Crime News| ಸಂಬಂಧಿಕರಿಗೆ ರೇಖಾ ಕದಿರೇಶ್ ಮೃತದೇಹ ಹಸ್ತಾಂತರ, ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂಧನ; ಪ್ರಮಖ ಆರೋಪಿ ಬಂಧನ

ಕೊಲೆ ಮಾಡಿದ ಬಳಿಕ ಆಟೋದಲ್ಲಿ ಹೊಸೂರು ರಸ್ತೆಯ ಬಳಿ ಹೋಗಿದ್ದ ಆರೋಪಿಗಳು, ಹೊಸೂರು ರಸ್ತೆಯ ಹುಸ್ಕೂರು ಬಳಿ ತಲೆಮರಿಸಿಕೊಂಡಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರು ಸದ್ಯ ಒರ್ವನನ್ನ ವಶಕ್ಕೆ ಪಡೆದಿದ್ದು, ಉಳಿದವರಿಗೆ ಶೋಧಕಾರ್ಯ ನಡೆಯುತ್ತಿದೆ.

ಗಂಡನ ಜೊತೆ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್

ಗಂಡನ ಜೊತೆ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್

  • Share this:
    ಬೆಂಗಳೂರು (ಜೂನ್ 25); ಗುರುವಾರ ಬೆಳಗ್ಗೆ ಚಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್​​ ರೇಖಾ ಕದಿರೇಶ್​ರ ಕತ್ತು ಸೀಳಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಇಡೀ ರಾಜ್ಯದಲ್ಲಿ ದೊಡ್ಡ ಮಟ್ಟದ ಸುದ್ದಿ ಮಾಡಿತ್ತು. ಅಲ್ಲದೆ, ಈ ಪ್ರಕರಣವನ್ನು ಸಿಎಂ ಯಡಿಯೂರಪ್ಪ ಸಹ ಗಂಭೀರವಾಗಿ ಪರಿಗಣಿಸಿದ್ದು, 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. ಹೀಗಾಗಿ ಆರೋಪಿಗಳ ಬಂಧನಕ್ಕೆ ಬೆಂಗಳೂರು ಪೊಲೀಸರು ತಂಡ ರಚನೆ ಮಾಡಿದ್ದು, ವಿವಿಧ ಆಯಾಮಗಳಲ್ಲಿ ತನಿಖೆಗೆ ಮುಂದಾಗಿದ್ದರು. ಪರಿಣಾಮ ಕೊಲೆ ಮಾಡಿದ ಮೂವರು ಪ್ರಮುಖ ಆರೋಪಿಗಳ ಪೈಕಿ ಇಂದು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

    ರೇಖಾ ಕದಿರೇಶ್ ಕೊಲೆ ಮಾಡುವಾಗ ಮೂವರು ಆರೋಪಿಗಳು ಒಟ್ಟಿಗೆ ಇದ್ದರು. ನಂತರ ಹೊಸೂರು ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಹೊಸೂರು ರಸ್ತೆಯ ಹುಸ್ಕೂರು ಬಳಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಒರ್ವನನ್ನು ವಶಕ್ಕೆ ಪಡೆದು ಕಾಟನ್ ಪೇಟೆ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಮದ್ಯಾಹ್ನದ ಒಳಗೆ ಉಳಿದ ಆರೋಪಿಗಳನ್ನು ಬಂಧಿಸೋದಾಗಿ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಕೊಲೆ ಮಾಡಿದ ಬಳಿಕ ಆಟೋದಲ್ಲಿ ಹೊಸೂರು ರಸ್ತೆಯ ಬಳಿ ಹೋಗಿದ್ದ ಆರೋಪಿಗಳು, ಹೊಸೂರು ರಸ್ತೆಯ ಹುಸ್ಕೂರು ಬಳಿ ತಲೆಮರಿಸಿಕೊಂಡಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರು ಸದ್ಯ ಒರ್ವನನ್ನ ವಶಕ್ಕೆ ಪಡೆದಿದ್ದು, ಪ್ರಮುಖ ಆರೋಪಿಗಳಾದ ರೇಖಾರ ಸಂಬಂಧಿ ಪೀಟರ್ ಸೇರಿದಂತೆ ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.

    ಸಂಬಂಧಿಕರಿಗೆ ರೇಖಾ ಮೃತದೇಹ ಹಸ್ತಾಂತರ;

    ರೇಖಾ ಕದಿರೇಶ್ ಅವರ ಮೃತದೇಹವನ್ನು ಇಂದು ಬೆಳಗ್ಗೆ 09 ಗಂಟೆಗೆ ಮರಣೋತ್ತರ ಪರೀಕ್ಷೆ ಮತ್ತು ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಅವರ ಸಂಬಂಧಿಕರಿಗೆ ರೇಖಾ ಅವರ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ.

    ರೇಖಾ ಕದಿರೇಶ್ ಅವರ ಮನೆಯಲ್ಲೇ ಮೃತದೇಹವನ್ನು ಇರಿಸಿದ್ದು, ಸಂಬಂಧಿಕರ ಆಕ್ರಂಧನ ಮುಗಿಲುಮುಟ್ಟಿದೆ. ಅಲ್ಲದೆ, ನೂರಾರು ಜನ ಅಭಿಮಾನಿಗಳು, ಕಾರ್ಯಕರ್ತರು ಸಾಲು ಸಾಲಾಗಿ ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:MAshok Kumar
    First published: