ತುಮಕೂರು (ಜು.23): ಮುಂದಿನ ಬಾರಿ ಲೋಕಸಭೆ ಚುನಾವಣೆಗೆ (Lokasabha Election) ಸ್ಪರ್ಧಿಸುವುದಿಲ್ಲ ಎಂದು ಸಂಸದ ಜಿ.ಎಸ್. ಬಸವರಾಜು ಘೋಷಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಈಗ 84 ವರ್ಷ ವಯಸ್ಸಾಗಿದ್ದು, ವಯಸ್ಸಿನ ಲೆಕ್ಕಾಚಾರದಲ್ಲೂ ಪಕ್ಷದಿಂದ ಟಿಕೆಟ್ (Ticket) ಕೊಡುವುದಿಲ್ಲ. ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ (H.D Deve Gowda) ತುಮಕೂರಿನಿಂದಲೇ ಲೋಕಸಭೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಅವರು ಸ್ಪರ್ಧೆ ಮಾಡಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷದಿಂದ ಟಿಕೆಟ್ ಕೊಡದಿದ್ದರೂ ಪಕ್ಷೇತರನಾಗಿ ಕಣಕ್ಕಿಳಿಯುತ್ತೇನೆ ಎಂದು ಹೇಳಿದರು. ಈ ಮೂಲಕ ದೇವೇಗೌಡರನ್ನು ತುಮಕೂರಿನಲ್ಲಿ (Tumakuru) ಮತ್ತೇ ಸೋಲಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಮೈನಸ್ ಆದರೆ ಬಿಜೆಪಿಗೆ ಬಹಳ ಕಷ್ಟ
ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಣೆ ಮಾಡಿಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿ ಇರುತ್ತಾರೆ. ಬದುಕಿರುವವರೆಗೂ ಹೋರಾಟ ಮಾಡುತ್ತಾರೆ. ಅವರು ಇಲ್ಲವಾದರೆ ಬಿಜೆಪಿಗೂ ಕಷ್ಟವಾಗುತ್ತದೆ. ಪಕ್ಷ ಬಿಟ್ಟು ಹೊರಗೆ ಹೋದರೆ ಅವರಿಗೂ ನಷ್ಟವಾಗುತ್ತದೆ. ಯಡಿಯೂರಪ್ಪ- ಸಿದ್ದರಾಮಯ್ಯ ಸೇರಿ ಹೊಸ ಪಕ್ಷ ಕಟ್ಟುತ್ತಾರೆ ಎಂಬ ಮಾತು ಸುಳ್ಳು ಎಂದು ಹೇಳಿದರು.
ಪಕ್ಷದಲ್ಲಿ ತೆರೆಮರೆಗೆ ಸರಿಸಿಲ್ಲ
ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು ನಾನು ಮಾಜಿ ಸಂಸದನಾಗಿದ್ದಾಗ ದಿನಾಲೂ ಯಾರಾದರೂ ಬಂದು ನನಗೆ ಮುತ್ತು ಕೊಡುತ್ತಿದ್ದರಾ? ಅದೇ ರೀತಿ ಯಡಿಯೂರಪ್ಪ ಅವರಿಗೆ ಎಷ್ಟು ಗೌರವ ಕೊಡಬೇಕು ಅಷ್ಟು ಕೊಡುತ್ತಿದ್ದಾರೆ. ಪಕ್ಷ ಅವರನ್ನು ತೆರೆಮರೆಗೆ ಸರಿಸಿಲ್ಲ ಎಂದು ಸಮರ್ಥಿಸಿಕೊಂಡರು.
ಇದನ್ನೂ ಓದಿ: H D Kumaraswamy: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಗೆ ಸಿದ್ಧತೆ; ಯಾವಾಗ ಎಲೆಕ್ಷನ್ ಬಂದ್ರು ನಾವ್ ರೆಡಿ
ದೇವೇಗೌಡರ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಸ್ವಾಮೀಜಿ
ಇದನ್ನೂ ಓದಿ: Karnataka Politics: ಜಮೀರ್ ಅಹ್ಮದ್ಖಾನ್ ನಮ್ಮ ಪಕ್ಷದ ಬಾಹುಬಲಿ; ಸತೀಶ್ ಜಾರಕಿಹೊಳಿ
ರಾಜಣ್ಣ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ. ರಾಜಣ್ಣ ಹೇಳಿಕೆಯ ವಿಡಿಯೊವನ್ನು ನೆಟ್ಟಿಗರು ಹಂಚಿಕೊಂಡಿದ್ದು, ಕಿಡಿಕಾರಿದ್ದಾರೆ. ಇಂತಹ ಹೇಳಿಕೆ ನೀಡುವುದು ಸರಿಯೆ ಎಂದು ಪ್ರಶ್ನಿಸಿದ್ದರು ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದರು
‘ಇದು ನನ್ನ ಕಡೆಯ ಚುನಾವಣೆಯಾಗಿದ್ದು, ಪ್ರತಿ ಮನೆ ಬಾಗಿಲಿಗೆ ಬಂದು ಮತ ಕೇಳುತ್ತೇನೆ. ನಾನು ಶಾಸಕನಾದರೆ ನೀವು ಶಾಸಕರಾದಂತೆ. ಸರ್ಕಾರದ ಸೇವೆ ಒದಗಿಸದ ಎಲ್ಲ ಅಧಿಕಾರಿಗಳನ್ನು ಪ್ರಶ್ನೆ ಮಾಡಬಹುದು. ಶೋಕಿಗೆ ರಾಜಕಾರಣ ಮಾಡಬೇಡಿ’ ಎಂದು ರಾಜಣ್ಣ ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ