Karnataka Weather Report: ಮುಂದುವರೆದ ಮಳೆ ಆರ್ಭಟ, ನಾಲ್ಕು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರೀ ಮಳೆ (Heavy Rainfall) ಸುರಿಯುತ್ತಿದ್ದು, ಕರಾವಳಿ (Coastal) ಹಾಗೂ ಮಲೆನಾಡು (Malenadu) ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇಂದಿನ ಹವಾಮಾನ ಇಲಾಖೆ (Indian India Meteorological Department) ಮಾಹಿತಿ ಪ್ರಕಾರದಲ್ಲಿ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಇನ್ನು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಇನ್ನು ರಾಜ್ಯದ ಇತರ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ಘೋಷಿಸಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ
Zameer Ahmed: ಜಮೀರ್ ಅಹ್ಮದ್ ವಿರುದ್ಧ ಎಸಿಬಿ ಎಫ್ಐಆರ್, ಶಾಸಕರಿಗೆ ಉರುಳಾಯ್ತಾ ಅಕ್ರಮ ಆಸ್ತಿ ಪ್ರಕರಣ?
ಮಾಜಿ ಸಚಿವ (Ex Minister), ಬೆಂಗಳೂರು (Bengaluru)ಚಾಮರಾಜಪೇಟೆಯ ಹಾಲಿ ಶಾಸಕ (Chamarajpet MLA) ಬಿ.ಝಡ್. ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಅವರು ಅಕ್ರಮ ಆಸ್ತಿ ಹೊಂದಿರುವುದು ಎಸಿಬಿ ದಾಳಿ ವೇಳೆ ಪತ್ತೆಯಾಗಿದೆ. ಕೋಟಿ ಕೋಟಿ ಅಕ್ರಮ ಆಸ್ತಿ ಗಳಿಕೆ ಮಾಡಿರೋದು ನಡೆದ ಎಸಿಬಿ ದಾಳಿ ವೇಳೆ ಪತ್ತೆಯಾಗಿದೆ ಎನ್ನಲಾಗಿದೆ. ಜಮೀರ್ ಅಹ್ಮದ್ ಖಾನ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಜಮೀರ್ ಅಹ್ಮದ್ ಅವರ ಮನೆಯಲ್ಲಿ ಸಿಕ್ಕ ಹಲವು ಪ್ರಮುಖ ಕಡತಗಳ ಪರಿಶೀಲನೆ ನಡೆಸಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಎಸಿಬಿ ಜಮೀರ್ ಅಹ್ಮದ್ ವಿರುದ್ದ ಎಫ್ಐಆರ್ ದಾಖಲಿಸಿದ್ದು, ಶಾಸಕ ಜಮೀರ್ ಅಹ್ಮದ್ ಅವರ ಆದಾಯ ಎಷ್ಟು? ಎಫ್ಐಆರ್ ನಲ್ಲಿ ಎಸಿಬಿ ದಾಖಲಿಸಿದ ಪ್ರಮುಖ ಅಂಶಗಳು ಏನು ಎಂಬುದು ಇಲ್ಲಿದೆ.
Cooking Oil Prices: ಅಡುಗೆ ಎಣ್ಣೆ ಬೆಲೆ ಇಳಿಸುವಂತೆ ಕಂಪನಿಗಳಿಗೆ ಸರ್ಕಾರದ ತಾಕೀತು
ಇಂಧನ ಬೆಲೆ (Fuel Prices) , ಅಡುಗೆ ಎಣ್ಣೆ ಬೆಲೆ (Cooking Oil Prices) , ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಯಲ್ಲಾ ಗಗನಕ್ಕೇರಿ ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿತ್ತು. ಇದಕ್ಕೆ ಪರಿಹಾರ ಎನ್ನುವಂತೆ ಕೇಂದ್ರ ಸರ್ಕಾರ (Central Government) ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೆಲ ತಿಂಗಳ ಹಿಂದೆ ಕಡಿಮೆ ಮಾಡಿತ್ತು. ಇದು ಕೊಂಚ ಮಟ್ಟಿಗೆ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಈಗ ಮತ್ತೊಂದು ಪರಿಹಾರವಾಗಿ ಕೇಂದ್ರ ಸರ್ಕಾರ ಖಾದ್ಯ ತೈಲ ತಯಾರಿಕ ಕಂಪನಿಗಳಿಗೆ ಎಣ್ಣೆ ಬೆಲೆಯನ್ನು ಕಡಿಮೆ ಮಾಡುವಂತೆ ಸೂಚಿಸಿದೆ.
Gold Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್, ಇಳಿಕೆ ಕಂಡ ಚಿನ್ನದ ಬೆಲೆ
ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಮತ್ತಷ್ಟು ಕುಸಿತವಾಗಿದೆ. ಏನಿಲ್ಲವೆಂದರೂ ಪ್ರತಿ ಹತ್ತು ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ 750 ರೂಪಾಯಿಗಳಷ್ಟು ಕುಸಿತವಾಗಿದ್ದು ಇಂದು ಚಿನ್ನಾಭರಣಗಳನ್ನು ಕೊಳ್ಳಲು ಸುದಿನವಾಗಿದೆ ಅಂತಾನೇ ಹೇಳಬಹುದು. ನಿನ್ನೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,760 ಇದ್ದದ್ದು ಇಂದು ರೂ. 4,685ಕ್ಕೆ ಇಳಿದಿದೆ. ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸುತ್ತಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾಗಿ ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಇಂದೇ ಅದನ್ನುಕೊಳ್ಳಲು ಉತ್ತಮ ಸಮಯ. ಅಲ್ಲದೆ, ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ International Market) ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.
Kodagu: ಭೂಕುಸಿತ, ಭೂಕಂಪ! ಅಗತ್ಯ ಬಿದ್ದರೆ ಮನೆ ಮನೆಗೆ ಸೆಕ್ಯುರಿಟಿ ಭರವಸೆ ಕೊಟ್ಟ ಸರ್ಕಾರ
ಕೊಡಗು(ಜು.08): ಕೊಡಗು ಜಿಲ್ಲೆಯಲ್ಲಿ ಆಗಿರುವ ಭೂಕಂಪನಕ್ಕೆ (Earthquake) ಜಿಲ್ಲೆಯ ಜನತೆ ಯಾವುದೇ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ (R. Ashok) ಹೇಳಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ (Madikeri) ತಾಲ್ಲೂಕಿನ ಚೆಂಬು ಗ್ರಾಮದಲ್ಲಿ ಭೂಕಂಪನ ಆಗಿರುವ ಸ್ಥಳಕ್ಕೆ ಸಚಿವ ಆರ್ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು ಈಗಾಗಲೇ ಹೈದರಾಬಾದ್ ನಿಂದ 5 ಹಿರಿಯ ವಿಜ್ಞಾನಿಗಳ ತಂಡ ಜಿಲ್ಲೆಗೆ ಬಂದಿದೆ. ಅವರು ಈಗಾಗಲೇ ಚೆಂಬು ಗ್ರಾಮದ ಸುತ್ತಮುತ್ತ ಅಧ್ಯಯನ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ