• Home
  • »
  • News
  • »
  • state
  • »
  • Tumakuru: ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಅವಳಿ ಶಿಶು, ಬಾಣಂತಿ ಸಾವು; ಡಾಕ್ಟರ್​, ನರ್ಸ್​ ಸಸ್ಪೆಂಡ್​

Tumakuru: ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಅವಳಿ ಶಿಶು, ಬಾಣಂತಿ ಸಾವು; ಡಾಕ್ಟರ್​, ನರ್ಸ್​ ಸಸ್ಪೆಂಡ್​

ತುಮಕೂರು ಜಿಲ್ಲಾಸ್ಪತ್ರೆ

ತುಮಕೂರು ಜಿಲ್ಲಾಸ್ಪತ್ರೆ

ವೈದ್ಯೆಯ ಬಳಿ ಅಂಗಲಾಚಿ ಕೇಳಿದ್ರೂ ಚಿಕಿತ್ಸೆ ಕೊಡದೆ ವೈದ್ಯೆ ನಿರ್ಲಕ್ಷ್ಯ ಮಾಡಿದ್ದರಿಂದ  ಮಕ್ಕಳು ಹಾಗೂ ತಾಯಿ ಸೇರಿ ಮೂವರೂ ಕೊನೆಯುಸಿರೆಳೆದಿದ್ದಾರೆ

  • Share this:

    ತುಮಕೂರು (ನ.03): ವೈದ್ಯರ ನಿರ್ಲಕ್ಷಕ್ಕೆ ಅವಳಿ ಮಕ್ಕಳು (Twins) ಹಾಗೂ ತಾಯಿ ಮೃತಪಟ್ಟಿರುವ ( (Mother Death) ) ಘಟನೆ ತುಮಕೂರಿನಲ್ಲಿ ನಡೆದಿದೆ.  ಜಿಲ್ಲೆಯ ಭಾರತಿನಗರದ ಅಭಯ ಆಂಜನೇಯನ ಸ್ವಾಮಿ ದೇವಸ್ಥಾನದ (Anjaneyaswamy Temple) ಬಳಿ ವಾಸವಿದ್ದ ಅನಾಥ ಬಾಣಂತಿ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಜಿಲ್ಲಾ ಆಸ್ಪತ್ರೆಗೆ (District Hospital) ದಾಖಲಿಸಿದ್ರು . ಮಹಿಳೆಯೊಂದಿಗೆ (Women) ಪಕ್ಕದ ಮನೆಯ ವೃದ್ಧೆಯೊಬ್ಬರು ತೆರಳಿದ್ದರು.


    ತಾಯಿ ಕಾರ್ಡ್ ಇಲ್ಲ ಎಂದು ಚಿಕಿತ್ಸೆ ನೀಡಿಲ್ಲ


    ಜಿಲ್ಲಾಸ್ಪತ್ರೆಯಲ್ಲಿ ತಾಯಿ ಕಾರ್ಡ್ ಇಲ್ಲ ಎಂಬ ಕಾರಣ ನೀಡಿ ಆಸ್ಪತ್ರೆಯಿಂದ ವಾಪಸ್‌ ಕಳುಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವೈದ್ಯೆಯ ಬಳಿ ಅಂಗಲಾಚಿ ಕೇಳಿದ್ರೂ ಚಿಕಿತ್ಸೆ ಕೊಡದೆ ವೈದ್ಯೆ ನಿರ್ಲಕ್ಷ್ಯ ಮಾಡಿದ್ದರಿಂದ  ಮಕ್ಕಳು ಹಾಗೂ ತಾಯಿ ಸೇರಿ ಮೂವರೂ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ.


    ಬಲಿಯಾಯ್ತು ಮೂರು ಜೀವ


    ಇದಷ್ಟೇ ಅಲ್ಲದೇ ತಾವು ಚಿಕಿತ್ಸೆ ಕೊಡುವ ಬದಲು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಬರೆದುಕೊಡುತ್ತೇವೆ ಅಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಮಹಿಳೆಗೆ ಹೇಳಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ತಮ್ಮ ಬಳಿ ಹಣ ಇಲ್ಲದ ಕಾರಣ ಮಹಿಳೆ ಮನೆಗೆ ವಾಪಸ್‌ ಬಂದಿದ್ದರು. ಈ ಘಟನೆ ಬಳಿಕ ಬೆಳಗಿನ ಜಾವ ಮಹಿಳೆ ಅನಾರೋಗ್ಯದ ನಡುವೆ ಒಂದು ಮಗುವಿಗೆ ತಾಯಿ ಜನ್ಮ ನೀಡಿದ್ದಾರೆ. ಬಳಿಕ, ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವವಾಗಿ 3 ಜೀವಗಳು ಬಲಿಯಾಗಿವೆ.




    ಇದನ್ನೂ ಓದಿ: Renukacharya: ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್​ ಶವ ಪತ್ತೆ, ಕಾಲುವೆಯಲ್ಲಿ ಬಿದ್ದಿದ್ದ ಕಾರು


    ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ


    ಮೃತ ಮಹಿಳೆಯನ್ನು ಕಸ್ತೂರಿ  ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. ಕಸ್ತೂರಿ ಆಸ್ಪತ್ರೆಗೆ ದಾಖಲಾಗಬೇಕಾದರೆ,  ತಾಯಿ ಕಾರ್ಡ್, ಆಧಾರ್ ಕಾರ್ಡ್ ಕೊಡುವಂತೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಸೂಚಿಸಿದ್ದರು. ಆದರೆ, ಅವರ ಬಳಿ ತಾಯಿ ಕಾರ್ಡ್‌ ಇರಲಿಲ್ಲ. ಈ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಜಿಲ್ಲಾಸ್ಪತ್ರೆ ಸಿಬ್ಬಂದಿ ಹಿಂದೇಟು ಹಾಕಿದ್ದಾರೆ ಎಂದು ತಿಳಿದುಬಂದಿದೆ. ಕಸ್ತೂರಿ ತಮಿಳುನಾಡು ಮೂಲದವರಾಗಿದ್ದು, ಕಳೆದ ಒಂದು ತಿಂಗಳಿನಿಂದ ಭಾರತಿ ನಗರದಲ್ಲಿ ವಾಸವಿದ್ದರು. ಗರ್ಭಿಣಿ ಹಾಗೂ ಇಬ್ಬರು ಮಕ್ಕಳ ಸಾವಿಗೆ ತುಮಕೂರು ಜಿಲ್ಲಾಸ್ಪತ್ರೆ ವೈದ್ಯರೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.


    ಜಿಲ್ಲಾ ಆರೋಗ್ಯಾಧಿಕಾರಿ ಮಂಜುನಾಥ್ ಭೇಟಿ


    ಘಟನಾ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಮಂಜುನಾಥ್ ಭೇಟಿ ನೀಡಿದ್ದಾರೆ. ಈ ವೇಳೆ ಸ್ಥಳೀಯರು DHO ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಪ್ಪಿತಸ್ಥ ವೈದ್ಯರನ್ನು ಅಮಾನತು ಮಾಡುವಂತೆಯೂ ಸ್ಥಳೀಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಜುನಾಥ್, ಜಿಲ್ಲಾಸ್ಪತ್ರೆಯಲ್ಲಿ ಸಂಬಂಧಪಟ್ಟ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.


    ಇದನ್ನೂ ಓದಿ: Rain Update: ರಾಜ್ಯದಲ್ಲಿ ನಿಲ್ಲದ ವರುಣನ ಆರ್ಭಟ, ಇನ್ನೂ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ


    ವೈದ್ಯರು ಇಬ್ಬರು ನರ್ಸ್​ ಸಸ್ಪೆಂಡ್​


    ಜೊತೆಗೆ ಡಾ. ಉಷಾ ಹಾಗೂ ಸಿಬ್ಬಂದಿ ಅಮಾನತುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದು, ಅಮಾನತುಗೊಳಿಸುವವರೆಗೂ ಶವಗಳನ್ನು ತೆಗೆಯಲು ಬಿಡುವುದಿಲ್ಲ ಎಂದು ಪಟ್ಟುಹಿಡಿದರು. ಈ ಸಂದರ್ಭ ಹೆರಿಗೆ ಮಾಡಿಸಲು ಆಧಾರ್​, ತಾಯಿ ಕಾರ್ಡ್ ಕಡ್ಡಾಯವಲ್ಲ. ಈ ಸಂಬಂಧ ಮಾಹಿತಿ ಪಡೆದು ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು. ಪ್ರಕರಣ ಸಂಬಂಧ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಡಾ. ಉಷಾ ಹಾಗೂ ಇಬ್ಬರು ದಾದಿಯರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    Published by:ಪಾವನ ಎಚ್ ಎಸ್
    First published: