ಬೆಂಗಳೂರು: ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಮೈತ್ರಿ ಸರ್ಕಾರದ (Coalition Government) ಪತನದಲ್ಲಿ ಸಿದ್ದರಾಮಯ್ಯ (Siddaramaiah) ಪಾತ್ರವಿತ್ತು ಎಂಬಂತೆ ಟ್ವೀಟ್ ಮಾಡಿದ್ದ ಮಾಜಿ ಸಚಿವ ಡಾ ಕೆ ಸುಧಾಕರ್ (Dr K Sudhakar) ಅವರಿಗೆ ಮಾಜಿ ಸಚಿವ ಎಂಟಿಬಿ ನಾಗರಾಜ್ (MTB Nagaraj) ತಿರುಗೇಟು ನೀಡಿದ್ದಾರೆ. ಅಲ್ಲದೆ, ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ, ಬೇಕು ಎಂದರೆ ಅವರ ಮನೆ ದೇವರ ಮೇಲೆ ಆಣೆ ಮಾಡಿ ಸುಧಾಕರ್ ಈ ಮಾತು ಹೇಳಲಿ ಎಂದು ಎಂಟಿಬಿ ಸವಾಲು ಹಾಕಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ (Tweet) ಮಾಡಿ ಎಂಟಿಬಿ ನಾಗರಾಜ್ ಕೌಂಟರ್ ಕೊಟ್ಟಿದ್ದಾರೆ.
ಎಂಟಿಬಿ ನಾಗರಾಜ್ ಟ್ವೀಟ್ನಲ್ಲಿ ಏನಿದೆ?
ಸಿದ್ದರಾಮಯ್ಯ ಅವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ.
ಇದನ್ನೂ ಓದಿ: Hassan Politics: ನಾನು ಏನೋ ಆಗಲು ಬಂದವನಲ್ಲ; ಹಿಂಗ್ಯಾಕೆ ಅಂದ್ರು ಪ್ರೀತಂ ಗೌಡ?
ಮಾಜಿ ಸಚಿವರಾದ ಸುಧಾಕರ್ ಅವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದೆ. ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ ಎಂದು ಎಂಟಿಬಿ ಆರೋಪಿಸಿದ್ದಾರೆ.
ಇಷ್ಟು ದಿನ ಏಕೆ ಸುಮ್ಮನಿದ್ದರು?
ಅಲ್ಲದೆ, ಸುಧಾಕರ್ ಅವರು ಇಷ್ಟು ದಿನ ಏಕೆ ಸುಮ್ಮನಿದ್ದರು? ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ? ಇಷ್ಟು ದಿನ ಮೌನವಾಗಿದ್ದು? ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು? ಎಂದು ಸಿದ್ದರಾಮಯ್ಯ ಅವರ ಪರ ಬ್ಯಾಟ್ ಮಾಡಿ ತಮದೇ ಪಕ್ಷದ ಸುಧಾಕರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರೊಂದಿಗೆ ಬಿಜೆಪಿಯ ವಲಸಿಗರಲ್ಲಿ ನಾಯಕರಲ್ಲಿ ಒಡಕು ಮೂಡಿರುವುದು ಸ್ಪಷ್ಟವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ