• Home
  • »
  • News
  • »
  • state
  • »
  • Mukhyamantri Chandru: ನಾಳೆ ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಮಾಜಿ ಎಂಎಲ್​ಸಿ ಮುಖ್ಯಮಂತ್ರಿ ಚಂದ್ರು

Mukhyamantri Chandru: ನಾಳೆ ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಮಾಜಿ ಎಂಎಲ್​ಸಿ ಮುಖ್ಯಮಂತ್ರಿ ಚಂದ್ರು

ಮುಖ್ಯಮಂತ್ರಿ ಚಂದ್ರು

ಮುಖ್ಯಮಂತ್ರಿ ಚಂದ್ರು

ಕರ್ನಾಟಕದಲ್ಲಿ ಅನೇಕರು ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾಗಿದ್ದಾರೆ. ಈಗ ಖ್ಯಾತ ನಟ ಹಾಗೂ ವಿಧಾನಸಭೆ, ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಎಎಪಿ ಸೇರ್ಪಡೆಯಾಗುತ್ತಿದ್ದಾರೆ

  • Share this:

ಬೆಂಗಳೂರು (ಜೂ 6): ಆಮ್ ಆದ್ಮಿ (APP) ಪಾರ್ಟಿ  ಸೇರ್ಪಡೆ ಪರ್ವ ಮುಂದುವರಿದಿದೆ. ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಮುಖಂಡ ಹಾಗೂ ನಟ ಮುಖ್ಯಮಂತ್ರಿ ಚಂದ್ರು (Mukhyamantri Chandru ) ಇದೀಗ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಆಮ್ ಆದ್ಮಿ ಪಾರ್ಟಿ (aam aadmi party ) ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ (Bengaluru) ಖಾಸಗಿ ಹೋಟೆಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.


AAP ಪಕ್ಷ ಸೇರಲು ಮುಖ್ಯಮಂತ್ರಿ ಚಂದ್ರು ರೆಡಿ


ಕರ್ನಾಟಕದಲ್ಲಿ ಅನೇಕರು ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾಗಿದ್ದಾರೆ. ಈಗ ಖ್ಯಾತ ನಟ ಹಾಗೂ ವಿಧಾನಸಭೆ, ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಎಎಪಿ ಸೇರ್ಪಡೆಯಾಗುತ್ತಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಅವರಿಗೆ ರಾಜ್ಯಸಭೆ ಟಿಕೆಟ್ ಸಿಗಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ 1 ವಾರದ ಹಿಂದೆಯಷ್ಟೇ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.


ಕಾಂಗ್ರೆಸ್​ ಬಗ್ಗೆ ಮುಖ್ಯಮಂತ್ರಿ ಚಂದ್ರು ಬೇಸರ


ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷವಾಗಿ ಅಸಮಾಧಾನ ತೋರಿದ್ದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ:  Chitradurga: ಕಾಂಗ್ರೆಸ್ ನವರೇನು ಸ್ವಾತಂತ್ರ್ಯ ಹೋರಾಟಗಾರರೇ? ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಪ್ರಶ್ನೆ


ಆಮ್​ ಆದ್ಮಿ ಪಕ್ಷ ಸೇರಿದ ಭಾಸ್ಕರ್​ ರಾವ್​


ನಿವೃತ್ತ ಐಪಿಎಸ್‌ ಅಧಿಕಾರಿ ಬಿ ಭಾಸ್ಕರ್‌ ರಾವ್‌ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಆಮ್‌ ಆದ್ಮಿ ಪಕ್ಷ ಸೇರಿದ್ರು. ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಸಮ್ಮುಖದಲ್ಲಿ ಎಎಪಿ ಸೇರಿದ ಭಾಸ್ಕರ್‌ ರಾವ್‌, ದೇಶಾದ್ಯಂತ ಅರವಿಂದ್‌ ಕೇಜ್ರಿವಾಲ್ ಅವರ‌ ಆಡಳಿತದ ಮಾದರಿಯ ಅಗತ್ಯ ಇದೆ. ಎಎಪಿ ಮಾದರಿ ಆಡಳಿತ ಎಲ್ಲೆಡೆ ಇರಬೇಕು ಎಂಬ ಅಭಿಲಾಷೆಯೊಂದಿಗೆ‌ ನಾನು ನೌಕರಿಗೆ ರಾಜೀನಾಮೆ ನೀಡಿ ಪಕ್ಷ‌ ಸೇರಿದ್ದೇನೆ ಎಂದು ಹೇಳಿದ್ರು.


ಸಾಮಾನ್ಯರಿಗೆ‌ ದೊರೆತ ಭದ್ರತೆ ನೋಡಿ ಪಕ್ಷ ಸೇರಿದೆ


ಪೊಲೀಸ್ ಇಲಾಖೆಯಲ್ಲಿ ಸತತ 32 ವರ್ಷ ಕೆಲಸ ಮಾಡಿದ್ದರೂ ದೆಹಲಿಯನ್ನು ಹತ್ತಿರದಿಂದ ನೋಡಿರಲಿಲ್ಲ. ಕೆಲವು ದಿನಗಳ ಹಿಂದೆ ಇಲ್ಲಿನ ಸರ್ಕಾರಿ ಶಾಲೆ‌ಯ ಗುಣಮಟ್ಟ ನೋಡಿ, ಜನಸಾಮಾನ್ಯರಿಗೆ‌ ದೊರೆತ ಭದ್ರತೆ ನೋಡಿ ಪಕ್ಷ ಸೇರಿದ್ದೇನೆ. ಕೇಜ್ರಿವಾಲ್ ಅವರ ಕಾರ್ಯವೈಖರಿ, ವಿಕೇಂದ್ರೀಕರಣ ನೀತಿ, ಜನಸಾಮಾನ್ಯರ ಜೀವನದಲ್ಲಿ ಬದಲಾವಣೆ‌ ತಂದಿದ್ದನ್ನು ನೋಡಿದರೆ, ದೇಶದೆಲ್ಲೆಡೆ ಆ ವ್ಯವಸ್ಥೆ ಇರಬೇಕು ಎಂಬುದು ನನ್ನ ಆಶಯ ಎಂದು ಭಾಸ್ಕರ್‌ ರಾವ್‌ ಹೇಳಿದ್ರು.


AAPಯತ್ತ ಮನಸ್ಸು ಮಾಡಿದ್ದಾರೆ ಬ್ರಿಜೇಶ್​ ಕಾಳಪ್ಪ!?


ಕಾಂಗ್ರೆಸ್‌ ನಾಯಕ, ಸುಪ್ರೀಂ ಕೋರ್ಟ್‌ ವಕೀಲ ಬ್ರಿಜೇಶ್‌ ಕಾಳಪ್ಪ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ವಕ್ತಾರರಾಗಿದ್ದ ಬ್ರಿಜೇಶ್‌ ಕಾಳಪ್ಪ ಅವರು ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವಕಾಶ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.


ಇದನ್ನೂ ಓದಿ: Karnataka Politics: ಸಚಿವ ಸುನೀಲ್ ಕುಮಾರ್, ಸಂಸದ ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಸವಾಲ್


ಈ ಕುರಿತಂತೆ ತಮ್ಮ ಫೇಸ್​​ಬುಕ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬ್ರಿಜೇಶ್​ ಕಾಳಪ್ಪ ಅವರು 1997ರಲ್ಲಿ ಆರಂಭವಾದ ಕಾಂಗ್ರೆಸ್​​ನೊಂದಿಗಿನ ಒಡನಾಟಕ್ಕೆ ಫುಲ್​​​ಸ್ಟಾಪ್​ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಬ್ರಿಜೇಶ್ ಕಾಳಪ್ಪ ಅವರು, ಪಕ್ಷದಲ್ಲಿ ಇಷ್ಟು ವರ್ಷ ನಾನಾ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಇವರು ಸಹ ಆಮ್​ ಆದ್ಮಿ ಪಕ್ಷ ಸೇರೋ ಸಾಧ್ಯತೆ ಇದೆ.

Published by:Pavana HS
First published: