• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Bengaluru Mysuru Expressway: SPG ಅನುಮತಿ ಕೊಟ್ಟರೆ ಪ್ರಧಾನಿ ಮೋದಿ ರೋಡ್​ ಶೋ; ಸಂಸದ ಪ್ರತಾಪ್ ಸಿಂಹ

Bengaluru Mysuru Expressway: SPG ಅನುಮತಿ ಕೊಟ್ಟರೆ ಪ್ರಧಾನಿ ಮೋದಿ ರೋಡ್​ ಶೋ; ಸಂಸದ ಪ್ರತಾಪ್ ಸಿಂಹ

ಪ್ರಧಾನಿ ಮೋದಿ ರೋಡ್​ ಶೋ

ಪ್ರಧಾನಿ ಮೋದಿ ರೋಡ್​ ಶೋ

ಹೆದ್ದಾರಿಯ ಸರ್ವಿಸ್ ರಸ್ತೆ ಬಗ್ಗೆ ಕೆಲವರು ಹೈಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ. ನಾಲ್ಕು ಸ್ಥಳಗಳಲ್ಲಿ ಈ ರೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಮಾಡುವ ಕೆಲಸ ವಿಳಂಬವಾಗುತ್ತಿದೆ. ಆದಷ್ಟು ಬೇಗ ತಡೆಯಾಜ್ಞೆ ತೆರವುಗೊಳಿಸಿ ಸರ್ವಿಸ್ ರೋಡ್ ನಿರ್ಮಾಣ ಮಾಡುತ್ತೇವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮುಂದೆ ಓದಿ ...
  • Share this:

ಮೈಸೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Bengaluru Mysuru Expressway:) ಉದ್ಘಾಟನೆ ಮಾರ್ಚ್ 12ರಂದು ನಡೆಲಿದ್ದು, ಪ್ರಧಾನಿ ನರೇಂದ್ರ ಮೋದಿಯಿಂದ (PM Narendra Modi) ಅಂದು ಬೆಳಗ್ಗೆ 11 ಗಂಟೆಗೆ ಹೈವೇ ಉದ್ಘಾಟನೆ ಆಗಲಿದೆ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ತಿಳಿಸಿದ್ದಾರೆ. ಮೈಸೂರಿನ (Mysuru) ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಅವರು, ಮಂಡ್ಯದ ಮದ್ದೂರು (Mandya-Maddur) ಬಳಿಯ ಗೆಜ್ಜೆಲೆಗೆರೆ ಹೈವೆಯಲ್ಲೇ ಪ್ರಧಾನಿ ಮೋದಿಯವರ ಚಾಪರ್ ಲ್ಯಾಂಡ್ ಆಗಲಿದೆ. ಬಳಿಕ ಪಕ್ಕದಲ್ಲೇ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.


ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಸಲು ಅನುಮತಿ ಕೇಳಿದ್ದೇವೆ. ವಿಶೇಷ ಭದ್ರತಾ ಪಡೆ (ಎಸ್​​ಪಿಜಿ) ಅವರು ಅನುಮತಿ ನೀಡಿದರೆ ರೋಡ್ ಶೋ ಮಾಡುತ್ತೇವೆ. ಸದ್ಯ ಅವರ ಅನುಮತಿಗಾಗಿ ಕಾಯುತ್ತಿದ್ದೇವೆ. ಮುಂದಿನ ಎರಡು ದಿನಗಳಲ್ಲಿ ಅನುಮತಿ ನೀಡಬಹುದು ಎಂದು ಸಂಸದ ಪ್ರತಾಪ್​ ಸಿಂಹ ತಿಳಿಸಿದರು.




ಇದನ್ನೂ ಓದಿ: Lakshmi Hebbalkar: ನೂರಾರು ಕೋಟಿಗೆ ತಮ್ಮನ್ನು ತಾವೇ ಮಾರಿಕೊಂಡರು; ಸಾಹುಕಾರ್​ಗೆ ಹೆಬ್ಬಾಳ್ಕರ್ ಸವಾಲು!


ಹೈಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ


ಇದೇ ವೇಳೆ ಹೈವೇಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಬಗ್ಗೆ ಸ್ಪಷ್ಟನೆ ಕೊಟ್ಟ ಸಂಸದರು, ಹೆದ್ದಾರಿಯ ಸರ್ವಿಸ್ ರಸ್ತೆ ಬಗ್ಗೆ ಕೆಲವರು ಹೈಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ. ನಾಲ್ಕು ಸ್ಥಳಗಳಲ್ಲಿ ಈ ರೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣ ಮಾಡುವ ಕೆಲಸ ವಿಳಂಬವಾಗುತ್ತಿದೆ. ಸ್ಟೇ ತೆರವು ಬಗ್ಗೆ ವಕೀಲರ ಬಳಿ ಮಾತುಕತೆ ನಡೆಸಿದ್ದೇವೆ. ಆದಷ್ಟು ಬೇಗ ತಡೆಯಾಜ್ಞೆ ತೆರವುಗೊಳಿಸಿ ಸರ್ವಿಸ್ ರೋಡ್ ನಿರ್ಮಾಣ ಮಾಡುತ್ತೇವೆ ಎಂದರು.


ಕಾಂಗ್ರೆಸ್ ನಾಯಕರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು


ಅಲ್ಲದೆ. ಮೈಸೂರು-ಬೆಂಗಳೂರು ಹೈವೇನಲ್ಲಿ ಟೋಲ್‌ ಸಂಗ್ರಹ ಪ್ರಕ್ರಿಯೆ ಮುಂದೂಡಿಕೆ‌ ವಿಚಾರವಾಗಿ ಮಾತನಾಡಿ, ಟೋಲ್ ಸಂಗ್ರಹವನ್ನು ಮಾರ್ಚ್ 14ರವರೆಗೂ ಮುಂದೂಡಲಾಗಿದೆ. ಆ ಬಳಿಕ ಬೆಂಗಳೂರಿನಿಂದ ನಿಡಘಟ್ಟದವರೆಗೆ ಟೋಲ್ ಸಂಗ್ರಹಿಸಲಾಗುವುದು ಎಂದು ಹೇಳಿದರು.


ಮೈಸೂರು-ಬೆಂಗಳೂರು ಹೈವೇಯಲ್ಲಿ ಸರ್ವಿಸ್ ರಸ್ತೆ ನಿರ್ಮಿಸದೆ ಟೋಲ್‌ ಸಂಗ್ರಹಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿರುವ ಕಾಂಗ್ರೆಸ್ ನಾಯಕರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿ, ಮಹದೇವಪ್ಪ ಲೋಕೋಪಯೋಗಿ ಸಚಿವರಾಗಿದ್ದಾಗ, ಧ್ರುವನಾರಾಯಣ್ ಸಂಸದರಾಗಿದ್ದಾಗ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಿರ್ಮಾಣ ಮಾಡಿರುವ ನಂಜನಗೂಡು ಹೈವೇಯಲ್ಲಿ ಸರ್ವಿಸ್ ರಸ್ತೆಯನ್ನು ನಿರ್ಮಿಸಿಲ್ಲ‌‌. ಆದರೂ ಏಕೆ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಇವರಿಂದ ನಾವು ಪಾಠ ಕಲಿಯುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.


ಇದನ್ನೂ ಓದಿ: Sumalatha: ರಾಜ್ಯ ರಾಜಕೀಯಕ್ಕೆ ಮಂಡ್ಯ ಸಂಸದೆ? ಕಾಂಗ್ರೆಸ್, ಬಿಜೆಪಿ ಹೆಸರು ಹೇಳುವ ಮೂಲಕ ಒತ್ತಡ ಹೇರುವ ತಂತ್ರ!


ಚಾಮರಾಜನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ


ಚಾಮರಾಜನಗರ ಜಿಲ್ಲೆಯಲ್ಲಿ ಕಮಲ ಅರಳಿಸಲು ಬಿಜೆಪಿ ಸಜ್ಜಾಗಿದೆ. ಮಲೆ ಮಹದೇಶ್ವರ ಬೆಟ್ಟದಿಂದ ‘ವಿಜಯ ಸಂಕಲ್ಪ ರಥಯಾತ್ರೆ’ಗೆ (Vijaya Sankalpa Yatra) ಕೆಲ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಲನೆ ನೀಡಿ ಮಾತನಾಡಿದ್ದಾರೆ. ಮೊದಲ ರಥಯಾತ್ರೆಯ ನೇತೃತ್ವ ವಹಿಸಿರುವ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಈ ವೇಳೆ ಮಾತನಾಡಿದ ಈಶ್ವರಪ್ಪ, ಯಡಿಯೂರಪ್ಪ ಮತ್ತು ಬೊಮ್ಮಾಯಿ ಅಣ್ಣತಮ್ಮಂದಿರಂತೆ ಇದ್ದಾರೆ ಅಂತ ಹೇಳಿದರು.

Published by:Sumanth SN
First published: