• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • ಈ ಫಲಿತಾಂಶದಿಂದ ಧೃತಿಗೆಡಲ್ಲ, ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸ್ತೇವೆ; ಸಂಸದ ಡಿ.ಕೆ.ಸುರೇಶ್

ಈ ಫಲಿತಾಂಶದಿಂದ ಧೃತಿಗೆಡಲ್ಲ, ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸ್ತೇವೆ; ಸಂಸದ ಡಿ.ಕೆ.ಸುರೇಶ್

ಸಂಸದ ಡಿ ಕೆ ಸುರೇಶ್

ಸಂಸದ ಡಿ ಕೆ ಸುರೇಶ್

ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಒಟ್ಟು 1,25,734 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಒಟ್ಟು 67,798 ಮತಗಳನ್ನು ಪಡೆದರೆ, ಜೆಡಿಎಸ್​ ಅಭ್ಯರ್ಥಿ ಕೃಷ್ಣಮೂರ್ತಿ 10,251 ಮತಗಳನ್ನು ಪಡೆದಿದ್ದಾರೆ. ಇನ್ನು, 2494 ನೋಟಾ ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಒಟ್ಟು 57,936 ಮತಗಳ ಅಂತರದಲ್ಲಿ ದೊಡ್ಡ ಗೆಲುವನ್ನು ಪಡೆದಿದ್ದಾರೆ.

ಮುಂದೆ ಓದಿ ...
 • Share this:

  ಬೆಂಗಳೂರು(ನ.10): ಬಹುನಿರೀಕ್ಷಿತ ಆರ್​ ಆರ್​ ನಗರ ಮತ್ತು ಶಿರಾ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಎರಡೂ ಕ್ಷೇತ್ರಗಳಲ್ಲೂ ಸಹ ಬಿಜೆಪಿ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್​ ಮತ್ತು ಜೆಡಿಎಸ್​​ಗೆ ತೀವ್ರ ಮುಖಭಂಗ ಆಗಿದೆ. ಏನೇ ಆದರೂ ಮತದಾರರ ತೀರ್ಪಿಗೆ ಎಲ್ಲಾ ಪಕ್ಷದ ನಾಯಕರು ತಲೆಬಾಗಲೇಬೇಕಾಗಿದೆ. ಆರ್​ ಆರ್​ ನಗರ ಉಪಚುನಾವಣೆ ಫಲಿತಾಂಶ ಕುರಿತು ಸಂಸದ ಡಿ.ಕೆ.ಸುರೇಶ್​ ಟ್ವೀಟ್ ಮಾಡಿದ್ದು, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ್ದಾರೆ.  ಮತದಾರರ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕಿದೆ. ಉಪಚುನಾವಣೆ ಸಂದರ್ಭದಲ್ಲಿ ಪಕ್ಷವನ್ನು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲಿಸಿದ ಪಕ್ಷದ ಎಲ್ಲಾ ನಾಯಕರು, ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು  ಹೇಳಿದರು.  ಮುಂದುವರೆದ ಅವರು, ಈ ಫಲಿತಾಂಶ ಕುರಿತು ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆಯಿಲ್ಲ.  ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಫಲಿತಾಂಶವನ್ನು ಗಂಭೀರವಾಗಿ ಪರಿಗಣಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳೋಣ. ಮುಂದೆ ಸಹ ಪಕ್ಷ ಸಂಘಟನೆಯ ಎಲ್ಲಾ ಸಂದರ್ಭಗಳಲ್ಲೂ ನಾನು ನಿಮ್ಮ ಜೊತೆಗಿರುತ್ತೇನೆ ಎಂದು ಭರವಸೆ ನೀಡಿದರು.

  ನನ್ನ ಗೆಲುವಿಗೆ ಪಕ್ಷದ ನಾಯಕರೇ ಕಾರಣ; ಮತದಾರರ ಋಣ ತೀರಿಸಲು ಸಾಧ್ಯವಿಲ್ಲ; ಬಿಜೆಪಿ ಅಭ್ಯರ್ಥಿ ಮುನಿರತ್ನ  ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ, ಆರ್​​ ಆರ್ ನಗರ ಉಪಚುನಾವಣೆಯಲ್ಲಿ ಡಿ.ಕೆ.ಸುರೇಶ್​ ತಾನೇ ಅಭ್ಯರ್ಥಿ​ ಎಂದು ಗುರುತಿಸಿಕೊಂಡಿದ್ದರು. ಜೊತೆಗೆ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲ್ಲುವ ನಿರೀಕ್ಷೆಯನ್ನು ಮಾಡಿದ್ದರು. ಆದರೆ ಅವರ ಲೆಕ್ಕಾಚಾರ ತಲೆಕೆಳಗಾಗಿದ್ದು, ಮತದಾರರು ಬಿಜೆಪಿಯ ಕೈ ಹಿಡಿದಿದ್ದಾರೆ. ಸದ್ಯ ಮತದಾರರ ತೀರ್ಪಿಗೆ ಮೂರು ಪಕ್ಷಗಳ ನಾಯಕರು ತಲೆಬಾಗಿದ್ದಾರೆ.

  ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಒಟ್ಟು 1,25,734 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಒಟ್ಟು 67,798 ಮತಗಳನ್ನು ಪಡೆದರೆ, ಜೆಡಿಎಸ್​ ಅಭ್ಯರ್ಥಿ ಕೃಷ್ಣಮೂರ್ತಿ 10,251 ಮತಗಳನ್ನು ಪಡೆದಿದ್ದಾರೆ. ಇನ್ನು, 2494 ನೋಟಾ ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಒಟ್ಟು 57,936 ಮತಗಳ ಅಂತರದಲ್ಲಿ ದೊಡ್ಡ ಗೆಲುವನ್ನು ಪಡೆದಿದ್ದಾರೆ.

  Published by:Latha CG
  First published: