ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಯಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಕುಮಾರಸ್ವಾಮಿ ವಿಷಾದ

ಆ ತಾಯಿಯ ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ ಎಂದು ಹೆಚ್.‌ಡಿ. ಕುಮಾರಸ್ವಾಮಿ ವಿಷಾದಿಸಿದ್ದಾರೆ.

news18-kannada
Updated:July 31, 2020, 1:31 PM IST
ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಯಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಕುಮಾರಸ್ವಾಮಿ ವಿಷಾದ
ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ
  • Share this:
ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ. ಕೊರೋನಾ ಸೋಂಕು ಜನರ ಜೀವ-ಜೀವನದ ಜೊತೆ ಮಾತ್ರ ಚೆಲ್ಲಾಟವಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಕಾರಣದಿಂದ ಈ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಿಲ್ಲ. ಅದರ ಬದಲಿಗೆ ಸೆಪ್ಟಂಬರ್ ತಿಂಗಳಿನಿಂದ ಆನ್‌ಲೈನ್‌ನಲ್ಲಿ ತರಗತಿಗಳನ್ನು ಆರಂಭಿಸಲು ಸರ್ಕಾರ ಚಿಂತಿಸುತ್ತಿದೆ. ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಇಲ್ಲದ ಪೋಷಕರ ಮಕ್ಕಳಿಗೆ ಅನುಕೂಲವಾಗಲೆಂದು ಟಿವಿಗಳಲ್ಲಿಯೂ ತರಗತಿ ಪ್ರಸಾರ ಮಾಡುವುದಾಗಿ ಸರ್ಕಾರ ಘೋಷಿಸಿದೆ. ಆದರೆ ಗದಗ ಜಿಲ್ಲೆಯಲ್ಲಿ ಟಿವಿಯೂ ಇಲ್ಲದ ಕುಟುಂಬವೊಂದು ತಾಳಿ ಮಾರಿ ಟಿವಿ ತಂದ ಘಟನೆ ಮನಕರಗಿಸುವಂತೆ ಮಾಡಿದೆ. ಈ ಕುರಿತು ಮಾಜಿ ಸಿಎಂ ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್‌ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸೋಂಕು ಜನರ ಜೀವ-ಜೀವನದ ಜೊತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ.


ಆ ತಾಯಿಯ ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ ಎಂದಿದ್ದಾರೆ.

ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೋನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.ಆನ್‌ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ, "ಎನಗೆ ಮನೆ ಇಲ್ಲ , ಎನಗೆ ಧನವಿಲ್ಲ , ಮಾಡುವದೇನು? ನೀಡುವದೇನು? ಮನೆ ಧನ ಸಕಲ ಸಂಪದ ಸೌಖ್ಯವುಳ್ಳ ನಿಮ್ಮ ಶರಣರ ತಪ್ಪಲಕ್ಕಿಯ ತಂದು, ಎನ್ನೊಡಲ ಹೊರೆವೇನಾಗಿ, ಅಮರೇಶ್ವರ ಲಿಂಗಕ್ಕೆ ನೀಡುವ ಬಯಕೆ ಎನಗಿಲ್ಲ ಸಂಗನ ಬಸವಣ್ಣಾ" ಎಂದು ವಚನವನ್ನೂ ನುಡಿಯುವ ಮೂಲಕ ಬಡವರಿಗೆ ಸಹಕರಿಸಿ ಎಂದು ಸರ್ಕಾರವನ್ನು ಹೆಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
Published by: MAshok Kumar
First published: July 31, 2020, 1:31 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading