Morning Digest: ಯಥಾಸ್ಥಿತಿ ಕಾಯ್ದುಕೊಂಡ ತೈಲ ದರ- ಹೆಚ್ಚಾಯ್ತು ಹಳದಿ ಲೋಹದ ಬೆಲೆ- ಬೆಳಗಿನ ಟಾಪ್ ನ್ಯೂಸ್​ಗಳು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು? ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:

  1. ಉತ್ತರ ಒಳನಾಡು ಸೇರಿದಂತೆ ರಾಜ್ಯದಲ್ಲಿ ಶುಷ್ಕ ಹವಾಮಾನ


  ಉತ್ತರ ಒಳನಾಡು ಸೇರಿದಂತೆ ರಾಜ್ಯದ (Karnataka Werather) ಬಹುತೇಕ ಭಾಗಗಳಲ್ಲಿ ಶುಷ್ಕ ಹಮಾಮಾನ ಇರಲಿದೆ.ಯಾದಗಿರಿ(Yadagiri), ರಾಯಚೂರು(Raichur), ಬಳ್ಳಾರಿ(Ballary)ಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ಮಲೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಚದುರಿದ ರೀತಿ ಹಗುರವಾದ ಮಳೆ(Low Rain)ಯಾಗಲಿದೆ. ಚಳಿಗಾಲ (Winter) ಆರಂಭವಾಗಿರೋದರಿಂದ ಬೆಳಗ್ಗೆ ಮತ್ತು ಸಂಜೆ ತಂಪು ಗಾಳಿ ಹೆಚ್ಚಾಗುವ ಸಾಧ್ಯತೆಗಳಿವೆ. ಇದರ ಜೊತೆಗೆ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ (Bengaluru Weather Today) ಗರಿಷ್ಠ 28, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

  2. Petrol Price Today: ಯಥಾಸ್ಥಿತಿ ಕಾಯ್ದುಕೊಂಡ ತೈಲ ದರ- ಇಲ್ಲಿದೆ ಇಂದಿನ ಬೆಲೆಗಳ ವಿವರ

  ಕೇಂದ್ರ ಹಾಗೂ ರಾಜ್ಯ ಸರ್ಕಾರದ(Central And State Government) ದೀಪಾವಳಿ ಕೊಡುಗೆಯಾಗಿ ಪೆಟ್ರೋಲ್, ಡೀಸೆಲ್(Petrol Diesel) ಮೇಲಿನ ಸುಂಕವನ್ನು ಕಡಿತಗೊಳಿಸಿದ್ದವು. ಇದರ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಎಲ್ಪಿಜಿ ಬೆಲೆ (LPG) ಏರಿಕೆಯಿಂದ ಕಂಗಾಲಾಗಿದ್ದ ಜನ ದಿನನಿತ್ಯ ಏರುತ್ತಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆ ಜನ ಸಾಮಾನ್ಯರಿಗೆ ತೈಲ ದರದ ಹೊರೆ ಸ್ವಲ್ಪ ಕಡಿಮೆಯಾಗಿದೆ. ಆದರೆ, ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದೆ. ಉಳಿದ ಹಲವು ಜಿಲ್ಲೆಗಳಲ್ಲಿ ಏರಿಳಿತ ಕಂಡಿದೆ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂದು 1 ಲೀಟರ್ ಪೆಟ್ರೋಲ್ ಅನ್ನು 100.58 ರೂಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್ ಅನ್ನು 85.01 ರೂ. ಗೆ ಮಾರಾಟ ಮಾಡಲಾಗುತ್ತಿದೆ.

  3. ಶೇಕಡ 50ರಷ್ಟು ಕೋವಿಶೀಲ್ಡ್ ಉತ್ಪಾದನೆ ಕಡಿಮೆ ಮಾಡಲು ನಿರ್ಧರಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ

  ಕೊರೊನಾ(Corona) ಲಸಿಕೆ,(Vaccination) ಕೋವಿಶೀಲ್ಡ್(Covishield) ಉತ್ಪಾದನೆಯನ್ನು(Production) ಶೇಕಡಾ 50 ರಷ್ಟು ಕಡಿತಗೊಳಿಸಲು ನಿರ್ಧರಿಸಿದ್ದು ಕೇಂದ್ರದಿಂದ ಯಾವುದೇ ಆರ್ಡರ್ ಬರದ ಕಾರಣ ಈ ನಿರ್ಧಾರ ಮಾಡಲಾಗಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಿಇಒ ಆದರ್ ಪೂನಾವಾಲ ಅವರು ಮಂಗಳವಾರ ತಿಳಿಸಿದ್ದಾರೆ. ಸರ್ಕಾರದಿಂದ ನಮಗೆ ಯಾವುದೇ ಆರ್ಡರ್ಗಳಿಲ್ಲದ ಕಾರಣ ಮುಂದಿನ ವಾರದಿಂದ ಉತ್ಪಾದನೆಯನ್ನು ಕನಿಷ್ಠ 50 ಪ್ರತಿಶತದಷ್ಟು ಕಡಿಮೆ ಮಾಡಲಾಗುವುದು" ಎಂದು CNBC-TV18 ನ ವ್ಯವಸ್ಥಾಪಕ ಸಂಪಾದಕರಾದ ಶೆರೀನ್ ಭಾನ್ ಅವರೊಂದಿಗಿನ ವಿಶೇಷ ಸಂಭಾಷಣೆಯಲ್ಲಿ ಪೂನಾವಾಲ ಹೇಳಿದ್ದಾರೆ.
  ಏರಿಕೆಯಾಗುತಿದೆ ಬೆಲೆ: ನಾಳೆ ಅಲ್ಲ ಇಂದೇ ಖರೀದಿಸಿ ಚಿನ್ನ: ಇಲ್ಲಿದೆ ಇವತ್ತಿನ ದರ

  4. Gold Rate on Dec 8, 2021: ದೇಶದಲ್ಲಿಂದು ಚಿನ್ನದ ಬೆಲೆ (Gold Price) ಏರಿಕೆಯಾಗಿದೆ.

  ಬೆಂಗಳೂರಿನಲ್ಲಿ (Bengaluru) ಇಂದು ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,510 ರೂ. ಇತ್ತು. ಇಂದು 310 ರೂ. ಹೆಚ್ಚಾಗಿದ್ದು, 46,820 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,510 ರೂ. ಇತ್ತು. ಇಂದು 310 ರೂ. ಹೆಚ್ಚಾಗಿ 47,820 ರೂ. ಆಗಿದೆ.

  5. ಬೆಂಗಳೂರಿಗರೇ ಗಮನಿಸಿ, ಇವತ್ತು ಬೆಳಗ್ಗೆ 10 ರಿಂದಲೇ ವಿದ್ಯುತ್ ಕಟ್: ಯಾವೆಲ್ಲ ಏರಿಯಾ? ಇಲ್ಲಿದೆ ಮಾಹಿತಿ

  ರಾಜ್ಯದ ರಾಜಧಾನಿ, ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಈ ಸಮಸ್ಯೆ ಡಿಸೆಂಬರ್ 13ರವರೆಗೆ ಇರಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಬೆಸ್ಕಾಂ (BESCOM - Bangalore Electricity Supply Company Limited) ಹೇಳಿದೆ. ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL ) ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ವಿದ್ಯುತ್ ಕಡಿತ ಉಂಟಾಗುತ್ತದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ನಡುವೆ ವಿದ್ಯುತ್ ಸ್ಥಗಿತಗೊಳ್ಳಲಿದೆ. ಈ ರೀತಿ ವಿದ್ಯುತ್ ಕಡಿತ ಸಾರ್ವಜನಿಕರು ಅಸಮಧಾನ ಹೊರ ಹಾಕಿದ್ದಾರೆ.
  Published by:Sandhya M
  First published: