಿನ ಮಳೆ ಅಬ್ಬರ! ಕರ್ನಾಟಕದಿಂದ ಸ್ಪರ್ಧಿಸ್ತಾರಾ ಪ್ರಿಯಾಂಕಾ, ಮತ್ತೆ ಶುರು 'ರಾಜಾರಾಣಿ'

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ...

ಈವರೆಗಿನ ಟಾಪ್ ನ್ಯೂಸ್‌ಗಳು

ಈವರೆಗಿನ ಟಾಪ್ ನ್ಯೂಸ್‌ಗಳು

  • Share this:
Andrew Symonds: ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ! ಕಾರು ಅಪಘಾತದಲ್ಲಿ ಖ್ಯಾತ ಕ್ರಿಕೆಟಿಗ ನಿಧನ

ಆಸ್ಟ್ರೇಲಿಯಾದ (Australia) ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ (Andrew Symonds) ಶನಿವಾರ ತಡರಾತ್ರಿ ಕಾರು ಅಪಘಾತದಲ್ಲಿ (Car Crash) ಸಾವನ್ನಪ್ಪಿದ್ದಾರೆ (Dies) ಎಂದು ವರದಿಯಾಗಿದೆ. ಆಸ್ಟ್ರೇಲಿಯನ್ ಪೊಲೀಸರ ಪ್ರಕಾರ, ಅವರು ಕಾರಿನಲ್ಲಿ ಒಬ್ಬರೇ ಇದ್ದರು ಎಂದು ತಿಳಿದುಬಂದಿದೆ. ಶನಿವಾರ ತಡರಾತ್ರಿ ಅವರ ಕಾರು ಟೌನ್ಸ್‌ವಿಲ್ಲೆಯಲ್ಲಿ ರಸ್ತೆ ಅಪಘಾತ ಆಗಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಅಪಘಾತದ ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನು, ಕಳೆದ ಕೆಲ ತಿಂಗಳುಗಳ ಹಿಂದೆಯಷ್ಟೇ ಆಸ್ಟ್ರೇಲಿಯಾ ಕ್ರಿಕೆಟ್ ಶ್ರೇಷ್ಠ ಸ್ಪಿನ್ನರ್ ಶೇನ್ ವಾರ್ನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಕ್ರಿಕೆಟ್ ಜಗತ್ತು ಇದೀಗ ಇಬ್ಬರು ಲಜೇಂಡ್ ಕ್ರಿಕೆಟಿಗರನ್ನು ಕಳೆದುಕೊಂಡಂತಾಗಿದೆ.

Priyanka Gandhi: ಕರ್ನಾಟಕದಿಂದ ರಾಜ್ಯಸಭೆ ಪ್ರವೇಶಿಸುತ್ತಾರಾ ಪ್ರಿಯಾಂಕಾ ಗಾಂಧಿ? ಕಾಂಗ್ರೆಸ್ ನಾಯಕಿಗೆ ಡಿಕೆಶಿ ಆಹ್ವಾನ

ಮುಂಬರುವ ರಾಜ್ಯಸಭಾ ಚುನಾವಣೆಗೆ (Rajyasabha Election) ರಾಜ್ಯದಿಂದಲೇ ಸ್ಪರ್ಧಿಸುವಂತೆ ಪ್ರಿಯಾಂಕಾ ಗಾಂಧಿಯವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (KPCC President D.K. Shivakumar) ಆಹ್ವಾನ ನೀಡಿದ್ದಾರೆ. ರಾಜಸ್ಥಾನದ (Rajasthan) ಉದಯಪುರದಲ್ಲಿ (Udaipur) ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದ ವೇಳೆ ಭೇಟಿಯಾಗಿದ್ದಾಗ ಡಿಕೆಶಿ ಈ ಪ್ರಸ್ತಾಪ ಇಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಚಿಂತನ ಶಿಬಿರ ನಡೆಯುತ್ತಿದೆ. ಈ ವೇಳೆ ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾದ ಡಿಕೆಶಿ, ಮುಂಬರುವ ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದಲೇ ಸ್ಪರ್ಧಿಸುವಂತೆ ಪ್ರಿಯಾಂಕಾ ಗಾಂಧಿಯವರಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Priyanka Gandhi: ಕರ್ನಾಟಕದಿಂದ ರಾಜ್ಯಸಭೆ ಪ್ರವೇಶಿಸುತ್ತಾರಾ ಪ್ರಿಯಾಂಕಾ ಗಾಂಧಿ? ಕಾಂಗ್ರೆಸ್ ನಾಯಕಿಗೆ ಡಿಕೆಶಿ ಆಹ್ವಾನ

Heavy Rain: ಬೆಂಗಳೂರಲ್ಲಿ ಭಾರೀ ಮಳೆಯಿಂದ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು! ಇನ್ನೂ 3 ದಿನ ಇದೆ ವರುಣನ ಅಬ್ಬರ

ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ಮಳೆ (Rain) ಅಬ್ಬರ ಮುಂದುವರೆದಿದೆ. ನಿನ್ನೆ ರಾತ್ರಿಯಿಡೀ ಸುರಿದ ಭಾರೀ ಮಳೆಗೆ (Heavy Rain) ಬೆಂಗಳೂರಿನ ಹಲವು ಭಾಗ ಅಕ್ಷರಶಃ ಮುಳುಗಿದೆ. ತಗ್ಗು ಪ್ರದೇಶಗಳಿಗೆ ನೀರು (Water) ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ವಿದ್ಯುತ್ (Power) ಪ್ರವಹಿಸಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ (Death). ಇನ್ನೂ ಮೂರು ದಿನಗಳ ಕಾಲ (3 Days) ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಅಂತ ರಾಜ್ಯ ಹವಾಮಾನ ಇಲಾಖೆ (State Meteorological Department) ತಿಳಿಸಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ (Alert) ಇರಬೇಕಾಗಿದೆ.

ಶುರುವಾಗ್ತಿದೆ 'ರಾಜಾ-ರಾಣಿ' ಸೀಸನ್ 2

ಕಲರ್ಸ್ ಕನ್ನಡ (Colors Kannada) ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಲ್ ಜೋಡಿಗಳ ರಿಯಾಲಿಟಿ ಗೇಮ್‌ ಶೋ ದಿನೆ ದಿನೇ ವೀಕ್ಷಕರ ಗಮನ ಸೆಳೆದಿದೆ. ರಿಯಲ್ ಲೈಫ್‌ (Real Life) ನಲ್ಲೂ ಹೀಗೆ ಇರ್ತಾರಾ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. 'ಕಲರ್ಸ್​ ಕನ್ನಡ' ಸದಾ ಹೊಸಹೊಸ ರಿಯಾಲಿಟಿ ಶೋ (Reality Show) ಗಳ ಮೂಲಕ ವೀಕ್ಷಕರ ಎದುರು ಬರುತ್ತಿದೆ. ಈ ಬಾರಿ 'ರಾಜಾ-ರಾಣಿ 2' (Raja Rani Season 2) ಶೋಅನ್ನು ಮತ್ತೆ ತರಲಾಗುತ್ತಿದೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ರಾಜಾ-ರಾಣಿ' ರಿಯಾಲಿಟಿ ಶೋ (Raja Rani Show) ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ 'ರಾಜಾ-ರಾಣಿ' ಸೀಸನ್ 2 ಆರಂಭವಾಗಲಿದೆ.

ಇದನ್ನೂ ಓದಿ: Raja Rani 2: ಇದು ರಿಯಲ್ ಜೋಡಿಗಳ ರಿಯಾಲಿಟಿ ಗೇಮ್ ಶೋ, ಶುರುವಾಗ್ತಿದೆ 'ರಾಜಾ-ರಾಣಿ' ಸೀಸನ್ 2

Gold Price: ಚಿನ್ನದ ಬೆಲೆ ಇಳಿಯಿತು, ಬೆಳ್ಳಿ ದರ ಏರಿತು! ವಾರಾಂತ್ಯದಲ್ಲಿ ಹೀಗಿದೆ ನೋಡಿ ಆಭರಣಗಳ ಬೆಲೆ

ನಿನ್ನೆಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ (Market) ಚಿನ್ನದ ಬೆಲೆಯಲ್ಲಿ (Gold Price) ಮತ್ತೆ ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್‌ನ 10  ಗ್ರಾಂ ಆಭರಣ (Jewellery) ಚಿನ್ನದ ಬೆಲೆ 46,450 ಇತ್ತು. ಇಂದು 46,250 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ನಿನ್ನೆ 50,670 ರೂಪಾಯಿ ಇತ್ತು. ಇಂದು 50,450 ರೂಪಾಯಿ ಆಗಿದೆ. ಇನ್ನು ಇಂದು ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿ ಬೆಲೆ 58,700 ರೂ.ಗಳಷ್ಟಿತ್ತು. ಆದರೆ ಇಂದು ಒಂದು ಕೆಜಿ ಬೆಳ್ಳಿಗೆ 63,700 ಆಗಿದೆ. ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿತ್ತು. ಇನ್ನು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳು ಚಿನ್ನ ಹಾಗೂ ಬೆಳ್ಳಿ ದರಗಳ (Silver Price) ಮೇಲೆ ಪ್ರಭಾವ ಬೀರುತ್ತಿವೆ.
Published by:Annappa Achari
First published: