ಮಕ್ಕಳಿಗೆ ವಿಷ ಉಣಿಸಿ ತಾಯಿ ಸೇರಿ ಮೂವರ ಸಾವು

ತಾಯಿ ಲಕ್ಷ್ಮೀ ಯಮಕನಮರಡಿ (40) ಮಗಳು ಹರ್ಷಿತಾ (8) ಹಾಗೂ ಮಗ ಸಮರ್ಥ (6) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

G Hareeshkumar | news18-kannada
Updated:September 23, 2019, 10:32 PM IST
ಮಕ್ಕಳಿಗೆ ವಿಷ ಉಣಿಸಿ ತಾಯಿ ಸೇರಿ ಮೂವರ ಸಾವು
ಸಾಂದರ್ಭಿಕ ಚಿತ್ರ
  • Share this:
ಬೆಳಗಾವಿ(ಸೆ.23):  ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ವಿಷವನ್ನು ಹಾಕಿ ತಾನು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿಯ ಗೋಕಾಕ್ ನಗರದ ಮೊಮಿನ ಗಲ್ಲಿಯಲ್ಲಿ ನಡೆದಿದೆ.

ತಾಯಿ ಲಕ್ಷ್ಮೀ ಯಮಕನಮರಡಿ (40) ಮಗಳು ಹರ್ಷಿತಾ (8) ಹಾಗೂ ಮಗ ಸಮರ್ಥ (6) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಕ್ಕಳಿಗೆ ವಿಷವನ್ನು ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ : ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 10 ಮಂದಿ ಸಾವು

ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗೋಕಾಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆತ್ಮಹತ್ಯೆಯನ್ನು ಯಾಕೆ ಮಾಡಿಕೊಂಡಿದ್ದಾರೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

First published:September 23, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading