Morning Digest: ಮತ್ತೆ ಮೇಕೆದಾಟು ಸದ್ದು, ಬಂಗಾರ ಬೆಲೆ ಇಳಿಕೆ, ಬೆಳಗಿನ ಟಾಪ್ ಸುದ್ದಿಗಳಿವು

Top News Today: ಈ ದಿನದ ಮುಖ್ಯ ಸುದ್ದಿಗಳೇನು ಗೊತ್ತೇ? ಇಂದು ನಡೆಯಲಿರುವ ಹಾಗೂ ನಡೆದಿರೋ ಕೆಲವು ಇಂಪಾರ್ಟೆಂಟ್ ಸುದ್ದಿಗಳ ಸಂಕ್ಷಿಪ್ತ ಮಾಹಿತಿ ನಿಮಾಗಾಗಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
1. Mekedatu Project: ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ನಿಯೋಗದಿಂದ ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿ!

ಬೆಂಗಳೂರು (Bengaluru) ಮಹಾನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಮಹತ್ವಾಕಾಂಕ್ಷೆಯ ಮೇಕೆದಾಟು (Mekedatu) ಬಳಿ‌ ಅಣೆಕಟ್ಟು ನಿರ್ಮಿಸುವ ಯೋಜನೆಯ ವಿಸ್ತ್ರತ ಯೋಜನಾ ವರದಿಗೆ (Detail Project Report) ಅನುಮತಿ ನೀಡುವ ಬಗ್ಗೆ ಜೂನ್ 23ರಂದು ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery Water Management Authority) ಸಭೆಯಲ್ಲಿ ಚರ್ಚೆ ಆಗಲಿದೆ. ಕರ್ನಾಟಕದ ಮನವಿ ಮೇರೆಗೆ ಸಭೆಯ ಅಜೆಂಡಾದಲ್ಲಿ ಮೇಕೆದಾಟು ಡಿಪಿಆರ್ ವಿಷಯವನ್ನು ಸೇರಿಸಲಾಗಿದೆ. ಇದನ್ನು ವಿರೋಧಿಸಿ ಇಂದು ತಮಿಳುನಾಡಿನ (Tamil Nadu) ನಿಯೋಗ ಕೇಂದ್ರ ಜಲಸಂಪನ್ಮೂಲ ಸಚಿವ (Minister of Water Resources) ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿಯಾಗಲಿದೆ. ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ಕಿಸಿ

2. Agnipath Protest: ಅಗ್ನಿಪಥ್ ವಿರೋಧಿಸಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರವು ಹೊಸದಾಗಿ ಮಿಲಿಟರಿ ನೇಮಕಾತಿಗಾಗಿ ರೂಪಿಸಿರುವ ಅಗ್ನಿಪಥ (Agnipath Scheme) ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆಯುತ್ತಿದೆ. ನಿರುದ್ಯೋಗಿ ಯುವಕರು, ಪೂರ್ಣಾವಧಿಗೆ ಸೇನೆ ಸೇರಬೇಕೆಂದು ಕನಸು ಕಂಡಿದ್ದ ಯುವಕರು ಮತ್ತವರ ಕುಟುಂಬದವರು ಈಗ ಆಕ್ರೋಶಭರಿತರಾಗಿದ್ದು ಇದರ ಪರಿಣಾಮವಾಗಿ ಕೆಲವು ಕಡೆ ಹಿಂಸಾಚಾರ, ಸಾವು, ನೋವು, ಸಾರ್ವಜನಿಕ ಆಸ್ತಿಗಳ ನಷ್ಟವಾಗಿದೆ. ಕಾಂಗ್ರೆಸ್ ಪಕ್ಷ (Congress Party) ಕೂಡ ಯುವಕರ ಅಳಲಿಗೆ ದನಿಗೂಡಿಸಿ ಇಂದು ದೆಹಲಿಯಲ್ಲಿ (Delhi) ಬೃಹತ್ ಪ್ರತಿಭಟನೆ (Massive Protest) ಹಮ್ಮಿಕೊಂಡಿದೆ. ಕಾಂಗ್ರೆಸ್ ಪ್ರತಿಭಟನೆ ಕುರಿತ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ.

3. Today's Gold-Silver Price : ಚಿನ್ನದಂಥ ಸುದ್ದಿ, ಬಂಗಾರದ ಬೆಲೆಯಲ್ಲಿ ಇಳಿಕೆ: ಇಂದಿನ ಬೆಳ್ಳಿಯ ದರ ಎಷ್ಟಿದೆ?

ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಸ್ವಲ್ಪ ಮಟ್ಟಿಗಿನ ಏರಿಕೆಯಾಗಿದೆ. ನಿನ್ನೆಗೆ ಒಂದು ಗ್ರಾಂ ಆಭರಣದ (Jewellery) ಚಿನ್ನದ ಬೆಲೆ (Gold Rate) 4,775 ರೂ. ಇದ್ದದ್ದು ಇಂದು 4,765 ರೂಪಾಯಿಗಳಿಗೆ ಕುಸಿದಿದ್ದು ಪ್ರತಿ ಗ್ರಾಂಗೆ ಹತ್ತು ರೂ. ಇಳಿದಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ. ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ.

4. Petrol-Diesel Price Today: ಬೆಳಗಾವಿ, ಬಳ್ಳಾರಿ ಸೇರಿ ಹಲವೆಡೆ ಪೆಟ್ರೋಲ್ ಬೆಲೆ ಏರಿಕೆ, ನಿಮ್ಮ ಜಿಲ್ಲೆಯಲ್ಲಿ ಹೇಗಿದೆ?

ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.65, ರೂ. 111.35, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.25, ರೂ. 97.28, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

5. ಚಂದದ್ದೊಂದು ಸುದ್ದಿ, ಹಳ್ಳಿ ಶಾಲೆಯಲ್ಲಿ ಮಾದರಿ ಬ್ಯಾಂಕಿಗ್! ಮುಳ್ಳೂರು ಸರ್ಕಾರಿ ಶಾಲೆಯಲ್ಲಿ SBM ಬ್ಯಾಂಕ್ ಆರಂಭ!

ಕೊಡಗು ಜಿಲ್ಲೆಯ ಗ್ರಾಮವೊಂದರಲ್ಲಿ ಎಸ್ ಬಿಎಂ ಮತ್ತೆ ಶುರುವಾಗಿದೆ. ಇದು ಅಚ್ಚರಿ ಎನಿಸಿದರೂ ನಿಜವೆ. ಅಷ್ಟಕ್ಕೂ ಎಸ್ ಬಿಎಂ ಅಂದರೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಅಲ್ಲ. ಬದಲಾಗಿ ಸ್ಕೂಲ್ ಬ್ಯಾಂಕ್ ಆಫ್ ಮಳ್ಳೂರು. ಇದೇನಿದು ಶಾಲೆ ಹೆಸರಿನಲ್ಲಿ ಬ್ಯಾಂಕ್ ಆರಂಭವಾಗಿದೆಯಾ ಎನ್ನುವ ಪ್ರಶ್ನೆ ನಿಮಗೆ ಕಾಡುತ್ತಿರಬಹುದು. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಕಿಂಗ್ ವ್ಯವಹಾರ ಕಲಿಸಬೇಕು, ಉಳಿತಾಯ ಮನೋಭಾವ ಬೆಳೆಸಬೇಕು ಮತ್ತು ಜಂಕ್ ಫುಡ್ ಗಳಿಂದ ಅವರನ್ನು ದೂರ ಇಲಿಸಬೇಕೆಂಬ ದೃಷ್ಟಿಯಿಂದ ಸ್ಕೂಲ್ ಬ್ಯಾಂಕ್ ಆಫ್ ಮುಳ್ಳೂರು ಅನ್ನು ಆರಂಭಿಸಲಾಗಿದೆ. ಚಿಣ್ಣರ ಬ್ಯಾಂಕಿಂಗ್ ಕುರಿತ ಸಂಪೂರ್ಣ ಸುದ್ದಿ ಇಲ್ಲಿ ಓದಿ.
Published by:Divya D
First published: