Morning Digest: ರಾಜ್ಯದ ಬಹುತೇಕ ಭಾಗದಲ್ಲಿ ಒಣ ಹವೆ-ಯಥಾಸ್ಥಿತಿ ಕಾಯ್ದುಕೊಂಡ ತೈಲ ದರ: ಬೆಳಗಿನ ಟಾಪ್ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:

  1. Karnataka Weather Report: ನಿಲ್ಲದ ಅಕಾಲಿಕ ಮಳೆ, ರಾಜ್ಯದ ಬಹುತೇಕ ಭಾಗದಲ್ಲಿ ಒಣ ಹವೆ


ಮಳೆಗಾಲ ಮುಗಿದು ಚಳಿಗಾಲ (Winter) ಆರಂಭವಾಗಿದ್ರೂ ರಾಜ್ಯದಲ್ಲಿಯ ಅಕಾಲಿಕ ಮಳೆ (Unseasonal Rain) ನಿಲ್ಲುತ್ತಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಮಳೆ (Bengaluru Rains) ಪ್ರಮಾಣ ತಗ್ಗಿದ್ದರೂ, ಉತ್ತರ ಕರ್ನಾಟಕದಲ್ಲಿ (North Karnataka) ವರುಣ ಮಾತ್ರ ಬ್ರೇಕ್ ನೀಡುತ್ತಿಲ್ಲ. ಪರಿಣಾಮ ರೈತರು (Farmers) ಬೆಳೆದ ಬೆಳೆ (Crop) ಹೊಲದಲ್ಲಿಯೇ ನಾಶವಾಗುತ್ತಿದೆ. . ಎಂದಿನಂತೆ ಮಲೆನಾಡು ಭಾಗದಲ್ಲಿ ಮೋಡ ಕವಿದ ವಾತಾವರಣದ (Cloudy Weather) ಜೊತೆ ತುಂತುರು ಮಳೆ (low Rain) ಇರಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರದಲ್ಲಿಯೂ ಅಲ್ಪ ಮಳೆಯ ಸಾಧ್ಯತೆ ಇದೆ. ಸಿಲಿಕಾನ್ ಸಿಟಿಯಲ್ಲಿ ಗಂಟೆ ಗಂಟೆಗೆ ವಾತಾವರಣ ಬದಲಾಗುತ್ತಿದ್ದು, ಜನರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಗರಿಷ್ಠ 27, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

2. ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ತೈಲ ಬೆಲೆ- ವಿವಿಧ ಜಿಲ್ಲೆಗಳ ದರ ಇಲ್ಲಿದೆ

ಕೇಂದ್ರ(Central) ಹಾಗೂ ರಾಜ್ಯ ಸರ್ಕಾರದ(State Government) ದೀಪಾವಳಿ(deepavali) ಕೊಡುಗೆಯಾಗಿ ಪೆಟ್ರೋಲ್‌, ಡೀಸೆಲ್‌ (Petrol And diesel) ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್​ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್​ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್​ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ಕುರಿತ ವಿವರ ಇಲ್ಲಿದೆ.

3. Gold Price Today: ಮತ್ತೆ ಏರಿಕೆ ಆಗುತ್ತಿದೆ ಚಿನ್ನದ ಬೆಲೆ: ಇಂದೇ ಖರೀದಿಸಿ, ಇಲ್ಲಿದೆ ಇವತ್ತಿನ ದರ

Gold Rate on Dec 6, 2021: ದೇಶದಲ್ಲಿಂದು ಚಿನ್ನದ ಬೆಲೆ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,500 ರೂ. ಇತ್ತು.ಇಂದು 10 ರೂ. ಬೆಲೆ ಹೆಚ್ಚಾಗಿದ್ದು, 46,510 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,500 ರೂ. ಇತ್ತು. ಇಂದು 10 ರೂ. ಬೆಲೆ ಏರಿಕೆಯಾಗಿ 47,510 ರೂ.ಆಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,830 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,760 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

4. Omicron: ಮಹಾರಾಷ್ಟ್ರ, ರಾಜಸ್ಥಾನದಲ್ಲಿ ಹೊಸ ರೂಪಾಂತರಿ ಸೋಂಕು ಪತ್ತೆ- ದೇಶದಲ್ಲಿ 21ಕ್ಕೆ ಏರಿಕೆಯಾದ ಪ್ರಕರಣಗಳ ಸಂಖ್ಯೆ

ದೇಶದಲ್ಲಿ ಕೊರೊನಾ(Coronavirus) ಹೊಸ ರೂಪಾಂತರ ಓಮಿಕ್ರಾನ್(Omicron) ಪ್ರಕರಣಗಳ ಸಂಖ್ಯೆ ದಿನದಿಂದ ದಿನ್ಕಕೆ ಏರುತ್ತಿದ್ದು, ರಾಜಸ್ಥಾನದ(Rajasthan) ಜೈಪುರದಲ್ಲಿ(Jaipur) ಒಂಬತ್ತು ಜನರು ಹೊಸ ರೂಪಾಂತರದಿಂದ ಸೋಂಕಿಗೆ ಒಳಗಾಗಿದ್ದರೆ , ಮಹಾರಾಷ್ಟ್ರದಲ್ಲಿ ಏಳು ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳು ವರದಿಯಾದ ಬೆನ್ನಲ್ಲೆ ಭಾರತದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಭಾನುವಾರ 21 ಕ್ಕೆ ಏರಿಕೆ ಕಂಡಿದೆ. ಹೊಸ ರೂಪಾಂತರ ಸೋಂಕು ಪತ್ತೆಯಾದವರು ಹೆಚ್ಚಿನ ಅಪಾಯದ(Danger List) ಪಟ್ಟಿಯಲ್ಲಿದ್ದ ದೇಶಗಳ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆ ಅಥವಾ ರೋಗಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ ಎನ್ನಲಾಗಿದೆ.ಕೊರೊನಾವೈರಸ್‌ಗೆ ಸೋಂಕು ದೃಢವಾದ ನಂತರ ಎಲ್ಲಾ ಸೋಂಕಿತರಲ್ಲಿ ಹೊಸ ರೂಪಾಂತರ ಸೋಂಕಿನ ಬಗ್ಗೆ ಖಚಿತಪಡಿಸಿಕೊಳ್ಳಲು ಜೀನೋಮ್ ಪರೀಕ್ಷೆ ನಡೆಸಲಾಗಿದೆ.
Published by:Sandhya M
First published: