• Home
 • »
 • News
 • »
 • state
 • »
 • Siddaramaiah: ವೈದ್ಯರ ನಿರ್ಲಕ್ಷ್ಯಕ್ಕೆ 3 ಜೀವ ಬಲಿ ಕೇಸ್​, ಸುಧಾಕರ್​ ರಾಜೀನಾಮೆಗೆ ಸಿದ್ದು ಆಗ್ರಹ; ಸಿಎಂ ಕೂಡ ಫುಲ್​ ಗರಂ

Siddaramaiah: ವೈದ್ಯರ ನಿರ್ಲಕ್ಷ್ಯಕ್ಕೆ 3 ಜೀವ ಬಲಿ ಕೇಸ್​, ಸುಧಾಕರ್​ ರಾಜೀನಾಮೆಗೆ ಸಿದ್ದು ಆಗ್ರಹ; ಸಿಎಂ ಕೂಡ ಫುಲ್​ ಗರಂ

ಸುಧಾಕರ್​, ಸಿದ್ದರಾಮಯ್ಯ

ಸುಧಾಕರ್​, ಸಿದ್ದರಾಮಯ್ಯ

ಕೂಡಲೇ ಆರೋಗ್ಯ ಸಚಿವ ಸುಧಾಕರ್​ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು.

 • News18 Kannada
 • Last Updated :
 • Karnataka, India
 • Share this:

  ವೈದ್ಯರ ನಿರ್ಲಕ್ಷ್ಯ ದಿಂದ ತಾಯಿ ಮಕ್ಕಳ ಸಾವು (Children Death) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ತುಮಕೂರು ಜಿಲ್ಲೆಯ ವೈದ್ಯರ (Doctor) ನಿರ್ಲಕ್ಷದಿಂದಾಗಿ ಆದ ಬಾಣಂತಿ ಮತ್ತು ಇಬ್ಬರು ಹಸುಗೂಸುಗಳ ಸಾವಿಗೆ ಆರೋಗ್ಯ ಸಚಿವ ಸುಧಾಕರ್ (Sudhakar) ಅವರೇ ಕಾರಣ ಎಂದು ಸಿದ್ದರಾಮಯ್ಯ (Siddaramaiah) ಆರೋಪಿಸಿದ್ದಾರೆ. 


  ಸುಧಾಕರ್​ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ


  ಕೂಡಲೇ ಆರೋಗ್ಯ ಸಚಿವ ಸುಧಾಕರ್​ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ  ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.


  ಸುಧಾಕರ್ ವಿರುದ್ಧ ಸಿದ್ದರಾಮಯ್ಯ ಕಿಡಿ


  ಇದೇ ಸುಧಾಕರ್​ ಅವರು ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ ಎಂದು ಟ್ವೀಟ್​ ಮೂಲಕ ಸಿದ್ದರಾಮಯ್ಯ ಕಿಡಿಕಾರಿದ್ರು.


  ಇದನ್ನೂ ಓದಿ: Rain Update: ರಾಜ್ಯದಲ್ಲಿ ನಿಲ್ಲದ ವರುಣನ ಆರ್ಭಟ, ಇನ್ನೂ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ  ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯ್ತಿದ್ದಾರೆ


  ಕರ್ತವ್ಯ ಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಬಿಜೆಪಿಯ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ. ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ ಎಂದು ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ರು.


  ಇದನ್ನೂ ಓದಿ: Renukacharya: ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್​ ಶವ ಪತ್ತೆ, ಕಾಲುವೆಯಲ್ಲಿ ಬಿದ್ದಿದ್ದ ಕಾರು


  ಸಿಎಂ ಬಸವರಾಜ ಬೊಮ್ಮಾಯಿ ಗರಂ


  ಗರ್ಭಿಣಿ ಸ್ತ್ರೀಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ನೀಡದ ವೈದ್ಯೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಗರಂ ಆಗಿರುವ ಸಿಎಂ ಬೊಮ್ಮಾಯಿ, ವಿಷಯ ತಿಳಿಯುತ್ತಿದ್ದಂತೆ ದೂರವಾಣಿ ಮೂಲಕ ಆರೋಗ್ಯ ಸಚಿವರ ಜೊತೆ ಮಾತಾಡಿದ್ದಾರೆ. ಘಟನೆ ಬಗ್ಗೆ ವಿವರ ಪಡೆದುಕೊಂಡಿದ್ದಾರೆ. ತುಮಕೂರಿಗೆ ಭೇಟಿ ಕೊಟ್ಟು ವಾಸ್ತವ ಸ್ಥಿತಿ ಅರಿಯಲು ಸುಧಾಕರ್​ ಅವರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಇಂದು ಅನಾರೋಗ್ಯದಿಂದ ಸಚಿವ ಸಂಪುಟ ಸಭೆಗೆ ಗೈರಾಗಿದ್ದ ಸಚಿವ ಸುಧಾಕರ್ ಗೈರಾಗಿದ್ರು.

  Published by:ಪಾವನ ಎಚ್ ಎಸ್
  First published: