• Home
 • »
 • News
 • »
 • state
 • »
 • Mysore: ಮೈಸೂರಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮೇಲೆ ಅತ್ಯಾಚಾರಕ್ಕೆ ಯತ್ನ!

Mysore: ಮೈಸೂರಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮೇಲೆ ಅತ್ಯಾಚಾರಕ್ಕೆ ಯತ್ನ!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಕ್ಷಣಕ್ಕೆ ಕಾರ್ಯ ಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ

 • Share this:

  ಮೈಸೂರು (ಸೆ. 3): ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ (Mysore Gang Rape) ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿ ಬೀಳಿಸಿದೆ. ನಗರದ ಆರ್​ ಎಸ್​ ನಾಯ್ದು ನಗರದ (SR Naidu nagar in mysore) ಪ್ರಮುಖ ರಸ್ತೆಯಲ್ಲಿನ ಸ್ಟಡಿ ಹೌಸ್​ಗೆ ನುಗ್ಗಿ ವ್ಯಕ್ತಿಯೊಬ್ಬ ಅತ್ಯಾಚಾರ ಯತ್ನಕ್ಕೆ (Rape attempt) ಪ್ರಯತ್ನ ನಡೆಸಿ ಪರಾರಿಯಾಗಿದ್ದಾನೆ. ಈ ವೇಳೆ ಸಂತ್ರಸ್ತ ಯುವತಿ ಮೇಲೆ ಚಾಕುವಿನಿಂದ ಹಲ್ಲೆ ಯತ್ನ ಮಾಡಲಾಗಿದೆ ಎಂದು ವರದಿ ದಾಖಲಾಗಿದೆ. ಆಂಧ್ರ ಪ್ರದೇಶದ ಮೂಲದ 7 ಮಂದಿ ಈ ಸ್ಟಡಿ ಹೌಸ್​ ನಿಲಯದಲ್ಲಿದ್ದರು. ಇತರೆ ವಿದ್ಯಾರ್ಥಿಗಳು ತರಗತಿಗೆ ತೆರಳಿದಾಗ ಈ ಕೃತ್ಯ ನಡೆಸಲಾಗಿದೆ ಎನ್ನಲಾಗಿದೆ. ಪ್ರಕರಣ ಕುರಿತು ಯುವತಿ ಕೂಡ ದೂರು ದಾಖಲಿಸಿದ್ದಾರೆ.


  ಇನ್ನು ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಘಟನೆ ಸ್ಥಳಕ್ಕೆ ಪೊಲೀಸರು ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಎನ್​ ಆರ್​ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಡಿಸಿಪಿ ಪ್ರದೀಪ್​ ಗುಂಟಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಗಳ ಸಿಸಿಟಿವಿ ಸೇರಿದಂತೆ ಇತರೆ ಮಾಹಿತಿ ಸಂಗ್ರಹಿಸಿದ ಪೊಲೀಸರು ತಕ್ಷಣಕ್ಕೆ ಕಾರ್ಯ ಪ್ರವೃತ್ತರಾಗಿ ಕೆಲವೇ ಗಂಟೆಯಲ್ಲಿ ಆರೋಪಿಯನ್ನು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೂರಿನ ಹಿನ್ನಲೆ  ಪ್ರಕರಣ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿ ಹೇಳಿಕೆ ಕೂಡ ದಾಖಲಿಸಿಕೊಳ್ಳಲಾಗಿದೆ


  ಇದನ್ನು ಓದಿ: ಎರಡು ವರ್ಷದಿಂದ ಕೂದಲೇ ಈಕೆಗೆ ಆಹಾರ; ಕೆಜಿಗಟ್ಟಲೇ ಕೂದಲನ್ನು ಹೊಟ್ಟೆಯಿಂದ ಹೊರತೆಗೆದ ವೈದ್ಯರು


  ಸದ್ಯ ಎನ್ ಆರ್ ಠಾಣಾ ಪೊಲೀಸರ ವಶದಲ್ಲಿರುವ ಯುವಕನನ್ನು  ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಈ ಕುರಿತು ಪೊಲೀಸರು ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ,. ಆದರೆ, ಸಾಕ್ಷ್ಯಾಧಾರ ಸಂಗ್ರಹ ಪ್ರಕ್ರಿಯೆ ಭಾಗಶಃ ಮುಕ್ತಾಯವಾಗಿದ್ದು, ಸ್ಥಳದಿಂದ ಡಿಸಿಪಿ ಪ್ರದೀಪ್ ಗುಂಟಿ, ಬೆರಳಚ್ಚು ತಜ್ಞರು ನಿರ್ಗಮಿಸಿದ್ದಾರೆ.


  ಕಳೆದ ವಾರವಷ್ಟೇ ದೇಶವನ್ನು ಬೆಚ್ಚಿ ಬೀಳಿಸಿದ್ದ ಘಟನೆ


  ಇನ್ನು ಕಳೆದವಾರವಷ್ಟೇ ಚಾಮುಂಡಿ ಬೆಟ್ಟದ ತಪ್ಪಲಿನ ಗುಡ್ಡದಲ್ಲಿ ಗೆಳೆಯನೊಂದಿಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿತ್ತು. ದೇಶಾದ್ಯಂತ ಸುದ್ದಿಯಾಗಿತ್ತು. ಅಪರಿಚಿತ ಗುಂಪು ನಡೆಸಿದ್ದ ಈ ಅತ್ಯಾಚಾರ ಪ್ರಕರಣ ಸಂಬಂಧ  ಸಂತ್ರಸ್ಥೆಯಿಂದ ಯಾವುದೇ ರೀತಿಯ ಪೂರಕ ಮಾಹಿತಿ ಸಿಗದ ಕಾರಣ, ಈ ಪ್ರಕರಣದ ಆರೋಪಿಗಳನ್ನು ಹಿಡಿಯುವುದು ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿತ್ತು. ಈ ದುರ್ಘಟನೆ ನಡೆಯುವ ವೇಳೆ ಜೊತೆಯಲ್ಲಿ ಇದ್ದ ಸ್ನೇಹಿತನಿಂದ ಸಿಕ್ಕ ಅಲ್ಪ ಮಾಹಿತಿಯನ್ನು ಪಡೆದ ಪೊಲೀಸರು ಸಾಕಷ್ಟು ಚುರುಕುತನದಿಂದ ಕೆಲಸ ಮಾಡಿ ಆರೋಪಿಗಳನ್ನು ಬಲೆಗೆ ಬೀಳಿಸಿದ್ದರು. ತಮಿಳುನಾಡು ಮೂಲದ ಯುವಕರ ಗುಂಪು ಈ ಕೃತ್ಯ ನಡೆಸಿದ್ದರು ಎಂಬುದು ತಿಳಿದು ಬಂದಿತು. ಈ ಸಂಬಂಧ ಏಳು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

  Published by:Seema R
  First published: