ಸಿದ್ದರಾಮಯ್ಯನಿಗೆ ರಾಜಕೀಯ ಪುಕ್ಕಲುತನ ಇದೆ; H.Vishwanath ಹೇಳಿಕೆ ಹಿಂದಿರುವ ಗುಟ್ಟೇನು?

ನನಗೂ ಪ್ರಧಾನಿ ಹುದ್ದೆ ಕೊಟ್ಟರೆ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆ ಅಂತ  ಸೋನಿಯಾ ಗಾಂಧಿಗೆ ಸಿದ್ದರಾಮಯ್ಯ ಹೇಳಬೇಕಿತ್ತು. ಅಲ್ಲಿಗೆ ಹೋಗದೆ ಇಲ್ಲಿಯೇ ಸಿದ್ದರಾಮಯ್ಯ ಏಕೆ ಮೋದಿ ವಿರುದ್ಧ ಗುಡುಗಬೇಕು ಎಂದು ಎಚ್ ವಿಶ್ವನಾಥ್ ಪ್ರಶ್ನಿಸಿದರು.

ಹೆಚ್. ವಿಶ್ವನಾಥ್- ಸಿದ್ದರಾಮಯ್ಯ.

ಹೆಚ್. ವಿಶ್ವನಾಥ್- ಸಿದ್ದರಾಮಯ್ಯ.

  • Share this:
ಮೈಸೂರು: ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ(sonia gandhi) ಅವರು ಮಾಜಿ ಸಿಎಂ ಸಿದ್ದರಾಮಯ್ಯ(siddaramaiah) ಅವರಿಗೆ ರಾಷ್ಟ್ರರಾಜಕಾರಣಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಅದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದಾರೆಂಬ ವಿಷಯ ಸಂಬಂಧ ಪ್ರತಿಕ್ರಿಯಿಸಿದ ಬಿಜೆಪಿ ಎಂಎಲ್​ಸಿ ಎಚ್​.ವಿಶ್ವನಾಥ್​ (H.Vishwanath) ಕಟುವಾಗಿ ಟೀಕಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ತೆರಳಲು ಹಿಂದೇಟು ಹಾಕಿದ್ದಾರೆ.  ಸಿದ್ದರಾಮಯ್ಯನಿಗೆ ರಾಜಕೀಯ ಪುಕ್ಕಲುತನ ಇದೆ ಎಂದು ವ್ಯಂಗ್ಯವಾಡಿದರು.

ಕರೆದಾಗ ಅಲ್ಲಿಗೆ ಹೋಗದೆ ಇಲ್ಲಿಯೇ ಗುಡುಗೋದ್ಯಾಕೆ?

ಮುಖ್ಯಮಂತ್ರಿ ಆಗಿದ್ದ ಎಚ್.ಡಿ. ದೇವೇಗೌಡ ಈ ದೇಶದ ಪ್ರಧಾನಿಯಾದರು. ಪ್ರಧಾನಿಯಾಗುವ ಅವಕಾಶ ಸಿಕ್ಕಾಗ ಒಪ್ಪಿಕೊಳ್ಳುವ ಧೈರ್ಯ ತೋರಿದರು. ದೇವೇಗೌಡರಿಗೆ ಹೋಲಿಸಿದರೆ ಸಿದ್ದರಾಮಯ್ಯಗೆ ಧೈರ್ಯ ಇಲ್ಲ. 3ನೇ ಬಾರಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಕಳೆದ ಏಳು ವರ್ಷದಿಂದ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಹುದ್ದೆ ದೇಶದ ಪರಮೋಚ್ಚ ಸ್ಥಾನವಾಗಿದೆ. ನನಗೂ ಪ್ರಧಾನಿ ಹುದ್ದೆ ಕೊಟ್ಟರೆ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆ ಅಂತ  ಸೋನಿಯಾ ಗಾಂಧಿಗೆ ಸಿದ್ದರಾಮಯ್ಯ ಹೇಳಬೇಕಿತ್ತು. ಅಲ್ಲಿಗೆ ಹೋಗದೆ ಇಲ್ಲಿಯೇ ಸಿದ್ದರಾಮಯ್ಯ ಏಕೆ ಮೋದಿ ವಿರುದ್ಧ ಗುಡುಗಬೇಕು ಎಂದು ಎಚ್ ವಿಶ್ವನಾಥ್ ಪ್ರಶ್ನಿಸಿದರು.

ಈಗ ಯಡಿಯೂರಪ್ಪ ಮೇಲೆ ಏಕೆ ಕನಿಕರ..?

ಯಡಿಯೂರಪ್ಪ ಆಪ್ತರ ಮೇಲೆ ಐಟಿ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಎಚ್.ವಿಶ್ವನಾಥ್, ಬೃಹತ್ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಐಟಿ, ಇಡಿ ದಾಳಿ ನಡೆಯುತ್ತಿದೆ. ಇದು ಜನರಲ್ಲಿ ಭ್ರಷ್ಟಾಚಾರದ ಅನುಮಾನ ಮೂಡಿಸುತ್ತಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಅವರು ರಾಜಕೀಯದ ವಾಸನೆ ಬರುತ್ತಿದೆ ಅಂತ ಹೇಳಿಕೆ ನೀಡಿದ್ದಾರೆ.  ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ಅಪ್ಪ- ಮಗ ಅಂತ ಏನೆಲ್ಲ ಮಾತನಾಡಿದ್ದೀರಿ ನೆನಪು ಮಾಡಿಕೊಳ್ಳಿ.  ಯಡಿಯೂರಪ್ಪ ಅವರನ್ನು ವಾಚಾಮಗೋಚರವಾಗಿ ತೆಗಳಿದವರು ಈಗ ಹುಸಿ ಪ್ರೇಮ ತೋರಿಸುತ್ತಿದ್ದಾರೆ. ಇಂತಹ ಹೇಳಿಕೆಯಿಂದ ಯಾರಿಗೂ ಲಾಭವಿಲ್ಲ. ಕಾಂಗ್ರೆಸ್, ಜೆಡಿಎಸ್‌ಗೆ ಲಾಭವೂ ಇಲ್ಲ. ಬಿಜೆಪಿಗೆ ನಷ್ಟವೂ ಇಲ್ಲ ಎಂದು ಸಿದ್ದರಾಮಯ್ಯ, ಕುಮಾರಸ್ವಾಮಿಗೆ ತಿರುಗೇಟು ನೀಡದರು.

ಬಿಎಸ್​ವೈ ಓಲೈಕೆಯಿಂದ ಲಿಂಗಾಯತರ ವೋಟು ಸಿಗಲ್ಲ

ಯಡಿಯೂರಪ್ಪ ಅವರ ಓಲೈಕೆಯಿಂದ ಲಿಂಗಾಯತ ಸಮುದಾಯದ ಮತ ಬರಲ್ಲ. ಯಡಿಯೂರಪ್ಪ ಅವರೇ ಸ್ವಾಗತ ಮಾಡಿರುವಾಗ ನಿಮ್ಮದೇನು ಕೊಸರು.? ಇಂತಹ ಬೂಟಾಟಿಕೆ ಮಾತನಾಡುವುದು ಶೋಭಾಯಮಾನ ಅಲ್ಲ. ಸಿಬಿಐ, ಸಿಐಡಿ, ಐಟಿ, ಇಡಿ ಮುಂತಾದವು ಸಾಂವಿಧಾನಿಕ ಸಂಸ್ಥೆಗಳು. ಭ್ರಷ್ಟಾಚಾರದ ಮೇಲೆ ದಾಳಿ ಮಾಡುವಾಗ ನಿಮ್ಮದೇನು ತಕರಾರು? ನೀವು ಭ್ರಷ್ಟಾಚಾರದ ಪರವೋ, ವಿರುದ್ಧವೋ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಸಿದ್ದರಾಮಯ್ಯ ಕಾರಣ ಎಂಬ HDK ಆರೋಪಕ್ಕೆ ತಿರುಗೇಟು ಕೊಟ್ಟ Siddaramaiah

ಸಿದ್ದರಾಮಯ್ಯದು ದ್ವಂದ್ವ ನೀತಿ

ಜೈಲಿನಲ್ಲಿದ್ದ ವ್ಯಕ್ತಿ ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಲಕ್ಷ್ಮಣರಾವ್ ಪೇಶ್ವೆ ಅಂತ ಒಬ್ಬ ಇದ್ದಾನೆ. ಈತ ಕಾವೇರಿ ನೀರಾವರಿ ನಿಗಮದ ಇಂಜಿನಿಯರಿಂಗ್ ಚೀಫ್. ಇದೇ ಪೇಶ್ವೆ 8 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದಾನೆ. ಈತ ಈಗಲೂ ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾನೆ. ಅನಿಲ್ ಕುಮಾರ್ ಮಳಲಿ ಅಂತ ನೀರಾವರಿ ಮಂತ್ರಿಗಳ ಸಲಹೆಗಾರ ಇದ್ದಾನೆ. ಎಂಡಿ ಹಂತದ ಹಲವು ಅಧಿಕಾರಗಳ ವಿರುದ್ಧ ಕೋಟ್ಯಂತರ ರೂ‌‌.ಗಳ ಅಕ್ರಮದ ಆರೋಪಗಳಿವೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 326 ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ನಿಮ್ಮ ಸಚಿವ ಸಂಪುಟ ಆ ತಳ್ಳಿಹಾಕಿದ್ರಿ. ಈಗ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೀರಿ.  ನೀವು ಯಾರ ಪರ ಇದ್ದೀರಿ ಅಂತ ಸ್ಪಷ್ಟವಾಗಿ ಹೇಳಿ ಎಂದು ಸಿದ್ದರಾಮಯ್ಯಗೆ ಎಚ್​.ವಿಶ್ವನಾಥ್​ ಸವಾಲೆಸೆದರು.
Published by:Kavya V
First published: