• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • MTB Nagaraj: ನಾನು ಎಲೆಕ್ಷನ್‌ಗೆ ಸ್ಪರ್ಧೆ ಮಾಡೋದಿಲ್ಲ, ಆದರೆ ನನ್ನ ಮಗನಿಗೆ ಟಿಕೆಟ್ ನೀಡಬೇಕು: ಎಂಟಿಬಿ ನಾಗರಾಜ್‌

MTB Nagaraj: ನಾನು ಎಲೆಕ್ಷನ್‌ಗೆ ಸ್ಪರ್ಧೆ ಮಾಡೋದಿಲ್ಲ, ಆದರೆ ನನ್ನ ಮಗನಿಗೆ ಟಿಕೆಟ್ ನೀಡಬೇಕು: ಎಂಟಿಬಿ ನಾಗರಾಜ್‌

MTB Nagaraj

MTB Nagaraj

ಈ ಬಾರಿಯ ಎಲೆಕ್ಷನ್‌ನಲ್ಲಿ ನಾನು ಸ್ಪರ್ಧೆ ಮಾಡೋದಿಲ್ಲ. ಆದರೆ ನನ್ನ ಮಗನಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಕೋರ್ ಕಮಿಟಿ ಸಭೆಯಲ್ಲೂ ಇದರ ಬಗ್ಗೆ ಚರ್ಚೆ ಮಾಡಿದ್ದೇನೆ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

  • Share this:

ಹೊಸಕೋಟೆ: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election 2023) ನಾನು ಸ್ಪರ್ಧೆ ಮಾಡೋದಿಲ್ಲ. ಆದರೆ ನನ್ನ ಮಗನಿಗೆ ಟಿಕೆಟ್ ನೀಡಬೇಕು ಎಂದು ನಾನು ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ (MTB Nagaraj) ಹೇಳಿದ್ದಾರೆ.


ಈ ಸಂಬಂಧ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಎಂಟಿಬಿ ನಾಗರಾಜ್, ಈ ಬಾರಿಯ ಎಲೆಕ್ಷನ್‌ನಲ್ಲಿ ನಾನು ಸ್ಪರ್ಧೆ ಮಾಡೋದಿಲ್ಲ. ಆದರೆ ನನ್ನ ಮಗನಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಕೋರ್ ಕಮಿಟಿ ಸಭೆಯಲ್ಲೂ ಇದರ ಬಗ್ಗೆ ಚರ್ಚೆ ಮಾಡಿದ್ದೇನೆ. ಈಗ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿ ಮನವಿ ಮಾಡಿದ್ದೇನೆ‌ ಎಂದು ಹೇಳಿದರು.


ಇದನ್ನೂ ಓದಿ: G Parameshwar: ಸಿಎಂ ಆಗೋ ಲಕ್ಷಣ ಕಾಣಿಸುತ್ತಿಲ್ಲ ಗಡ್ಡ ಬೋಳಿಸು; -ಕಾಯಕರ್ತರ ಪ್ರೀತಿ ಕಂಡು ಕಣ್ಣೀರಿಟ್ಟ ಜಿ ಪರಮೇಶ್ವರ್


ನನ್ನ ಮಗನಿಗೆ ಟಿಕೆಟ್ ನೀಡಬೇಕು


ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಈ ಬಾರಿ ನನ್ನ ಮಗನಿಗೆ ಟಿಕೆಟ್ ಕೊಡುತ್ತಾರೆ. ನಾನು ಹೊಸಕೋಟೆ ಅಲ್ಲ, ಎಲ್ಲೂ ಕೂಡ ಸ್ಪರ್ಧೆ ಮಾಡೋದಿಲ್ಲ. ನನ್ನ ಮಗನಿಗೆ ಟಿಕೆಟ್ ಕೊಡಿ. ನಾನು ಗೆಲ್ಲಿಸುತ್ತೇನೆ. ಮಾತ್ರವಲ್ಲ ಅವನು ಗೆಲ್ಲುತ್ತಾನೆ ಎಂದು ವರಿಷ್ಠರಿಗೆ ಮನವಿ ಮಾಡಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.


ನನ್ನ ಮಗನಿಗೆ ಮಾತ್ರವಲ್ಲ, ರಾಜ್ಯಾದ್ಯಂತ ಕುರುಬ ಸಮುದಾಯಕ್ಕೆ ಎಂಟು ಟಿಕೆಟ್‌ ನೀಡಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಕೇಳಿದ್ದೇನೆ ಎಂದು ಹೇಳಿದ ಎಂಟಿಬಿ ನಾಗರಾಜ್, ಇದರ ಬಗ್ಗೆ ಯಡಿಯೂರಪ್ಪ ಅವರಲ್ಲಿಯೂ ವಿವರವಾಗಿ ಚರ್ಚಿಸಿದ್ದೇನೆ. ಗೆಲ್ಲುವ ಕ್ಷೇತ್ರದಲ್ಲಿ ನಮ್ಮ ಸಮುದಾಯಕ್ಕೆ ಟಿಕೆಟ್ ಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದರು.


ಇದನ್ನೂ ಓದಿ: Chikkaballapura: 810 ಕೋಟಿ ರೂಪಾಯಿ ವೆಚ್ಚದ ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಸಿಎಂ


ಬಿಎಸ್‌ ಯಡಿಯೂರಪ್ಪ ಮನೆಗೆ ಭದ್ರತೆ!


ಇನ್ನು ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಅವರ ಮನೆಯ ಮುಂದೆ ಪ್ರತಿಭಟನೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಇರುವ ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸದ ಬಳಿ ಭದ್ರತೆಯನ್ನು ನಿಯೋಜಿಸಲಾಗಿದೆ.


ಕಾವೇರಿ ನಿವಾಸದ ಬಳಿ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿ ಬರುವ ಸಾಧ್ಯತೆ ಇರೋದ್ರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

top videos
    First published: