ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣಕ್ಕೆ 100 ಕೋಟಿ‌ ರೂ. ಅನುದಾನ ಮಂಜೂರು

ರೈಲ್ವೆ ಇಲಾಖೆಯು ಆರಂಭಿಕ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದೆ‌ ಎಂದು ಮಾಹಿತಿ ನೀಡಿದ್ದಾರೆ. ಅದಕ್ಕಾಗಿ ಮುಂಗಡ ಪತ್ರದಲ್ಲಿ 12 ಕೋಟಿ ರೂ.ಗಳನ್ನು ಮೀಸಲಿರಿಸಿದೆ ಎಂದವರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಶಿವಮೊಗ್ಗ(ಫೆ.06): ಮಲೆನಾಡು ಮತ್ತು ಉತ್ತರ ಕರ್ನಾಟಕದ ಸಂಪರ್ಕ ಬೆಸೆಯುವ ಕೊಂಡಿಯಾಗಿರುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೇ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ 100 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ. ಇದೇ ವೇಳೆ ಶಿವಮೊಗ್ಗ– ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣಕ್ಕೆ 100 ಕೋಟಿ‌ ರೂಪಾಯಿ ಅನುದಾನ ಮಂಜೂರು ಮಾಡಿರುವುದಕ್ಕೆ ಪ್ರಧಾನ ಮಂತ್ರಿ ಮತ್ತು ಕೇಂದ್ರದ ಸಚಿವರಿಗೆ ಅಭಿನಂದನೆಯನ್ನು ಸಂಸದ ರಾಘವೇಂದ್ರ ಸಲ್ಲಿಸಿದ್ದಾರೆ.

ಶಿವಮೊಗ್ಗ ಮತ್ತು ಹಾವೇರಿ‌ ಜಿಲ್ಲೆಗಳ  ಜನರ ಬಹು ದಿನಗಳ ಕನಸಾಗಿರುವ ಈ ಯೋಜನೆ ಗೆ ಕೇಂದ್ರ ಸರ್ಕಾರ ಹಣ ಮಂಜೂರು ಮಾಡುವ ಮೂಲಕ ಹಸ್ತು ಎಂದಿದೆ ಎಂದರು. ಈಗಾಗಲೇ  ಈ ರೈಲು ಮಾರ್ಗದ ನಿರ್ಮಾಣ ಕಾರ್ಯಕ್ಕೆ ಅಗತ್ಯವಾಗಿರುವ ಭೂಮಿಯನ್ನು ಕೆ.ಐ.ಡಿ.ಬಿ. ಸಂಸ್ಥೆಯ ಮೂಲಕ ಭೂಸ್ವಾದೀನ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಚಕ್ಕಾ ಜಾಮ್​: ಇಂದು ದೇಶಾದ್ಯಂತ ಹೆದ್ದಾರಿ ತಡೆ ನಡೆಸಲಿರುವ ರೈತರು

ಈ ರೈಲು ಮಾರ್ಗದ ನಿರ್ಮಾಣ ಸಂಬಂಧ ಕೇಂದ್ರ ರೈಲ್ವೆ ಸಚಿವರೊಂದಿಗೆ ನಿರಂತರ ಸಂಪರ್ಕಿಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಹೇಳಿದ್ದಾರೆ.  2019-20 ರ ಕೇಂದ್ರ ಮುಂಗಡ ಪತ್ರದಲ್ಲಿ ಶಿವಮೊಗ್ಗ ಭಾಗದಲ್ಲಿ  ರೈಲು ಸಂಚಾರವನ್ನು ಹೆಚ್ಚಿಸಲು ಮೂಲ ಅಗತ್ಯವೆನಿಸಿರುವ ಕೋಚಿಂಗ್ ಡಿಪೋವನ್ನು ಶಿವಮೊಗ್ಗ  ತಾಲೂಕಿನ ಕೋಟೆಗಂಗೂರು ಗ್ರಾಮದ ಬಳಿ  ನಿರ್ಮಿಸಲು ಅಗತ್ಯ ಅನುದಾನ ಈಗಾಗಲೇ ಮಂಜೂರಾಗಿದೆ. ಅಲ್ಲದೇ ಇದಕ್ಕೆ ಬೇಕಾಗಿರುವ ಹೆಚ್ಚುವರಿ ಭೂಮಿಯನ್ನು ಖಾಸಗಿಯವರಿಂದ ಭೂ ಸ್ವಾದೀನ ಪಡಿಸಿಕೊಳ್ಳುವ  ಪ್ರಕ್ರಿಯೆಯೂ ಚಾಲ್ತಿಯಲ್ಲಿದೆ ಎಂದು ತಿಳಿಸಿದ್ದಾರೆ.

ರೈಲ್ವೆ ಇಲಾಖೆಯು ಆರಂಭಿಕ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದೆ‌ ಎಂದು ಮಾಹಿತಿ ನೀಡಿದ್ದಾರೆ. ಅದಕ್ಕಾಗಿ ಮುಂಗಡ ಪತ್ರದಲ್ಲಿ 12 ಕೋಟಿ ರೂ.ಗಳನ್ನು ಮೀಸಲಿರಿಸಿದೆ ಎಂದವರು ತಿಳಿಸಿದ್ದಾರೆ.

ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ರೈಲ್ವೆ ಮೂಲ ಸೌಲಭ್ಯ ಅಭಿವೃಧ್ಧಿ ಪಡಿಸುವುದು ಬಹು ಮುಖ್ಯವಾದ ಕ್ರಮ ಎಂದು ತಿಳಿಸಿರುವ ಅವರು, ಈ ಅನುದಾನ ತರುವಲ್ಲಿ ಶ್ರಮಿಸಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಹಾಗೂ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಅಭಿನಂದಿಸಿದ್ದಾರೆ.

ಅದಷ್ಟು ಬೇಗ ಈ ಯೋಜನೆ ಪೂರ್ಣಗೊಂಡರೆ, ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗದ ಸಂಚಾರ ವ್ಯವಸ್ಥೆಗೆ ಅನುಕೂಲವಾಗಲಿದೆ. ಜೊತೆಗೆ ಈ ಭಾಗದ ಕೈಗಾರಿಕೆಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಹೆಚ್ಚು ಹೆಚ್ಚು  ಕೈಗಾರಿಕೆಗಳ ಆಗಮನ ಕ್ಕೆ ಈ ರೈಲ್ವೆ ಯೋಜನೆ ಸಹಕಾರಿಯಾಗಲಿದೆ. ಕೈಗಾರಿಕೆಗಳ ಆಗಮನದಿಂದ  ಯುವಕರಿಗೆ ಉದ್ಯೋಗಾವಕಾಶಗಳು ಸಹ‌‌ ಹೆಚ್ಚಲಿವೆ ಎಂದು ತಿಳಿಸಿದ್ದಾರೆ.
Published by:Latha CG
First published: