Morning Digest: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ - ಚುನಾವಣೆಗೆ ಸಜ್ಜಾದ ಕಾಂಗ್ರೆಸ್​ - ಬೆಳಗಿನ ಟಾಪ್ ಸುದ್ದಿಗಳಿವು

Top News of the Day: ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಸುದ್ದಿಗಳ ಬಗ್ಗೆ ಗಮನಹರಿಸುವುದು ಮುಖ್ಯ. ಇಂದಿನ ಪ್ರಮುಖ ಸುದ್ದಿಗಳೇನು ಎಂಬುದರ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ...

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Gold Price Today: ಯಥಾಸ್ಥಿತಿ ಕಾಯ್ದುಕೊಂಡ ಹಳದಿ ಲೋಹ - ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಹೀಗಿದೆ

ನಿನ್ನೆಯಂತೆಯೇ ಚಿನ್ನದ (Gold) ಬೆಲೆ ಸ್ಥಿರವಾಗಿಯೇ ಉಳಿದಿದೆ. ನಿನ್ನೆ ಒಂದು ಗ್ರಾಂ ಆಭರಣ ಚಿನ್ನದ ಬೆಲೆ 4,625 ರೂ. ಆಗಿತ್ತು. ದಿನದ ಕೊನೆಯಲ್ಲಿ ಅದರ ಬೆಲೆ (Price) ಸ್ಥಿರವಾಗಿದ್ದು, ಇಂದು ಸಹ ಒಂದು ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,625 ರೂ. ಇದೆ. ಇನ್ನು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳು ಚಿನ್ನ ಹಾಗೂ ಬೆಳ್ಳಿ ದರಗಳ ಮೇಲೆ ನಿರಂತರವಾಗಿ ಪ್ರಭಾವ ಬೀರುತ್ತಲೇ ಇದೆ.

Petrol Price Today: ಇಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಅಂತ ತಿಳಿದುಕೊಳ್ಳಿ

Petrol and Diesel Price on May 16, 2022: ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಬಹುತೇಕ ಇಂದು ಇಂಧನ ಬೆಲೆಗಳಲ್ಲಿ (Fuel Price) ಯಾವುದೇ ವ್ಯತ್ಯಾಸವಾಗಿಲ್ಲ. ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಬೆಂಗಳೂರು (Bengaluru) ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರಗಳು (Petrol-Diesel Rate) ಅತಿಶಯವಾದ ಏರಿಳಿತಗಳಿಲ್ಲದೆ ಸ್ಥಿರವಾಗಿವೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರವಾಗಿದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಕಚ್ಚಾ ತೈಲದ ಬೆಲೆಯೂ (Crude oil) ಇಳಿಯುತ್ತಿಲ್ಲ, ಇತ್ತ ದೇಶದಲ್ಲಿ ನಿತ್ಯ ಒಂದಿಷ್ಟು ಪೈಸೆಗಳಷ್ಟು ಪೆಟ್ರೋಲ್-ಡಿಸೆಲ್ ಬೆಲೆಯಲ್ಲೂ ಏರಿಳಿತ ನಡೆಯುತ್ತಲೇ ಇದೆ. ಕಳೆದ ಹತ್ತು ದಿನಗಳಲ್ಲಿ ದೇಶದೆಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಹತ್ತು ರೂಪಾಯಿಗಿಂತಲೂ ಹೆಚ್ಚಳವಾಗಿರುವುದು ಸುಳ್ಳಲ್ಲ. ಭಾರತದಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 37 ದಿನಗಳಿಂದ ಇಂಧನ ದರ ಸ್ಥಿರವಾಗಿದೆ. ಮುಂಬೈ ನಗರದಲ್ಲಿ ಪೆಟ್ರೋಲ್ ದರ 120 ರೂ ಪ್ರತಿ ಲೀಟರ್ ದಾಟಿದೆ.

Congress Agenda: 3 ದಿನದ ನವ ಸಂಕಲ್ಪ ಶಿಬಿರ ಮುಕ್ತಾಯ - ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಜೆಂಡಾಗಳಿವು

ರಾಜಸ್ಥಾನದ (Rajasthan) ಉದಯಪುರದಲ್ಲಿ (Udaipur) ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ (AICC President Sonia Gandhi) ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನವ ಸಂಕಲ್ಪ ಶಿಬಿರ (Nava Sankap Shibira) ಕೊನೆಯಾಗಿದ್ದು, ತನ್ನ ಮೂರು ದಿನಗಳ ಚಿಂತನ ಶಿಬಿರದಲ್ಲಿ, ಭಾರತೀಯ ಜನತಾ ಪಕ್ಷದಿಂದ (BJP) ತಾನು ಎದುರಿಸಿದ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಹಲವಾರು ದಾರಿಗಳನ್ನು ಹುಡುಕುವ ಪ್ರಯತ್ನವನ್ನು ಕಾಂಗ್ರೆಸ್ (Congress) ಮಾಡಿದೆ ಎನ್ನಲಾಗುತ್ತಿದೆ. ಇನ್ನು ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಅವರೊಂದಿಗಿನ ಒಪ್ಪಂದವು ವಿಫಲವಾದ ನಂತರ ಸಹ, ಅವರು ನೀಡಿರುವ ಅನೇಕ ಸಲಹೆಗಳು ಉದಯಪುರದಲ್ಲಿ ತೆಗೆದುಕೊಂಡ ಹಲವಾರು ನಿರ್ಧಾರಗಳಿಗೆ ದಾರಿ ಮಾಡಿಕೊಟ್ಟಿವೆ ಎನ್ನಬಹುದು. ಹಾಗಾದ್ರೆ ಶಿಬಿರದಲ್ಲಿ ತೆಗೆದುಕೊಂಡ ನಿರ್ಧಾರಗಳೇನು ಎಂಬುದು ಇಲ್ಲಿದೆ.

PM Modi Nepal Visit: ಇಂದು ನೇಪಾಳಕ್ಕೆ ಪ್ರಧಾನಿ ಮೋದಿ - ಸಂಸ್ಕೃತಿ ಮತ್ತು ಶಿಕ್ಷಣ ಕ್ಷೇತ್ರದ ಕುರಿತು ಚರ್ಚೆ ಸಾಧ್ಯತೆ

ಸೋಮವಾರ (Monday) ಬುದ್ಧ ಪೂರ್ಣಿಮೆಯ ಹಿನ್ನೆಲೆ ನೆರೆಯ ರಾಷ್ಟ್ರ ನೇಪಾಳದ (Nepal) ಲುಂಬಿನಿಯಲ್ಲಿ ಪ್ರಧಾನಿ ಮೋದಿ (Narendra Modi) ಹಾಗೂ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ (Sher Bahadur Deuba) ಭೇಟಿಯಾಗಲಿದ್ದು, ಇತ್ತೀಚಿನ ಒಪ್ಪಂದಗಳ ಸಮಗ್ರ ಪರಿಶೀಲನೆ ಹಾಗೂ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಈ ಭೇಟಿಯ ಕಾರ್ಯಸೂಚಿಯಲ್ಲಿ ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಕ್ಷೇತ್ರಗಳಿಗೆ ಸಂಬಂಧಪಟ್ಟ ಚರ್ಚೆ ಸಹ ನಡೆಯಲಿದೆ ಎಂದು ತಿಳಿದುಬಂದಿದೆ.

Crime News: ಮೈಸೂರಿನ ವೈದ್ಯರೊಬ್ಬರ ಹತ್ಯೆ ಪ್ರಕರಣ - ಆರೋಪಿ ಬರೋಬ್ಬರಿ 350 ಕೋಟಿ ರೂ ಆಸ್ತಿ ಒಡೆಯನಂತೆ

ಮೈಸೂರಿನ (Mysuru) ವಸಂತನಗರದಲ್ಲಿ ಕೆಲ ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ನಾಟಿವೈದ್ಯ ಶಾಬಾ ಷರೀಫ್ (Doctor) ಹತ್ಯೆಯಾಗಿದ್ದು, ನಾಲ್ವರು ಆರೋಪಿಗಳನ್ನು ಕೇರಳದ (Kerala) ಮಲಪ್ಪುರಂ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ವಸಂತನಗರದಲ್ಲಿ ಮೂಲವ್ಯಾಧಿಗೆ ನಾಟಿ ಔಷಧ ನೀಡುತ್ತಿದ್ದ ಈ ವೈದ್ಯಯ ಬಳಿ ಕೇರಳದಿಂದ ಸಹ ಹಲವಾರು ಜನರು ಬಂದು ಔಷಧಿ ಪಡೆದು ಹೋಗುತ್ತಿದ್ದು, ಹಾಗಾಗಿ ಕೇರಳದಲ್ಲಿ ಸಹ ಹೆಚ್ಚು ಪ್ರಸಿದ್ದಿ ಪಡೆದಿದ್ದ ಇವರ ಔಷಧಿಯೇ ಇವರ ಪ್ರಾಣಕ್ಕೆ ಮುಳುವಾಯಿತು ಎಂದು ಸದ್ಯದ ತನಿಖೆಯಲ್ಲಿ ತಿಳಿದುಬಂದಿದೆ.
Published by:Sandhya M
First published: