ಬೆಂಗಳೂರು: ನಾಯಕತ್ವದ ವಿರುದ್ಧ ಬಂಡಾಯ ಎದ್ದು ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರ ಮನವೊಲಿಸಲು ಬಂದಿದ್ದ ಸಿಎಂ ಕಮಲನಾಥ್ ಸರ್ಕಾರದ ಸಚಿವ ಜಿತು ಪತ್ವಾರಿ ನೇತೃತ್ವದ ನಿಯೋಗವನ್ನು ಪೊಲೀಸರು ವಶಕ್ಕೆ ಪಡೆದಿದೆ.
ಬೆಂಗಳೂರಿನ ಖಾಸಗಿ ರೆಸಾರ್ಟ್ನಲ್ಲಿ ಕಳೆದ ಒಂದು ವಾರದಿಂದ ಕಾಂಗ್ರೆಸ್ನ 19 ಶಾಸಕರು ವಾಸ್ತವ್ಯ ಹೂಡಿದಿದ್ದಾರೆ. ಇವರ ರಾಜೀನಾಮೆನಿಂದಾಗಿ ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಯಾವಾಗ ಬೇಕಾದರೂ ಸರ್ಕಾರ ಕುಸಿಯುವ ಭೀತಿ ಎದುರಾಗಿದೆ.
ಏತನ್ಮಧ್ಯೆ, ಬಂಡಾಯ ಎದ್ದಿರುವ ಶಾಸಕರ ಮನವೊಲಿಸಿ ಕರೆದುಕೊಂಡು ಹೋಗಲು ಇಂದು ಮಧ್ಯಪ್ರದೇಶದ ಸಚಿವ ಜಿತು ಪತ್ವಾರಿ ನೇತೃತ್ವದ ನಿಯೋಗ ಇಂದು ಬೆಂಗಳೂರು ಬಂದಿತ್ತು. ಖಾಸಗಿ ರೆಸಾರ್ಟ್ನಲ್ಲಿ ಸಚಿವರು ಶಾಸಕರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ, ಅವರೊಂದಿಗೆ ತೆರಳಲು ಬಂಡಾಯ ಶಾಸಕರು ನಿರಾಕರಿಸಿದರು. ಈ ವೇಳೆ ಶಾಸಕರನ್ನು ಬಲವಂತವಾಗಿ ಕರೆದೊಯ್ಯಲು ಯತ್ನಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಸಚಿವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು, ಚಿಕ್ಕಜಾಲ ಪೊಲೀಸ್ ಠಾಣೆಗೆ ಕರೆದೊಯ್ದರು.
ಇದನ್ನು ಓದಿ: ಬಿಜೆಪಿ ಸೇರಿ ಕೆಲವೇ ಹೊತ್ತಿನಲ್ಲಿ ರಾಜ್ಯಸಭೆಗೆ ಜ್ಯೋತಿರಾದಿತ್ಯ ಸಿಂಧಿಯಾ ಹೆಸರು ಘೋಷಣೆ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಂಡಾಯ ಶಾಸಕರೆಲ್ಲರೂ ನೆನ್ನೆಯಷ್ಟೇ ಬಿಜೆಪಿ ಸೇರಿದ ಕಾಂಗ್ರೆಸ್ ಹಿರಿಯ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರ ಬೆಂಬಲಿಗರಾಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ